ಮುಂಬೈ: ಸದ್ಯ ಅಮಾನತು ಆಗಿರುವ, ಮುಂಬೈ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಪ್ರತೀ ತಿಂಗಳು ₹ 100 ಕೋಟಿ ಸಂಗ್ರಹಿಸುವಂತೆ ಒತ್ತಡ ಹಾಕಿದ್ದರು ಎಂಬ ಪ್ರಕರಣಕ್ಕೆ ಸಂಬಂಧಿಸಿ ಬಾಂಬೆ ಹೈಕೋರ್ಟ್ ಅನಿಲ್ ದೇಶ್ಮುಖ್ ವಿರುದ್ಧ ತನಿಖೆಗೆ ಆದೇಶಿಸಿತ್ತು. ಈ ಬೆನ್ನಲ್ಲೇ ಎನ್ಸಿಪಿ ನಾಯಕರೂ ಆಗಿರುವ ಅನಿಲ್ ದೇಶ್ಮುಖ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಒತ್ತಡ ಆರೋಪಿಸಿ ಪತ್ರ ಬರೆದಿದ್ದ ಪರಮ್ವೀರ್ ಸಿಂಗ್ ಪ್ರಕರಣವನ್ನು ಸಿಬಿಐ ಮೆಟ್ಟಿಲೇರಿದೆ. 15 ದಿನದ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನಿಡುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ. ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ಇನ್ನೂ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಎಫ್ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿತ್ತು.
ಕೆಲ ದಿನಗಳ ಹಿಂದೆ ಮುಕೇಶ್ ಅಂಬಾನಿ ಮನೆ ಮುಂದೆ ಸ್ಪೋಟಕ ಹೊತ್ತಿದ್ದ ಕಾರು ಪತ್ತೆ ಪ್ರಕರಣ ರೋಚಕ ತಿರುವು ಪಡೆದಿತ್ತು. ಸಸ್ಪೆಂಡ್ ಆಗಿರುವ ಎಎಸ್ಐ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್, ಬಾರ್ ಮತ್ತು ರೆಸ್ಟೊರೆಂಟ್ಗಳಿಂದ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ವೀರ್ ಸಿಂಗ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಇಂದು ಪತ್ರ ಬರೆದಿದ್ದರು. ಈ ಗಂಭೀರ ಆರೋಪದಿಂದ ಮಹಾರಾಷ್ಟ್ರ ಶಿವಸೇನೆ-ಎನ್ಸಿಪಿ ಮೈತ್ರಿಕೂಟದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿತ್ತು.
ಇದನ್ನೂ ಓದಿ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸೂಚನೆ
ಇದನ್ನೂ ಓದಿ: ಅನಿಲ್ ದೇಶ್ಮುಖ್ ಅಪರಾಧ ತಿಳಿದೂ ಎಫ್ಐಆರ್ ದಾಖಲಿಸಿಲ್ಲ ಏಕೆ?; ಪರಮ್ವೀರ್ ಸಿಂಗ್ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ
Published On - 2:59 pm, Mon, 5 April 21