ಮಹಾರಾಷ್ಟ್ರದಲ್ಲಿ ಎಲ್ಲರಿಗೂ ಕೊವಿಡ್ ಲಸಿಕೆ ಉಚಿತ; ಸಚಿವ ನವಾಬ್ ಮಲಿಕ್ ಘೋಷಣೆ

Free Covid Vaccine: ಮಹಾರಾಷ್ಟ್ರದ ಎಲ್ಲ ನಾಗರಿಕರಿಗೂ ಕೊವಿಡ್ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಅವರು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಎಲ್ಲರಿಗೂ ಕೊವಿಡ್ ಲಸಿಕೆ ಉಚಿತ; ಸಚಿವ ನವಾಬ್ ಮಲಿಕ್ ಘೋಷಣೆ
ಕೊರೊನಾ ಲಸಿಕೆ (ಸಂಗ್ರಹ ಚಿತ್ರ)
Follow us
guruganesh bhat
|

Updated on:Apr 25, 2021 | 2:47 PM

ಮುಂಬೈ: ಮಹಾರಾಷ್ಟ್ರದಲ್ಲಿ ಎಲ್ಲ ಸಾರ್ವಜನಿಕರಿಗೂ ಉಚಿತವಾಗಿ ಕೊವಿಡ್ ಲಸಿಕೆ ನೀಡುವುದಾಗಿ ಮಹಾರಾಷ್ಟ್ರ ರಾಜ್ಯ ಸರ್ಕಾರದ  ಸಚಿವ ನವಾಬ್ ಮಲಿಕ್ ಘೋಷಿಸಿದ್ದಾರೆ. ಮೇ1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊವಿಡ್ ಲಸಿಕೆ ಒದಗಿಸುವುದಾಗಿ ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಘೋಷಿಸಿತ್ತು. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ವಿಪರೀತ ಹೆಚ್ಚಳ ಕಂಡುಬರುತ್ತಿರುವ ಬೆನ್ನಲ್ಲೇ ಲಸಿಕೆಗೆ ದರ ವಿಧಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಕಲಹಗಳೂ ನಡೆಯುತ್ತಿವೆ. ಈ ಹೊತ್ತಲ್ಲಿ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಈ ಮಹತ್ವದ ಘೋಷಣೆ ಮಾಡಿದ್ದಾರೆ.

ಲಸಿಕೆಗೆ ದರ ನಿಗದಿಪಡಿಸುವ ಕುರಿತು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನಡುವೆ ಹಗ್ಗ ಜಗ್ಗಾಟ ನಡೆಯುತ್ತಿದೆ. ಕೊವಿಶೀಲ್ಡ್​ ಲಸಿಕೆ ಮೇ 1 ರಿಂದ ದುಬಾರಿ ಆಗಲಿದೆ. ಈಗ ಕೊವಿಶೀಲ್ಡ್​ ಲಸಿಕೆ ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿದೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಇದನ್ನು ರೂ 250 ಕ್ಕೆ ನೀಡಲಾಗುತ್ತಿದೆ. ಮೇ 1ರಿಂದ 18 ವರ್ಷ ಮೇಲ್ಪಟ್ಟವರಿಗೂ ಕೊರೊನಾ ಲಸಿಕೆ ನೀಡುವುದರಿಂದ ಲಸಿಕೆ ಉತ್ಪಾದಕರಿಂದ ನೇರವಾಗಿ ಕೊರೊನಾ ಲಸಿಕೆ ಖರೀದಿಸಲು ರಾಜ್ಯ ಸರ್ಕಾರಗಳಿಗೆ ಅನುವು ಮಾಡಿಕೊಡುವುದಾಗಿ ಕೇಂದ್ರ ಸರ್ಕಾರ ತಿಳಿಸಿತ್ತು.

ಸೀರಂ ಇನ್ಸ್​​ಟಿಟ್ಯೂಟ್​ ಆಫ್​ ಇಂಡಿಯಾ ಉತ್ಪಾದಿಸುವ ಕೋವಿಶೀಲ್ಡ್ ಲಸಿಕೆಯನ್ನು ಇನ್ನು ಮುಂದೆ, ಅಂದರೆ ಮೇ 1 ರಿಂದ, ಮೂರು ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಸೀರಂ ಇನ್ಸ್​​ಟಿಟ್ಯೂಟ್​ನ ಮುಖ್ಯಸ್ಥ ಅದಾರ್​ ಪೂನಾವಾಲಾ ಹೇಳಿದ್ದಾರೆ. ತಾನು ಉತ್ಪಾದಿಸುವ ಲಸಿಕೆಯಲ್ಲಿ 590 ಪ್ರತಿಶತ ಲಸಿಕೆಯನ್ನು ಕೇಂದ್ರ ಸರಕಾರಕ್ಕೆ ರೂ 150 ಕ್ಕೆ ನೀಡಲಾಗುವುದು. ಉಳಿದ 50 ಪ್ರತಿಶತ ಲಸಿಕೆಯಲ್ಲಿ ಅರ್ಧದಷ್ಟನ್ನು ರಾಜ್ಯ ಸರಕಾರಗಳಿಗೆ ತಲಾ ರೂ 400 ಕ್ಕೂ ಮತ್ತು ಖಾಸಗೀ ಆಸ್ಪತ್ರೆಗಳಿಗೆ ರೂ 600 ಕ್ಕೆ ಮಾರಾಟ ಮಾಡಲು ನಿರ್ಧರಿಸುವುದಾಗಿ ಅವರು ಇಂಗ್ಲಿಷ್​ ಟಿವಿ ಚಾನೆಲ್​ ಎನ್​ಡಿ ಟಿವಿಗೆ ಹೇಳಿದ್ದರು. ಜತೆಗೆ ವಿದೇಶಿ ಲಸಿಕೆಗಳಿಗಿಂತ ತಮ್ಮ ಕಂಪೆನಿಯ ಲಸಿಕೆ ಕಡಿಮೆ ದರದಲ್ಲಿ ಸಿಗುತ್ತಿದೆ ಎಂಬುದನ್ನು ಜನ ಗಮನಿಸಬೇಕು. ವಿದೇಶಿ ಲಸಿಕೆ ₹ 750 ರಿಂದ ರೂ 1,500 ವೆಚ್ಚವಾಗುತ್ತದೆ. ಅದಕ್ಕೆ ಹೊಲಿಸಿದರೆ, ಕೊವಿಶೀಲ್ಡ್​ ಕಡಿಮೆ ದರದಲ್ಲಿ ಸಿಗುತ್ತದೆ, ಎಂದು ಹೇಳಿದ್ದಾರೆ. ಸರ್ಕಾರದ ಹೊಸ ನೀತಿಯ ಭಾಗವಾಗಿ, ಶೇಕಡಾ 50 ರಷ್ಟು ಲಸಿಕೆ ಪ್ರಮಾಣವನ್ನು ಕೇಂದ್ರಕ್ಕೆ ಮೀಸಲಿಡಲಾಗುವುದು ಮತ್ತು ಉಳಿದವುಗಳನ್ನು ರಾಜ್ಯ ಮತ್ತು ಖಾಸಗಿ ಆಸ್ಪತ್ರೆಗಳ ನಡುವೆ ಹಂಚಲಾಗುತ್ತದೆ ಎಂದು ಅವರು ತಿಳಿಸಿದ್ದರು.

ಮಹಾರಾಷ್ಟ್ರದಲ್ಲಿ ಕೊವಿಡ್ ರೋಗಿಗಳು ಆಕ್ಸಿಜನ್ ಲಭಿಸದೆ ಸಂಕಷ್ಟಕ್ಕೀಡಾಗಿರುವ ಹೊತ್ತಲ್ಲಿ ಇದೇ ಮೊದಲ ಬಾರಿ ಆಕ್ಸಿಜನ್ ಎಕ್ಸ್​ಪ್ರೆಸ್ ಗುರುವಾರ ವಿಶಾಖಪಟ್ಟಣಂನಿಂದ ಮಹಾರಾಷ್ಟ್ರಕ್ಕೆ ಆಕ್ಸಿಜನ್ ಸಾಗಿಸಿದೆ.ಆಂಧ್ರ ಪ್ರದೇಶದ ರಾಷ್ಟ್ರೀಯ ಇಸ್ಪತ್ ನಿಗಮ್ ( ಆರ್‌ಐಎನ್‌ಎಲ್) ನಿಂದ ಗುರುವಾರ ಆಕ್ಸಿಜನ್ ಟ್ಯಾಂಕರ್ ಹೊತ್ತು ಈ ರೈಲು ಮಹಾರಾಷ್ಟ್ರಕ್ಕೆ ಹೊರಟಿತ್ತು. ಮಹಾರಾಷ್ಟ್ರದಿಂದ 7 ಖಾಲಿ ಟ್ಯಾಂಕರ್​ಗಳು ಇಂದು ಬೆಳಗ್ಗೆ ವಿಶಾಖಪಟ್ಟಣದ ರಾಷ್ಟ್ರೀಯ ಇಸ್ಪತ್ ನಿಗಮ್ ತಲುಪಿದೆ. ಬೆಳಗ್ಗಿನಿಂದ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ (LMO) ಇದಕ್ಕೆ ತುಂಬಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಗುರುವಾರ ತಮ್ಮ ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ

(Maharashtra govt will vaccinate its all citizens free of cost says Maharashtra minister Nawab Malik

Published On - 2:29 pm, Sun, 25 April 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್