AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Heatstroke : ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 12ರಿಂದ ಸಂಜೆ 5ರ ನಡುವೆ ಹೊರಾಂಗಣ ಕಾರ್ಯಕ್ರಮಗಳಿಗೆ ನಿಷೇಧ

ಮಹಾರಾಷ್ಟ್ರ(Maharashtra)ದಲ್ಲಿ ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯ ನಡುವೆ ಎಲ್ಲಾ ಹೊರಾಂಗಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ ಎಂದು ಸರ್ಕಾರ ಸೂಚನೆ ನೀಡಿದೆ.

Maharashtra Heatstroke : ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 12ರಿಂದ ಸಂಜೆ 5ರ ನಡುವೆ ಹೊರಾಂಗಣ ಕಾರ್ಯಕ್ರಮಗಳಿಗೆ ನಿಷೇಧ
HeatstrokeImage Credit source: Hindustan Times
ನಯನಾ ರಾಜೀವ್
|

Updated on: Apr 19, 2023 | 3:20 PM

Share

ಮಹಾರಾಷ್ಟ್ರ(Maharashtra)ದಲ್ಲಿ ಮಧ್ಯಾಹ್ನ 12 ರಿಂದ ಸಂಜೆ 5 ಗಂಟೆಯ ನಡುವೆ ಎಲ್ಲಾ ಹೊರಾಂಗಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವಂತಿಲ್ಲ ಎಂದು ಸರ್ಕಾರ ಸೂಚನೆ ನೀಡಿದೆ. ಮಹಾರಾಷ್ಟ್ರದಲ್ಲಿ ಇದೇ ಭಾನುವಾರ ನಡೆದ ಸಮಾವೇಶವೊಂದರಲ್ಲಿ ಭಾಗವಹಿಸಿದ್ದವರಲ್ಲಿ 13 ಮಂದಿ ಅತಿಯಾದ ಶಾಖದಿಂದ ಸಾವನ್ನಪ್ಪಿದ್ದರು. ಮುಂಬೈನಲ್ಲಿ ರಾಜ್ಯ ಸರ್ಕಾರ ಆಯೋಜಿಸಿದ್ದ ಮಹಾರಾಷ್ಟ್ರ ಭೂಷಣ ಪ್ರಶಸ್ತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹದಿಮೂರು ಮಂದಿ ಬಿಸಿಲ ತಾಪದಿಂದ ಮೃತಪಟ್ಟಿದ್ದಾರೆ.

ಈ ವರ್ಷ, ಹೋರಾಟಗಾರ ಅಪ್ಪಾಸಾಹೇಬ ಧರ್ಮಾಧಿಕಾರಿಗೆ ಪ್ರಶಸ್ತಿಯನ್ನು ನೀಡಲಾಯಿತು ಮತ್ತು ಅವರ ಲಕ್ಷಾಂತರ ಅನುಯಾಯಿಗಳು ತೆರೆದ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಅಂದು ಆ ಪ್ರದೇಶದಲ್ಲಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್​ನಷ್ಟಿತ್ತು.

ಸಮಾರಂಭದಲ್ಲಿ ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಪ್ರಶಸ್ತಿ ಸಮಾರಂಭಕ್ಕೆ ಆಗಮಿಸಿದ್ದರು. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ ಪರಿಹಾರ ನೀಡಲಾಗಿದೆ. ಆದರೆ ಪ್ರತಿಪಕ್ಷಗಳು ಕಾರ್ಯಕ್ರಮದ ಯೋಜನೆ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮತ್ತಷ್ಟು ಓದಿ: Heatwave Alert: ಯಾವ್ಯಾವ ರಾಜ್ಯಗಳಲ್ಲಿ ತಾಪಮಾನ ಹೆಚ್ಚಳ, ಎಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಬಿಸಿಲು ತೀವ್ರವಾಗಿ ಹೆಚ್ಚಾಗುತ್ತಿರುವುದು ಶಿಶುಗಳು, ವೃದ್ಧರು ಹಾಗೂ ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹೆಚ್ಚು ಅಪಾಯಕಾರಿಯಾಗಿದೆ. ಇದರಿಂದ ಪಾರಾಗಲು ಬಾಯಾರಿಕೆಯಾಗದಿದ್ದರೂ ಹೆಚ್ಚಿನ ನೀರು ಕುಡಿಯುವುದು, ಒಆರ್ ಎಸ್ ಅಥವಾ ಮನೆಯಲ್ಲಿ ತಯಾರಿಸಿದ ಪಾನೀಯಗಳನ್ನು ಕುಡಿಯುವುದು ಸೇರಿದಂತೆ ಹಲವು ಕ್ರಮಗಳನ್ನು ಅನುಸರಿಸುವ ಮೂಲಕ ಬಿಸಿಲಿನಿಂದಾಗುವ ಪರಿಣಾಮಗಳಿಂದ ತಪ್ಪಿಸಿಕೊಳ್ಳಬೇಕು ಎಂದು ಐಎಂಪಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ