ನೂತನ ಸರ್ಕಾರ ರಚನೆಗೆ NCP ಸಮ್ಮತಿಯಿಲ್ಲ: ಶರಾದ್ ಪವಾರ್ ಸ್ಪಷ್ಟನೆ

ಮುಂಬೈ: ಬಿಜೆಪಿಗೆ ಅಜಿತ್ ಪವಾರ್ ಬೆಂಬಲಿಸಿದ್ದು NCP ನಿರ್ಣಯವಲ್ಲ. ನನಗೆ ಮಾಹಿತಿ ಇಲ್ಲದೆ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನನಗೆ ಗೊತ್ತಿಲ್ಲದೆ ಸರ್ಕಾರ ರಚಿಸಿದ್ದಾರೆ ಎಂದು ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್ ಕಿಡಿಕಾರಿದ್ದಾರೆ. ಇಂದು ಬೆಳಗ್ಗೆ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಎನ್​ಸಿಪಿಯ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದರು. ನನ್ನ ಸಮ್ಮತಿಯಿಲ್ಲದೆ ಸರ್ಕಾರ ರಚನೆ ಮಾಡಿದ್ದಾರೆಂದು ಶರದ್​ ಪವಾರ್ ಆಕ್ರೋಶ ಹೊರಹಾಕಿದ್ದಾರೆ. Ajit Pawar's decision to […]

ನೂತನ ಸರ್ಕಾರ ರಚನೆಗೆ NCP ಸಮ್ಮತಿಯಿಲ್ಲ:  ಶರಾದ್ ಪವಾರ್ ಸ್ಪಷ್ಟನೆ
ಸಾಧು ಶ್ರೀನಾಥ್​

Updated on: Nov 23, 2019 | 10:45 AM

ಮುಂಬೈ: ಬಿಜೆಪಿಗೆ ಅಜಿತ್ ಪವಾರ್ ಬೆಂಬಲಿಸಿದ್ದು NCP ನಿರ್ಣಯವಲ್ಲ. ನನಗೆ ಮಾಹಿತಿ ಇಲ್ಲದೆ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ನನಗೆ ಗೊತ್ತಿಲ್ಲದೆ ಸರ್ಕಾರ ರಚಿಸಿದ್ದಾರೆ ಎಂದು ಎನ್​ಸಿಪಿ ಮುಖ್ಯಸ್ಥ ಶರದ್​ ಪವಾರ್ ಕಿಡಿಕಾರಿದ್ದಾರೆ.

ಇಂದು ಬೆಳಗ್ಗೆ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಎನ್​ಸಿಪಿಯ ಅಜಿತ್ ಪವಾರ್ ಪ್ರಮಾಣ ವಚನ ಸ್ವೀಕರಿಸಿದ್ದರು. ನನ್ನ ಸಮ್ಮತಿಯಿಲ್ಲದೆ ಸರ್ಕಾರ ರಚನೆ ಮಾಡಿದ್ದಾರೆಂದು ಶರದ್​ ಪವಾರ್ ಆಕ್ರೋಶ ಹೊರಹಾಕಿದ್ದಾರೆ.

Published On - 9:57 am, Sat, 23 November 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us