AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿಲ್ ದೇಶ್​ಮುಖ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್​ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಮಹಾರಾಷ್ಟ್ರ

ಮಾಜಿ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ಬಾಂಬೆ ಹೈಕೋರ್ಟ್​ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವು ಇಂದು (ಏಪ್ರಿಲ್ 6) ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಅನಿಲ್ ದೇಶ್​ಮುಖ್ ವಿರುದ್ಧ ಸಿಬಿಐ ತನಿಖೆಗೆ ಹೈಕೋರ್ಟ್​ ನೀಡಿದ್ದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಮಹಾರಾಷ್ಟ್ರ
ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​ಮುಖ್
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 06, 2021 | 4:19 PM

Share

ಮುಂಬೈ: ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ಅವರ ಆರೋಪಗಳನ್ನು ಆಧರಿಸಿ ಮಾಜಿ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ಬಾಂಬೆ ಹೈಕೋರ್ಟ್​ ಆದೇಶ ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರವು ಇಂದು (ಏಪ್ರಿಲ್ 6) ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. 1988ರ ಬ್ಯಾಚ್​ನ ಐಪಿಎಸ್ ಅಧಿಕಾರಿ ಪರಮ್​ವೀರ್ ಸಿಂಗ್ ಅವರನ್ನು ಈಚೆಗಷ್ಟೇ ಮಹಾರಾಷ್ಟ್ರ ಸರ್ಕಾರವು ಹೋಂ ಗಾರ್ಡ್ಸ್​​ನ ಕಮಾಂಡೆಂಟ್ ಜನರಲ್ ಆಗಿ ವರ್ಗಾವಣೆ ಮಾಡಿತ್ತು. ಪ್ರತಿ ತಿಂಗಳು ₹ 100 ಕೋಟಿಯನ್ನು ಸಂಗ್ರಹಿಸಿಕೊಡುವಂತೆ ಬಂಧಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆಗೆ ಹಿಂದಿನ ಗೃಹಸಚಿವ ಅನಿಲ್ ದೇಶ್​ಮುಖ್ ಸೂಚಿಸಿದ್ದರು ಎಂದು ಪರಮ್​ವೀರ್ ಸಿಂಗ್ ಗಂಭೀರ ಆರೋಪ ಮಾಡಿದ್ದರು.

ಮುಖ್ಯನ್ಯಾಯಮೂರ್ತಿ ದೀಪಾಂಕರ್​ ದತ್ತ ಮತ್ತು ನ್ಯಾಯಮೂರ್ತಿ ಗಿರೀಶ್​ ಕುಲಕರ್ಣಿ ಅವರಿದ್ದ ಬಾಂಬೆ ಹೈಕೋರ್ಟ್​ನ ವಿಭಾಗೀಯ ಪೀಠವು ಸೋಮವಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಕಳೆದ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ಕ್ರಿಮಿನಲ್ ರಿಟ್ ಅರ್ಜಿಯ ವಿಚಾರಣೆಯ ನಂತರ ಹೈಕೋರ್ಟ್​ ಈ ಆದೇಶ ಹೊರಡಿಸಿತ್ತು.

ವಕೀಲೆ ಮತ್ತು ಚಳವಳಿಗಾರ್ತಿ ಜಯಶ್ರೀ ಪಾಟೀಲ್ ಅವರ ಅರ್ಜಿ ವಿಚಾರಣೆಯ ನಂತರ ಈ ಆದೇಶ ಹೊರಡಿಸಲಾಗಿದೆ. ‘ಈ ಪ್ರಕರಣದ ತನಿಖೆಯನ್ನು ಸಿಬಿಐನಂಥ ಸ್ವತಂತ್ರ ಸಂಸ್ಥೆ ನಡೆಸಬೇಕು. ಪ್ರಕರಣ ಸಂಬಂಧ ಈ ಕ್ಷಣವೇ ಸಿಬಿಐ ಎಫ್​ಐಆರ್​ ದಾಖಲಿಸಬೇಕಾದ ಅಗತ್ಯವೇನೂ ಕಾಣಿಸುವುದಿಲ್ಲ. ಆದರೆ ಪ್ರಕರಣದ ತನಿಖೆ ಸಿಬಿಐನಿಂದಲೇ ನಡೆಯುವುದು ಒಳಿತು ಎಂಬ ಅಭಿಪ್ರಾಯ ನಮ್ಮದು’ ಎಂದು ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದರು.

ರಾಜೀನಾಮೆ ನೀಡಿದ್ದ ದೇಶ್​ಮುಖ್ ಸದ್ಯ ಅಮಾನತು ಆಗಿರುವ, ಮುಂಬೈ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ಪ್ರತಿ ತಿಂಗಳು ₹ 100 ಕೋಟಿ ಸಂಗ್ರಹಿಸುವಂತೆ ಒತ್ತಡ ಹಾಕಿದ್ದರು ಎಂಬ ಪ್ರಕರಣಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್ ಅನಿಲ್ ದೇಶ್​ಮುಖ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಎನ್​ಸಿಪಿ ನಾಯಕರೂ ಆಗಿರುವ ಅನಿಲ್ ದೇಶ್​ಮುಖ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 15 ದಿನದ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನಿಡುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿತ್ತು.

ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಪೋಟಕ ಹೊತ್ತಿದ್ದ ಕಾರು ಪತ್ತೆ ಪ್ರಕರಣ ರೋಚಕ ತಿರುವು ಪಡೆದಿದೆ. ಸಸ್ಪೆಂಡ್ ಆಗಿರುವ ಎಎಸ್ಐ​ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್, ಬಾರ್ ಮತ್ತು ರೆಸ್ಟೊರೆಂಟ್​​ಗಳಿಂದ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಇಂದು ಪತ್ರ ಬರೆದಿದ್ದರು. ಈ ಗಂಭೀರ ಆರೋಪದಿಂದ ಮಹಾರಾಷ್ಟ್ರ ಶಿವಸೇನೆ-ಎನ್​ಸಿಪಿ ಮೈತ್ರಿಕೂಟದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿತ್ತು.

(Maharashtra govt moves SC challenging CBI probe against Anil Deshmukh)

ಇದನ್ನೂ ಓದಿ: Anil Deshmukh Resigns: ಅನಿಲ್ ದೇಶ್​ಮುಖ್ ರಾಜೀನಾಮೆ ಅಂಗೀಕಾರ; ಮಹಾರಾಷ್ಟ್ರಕ್ಕೆ ಹೊಸ ಗೃಹ ಸಚಿವ

ಇದನ್ನೂ ಓದಿ: Anil Deshmukh Resigns: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಸೂಚನೆ; ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ

Published On - 4:17 pm, Tue, 6 April 21

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ