Maharashtra: ರಾಯಗಢದಲ್ಲಿ ಭೂಕುಸಿತ, ಸಾವಿನ ಸಂಖ್ಯೆ 22ಕ್ಕೆ ಏರಿಕೆ

ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್​​ಡಿಆರ್​ಎಫ್​​ ಅಧಿಕಾರಿಗಳು ತಿಳಿಸಿದ್ದಾರೆ.

Maharashtra: ರಾಯಗಢದಲ್ಲಿ ಭೂಕುಸಿತ, ಸಾವಿನ ಸಂಖ್ಯೆ 22ಕ್ಕೆ ಏರಿಕೆ
ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭೂಕುಸಿತ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 22, 2023 | 1:12 PM

ಮುಂಬೈ, ಜು.22: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್​​ಡಿಆರ್​ಎಫ್​​ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ ಅವಶೇಷಗಳಡಿಯಲ್ಲಿ ಸಿಲುಕಿರುವ ಜನರ ರಕ್ಷಣೆ ಕಾರ್ಯಚರಣೆ ಮುಂದುವರಿದಿದೆ. ರಕ್ಷಣಾ ಕಾರ್ಯಚರಣೆ ಮೂರನೇ ದಿನಕ್ಕೆ ಮುಂದುವರಿದಿದ್ದು, ಒಟ್ಟು 22 ಜನ ಸಾವನ್ನಪ್ಪಿದ್ದಾರೆ. 86 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರೀ ಮಳೆಯಿಂದ ಶುಕ್ರವಾರ (ಜು.22) ರಕ್ಷಣಾ ಕಾರ್ಯಚರಣೆ ಸ್ಥಗಿತಗೊಂಡಿತು. ನಾಲ್ಕು ಎನ್‌ಡಿಆರ್‌ಎಫ್ ತಂಡಗಳು ಮತ್ತು ಇತರ ಏಜೆನ್ಸಿಗಳು, ಸ್ಥಳೀಯರು ಇಂದು ಬೆಳಿಗ್ಗೆ ಕಾರ್ಯಾಚರಣೆಯನ್ನು ಪುನರಾರಂಭಿಸಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಪ್ರದೇಶದಲ್ಲಿ ಒಟ್ಟು 48 ಕುಟುಂಬಗಳು ವಾಸವಾಗಿದ್ದು, 17 ಮನೆಗಳು ಭೂಕುಸಿತದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದೆ. ರಾಯಗಢ ಜಿಲ್ಲಾ ವಿಪತ್ತು ನಿರ್ವಹಣಾ ಕಚೇರಿಯ ಪ್ರಕಾರ, 48 ಕುಟುಂಬಗಳ 229 ಜನರಲ್ಲಿ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ. ಇನ್ನೂ 111 ಮಂದಿ ಸುರಕ್ಷಿತವಾಗಿದ್ದಾರೆ, 86 ಜನರನ್ನು ಇನ್ನೂ ಪತ್ತೆ ನಡೆಸಲಾಗುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: ಖಲಾಪುರ ಭೂಕುಸಿತ, ಇದುವರೆಗೆ 16 ಸಾವು, 100 ಮಂದಿಗೆ ಗಾಯ, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ

ಗಾಯಗೊಂಡಿರುವವರನ್ನು ನಿರಾಶ್ರಿತರ ಶಿಬಿರಗಳಲ್ಲಿ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಚರಣೆ ಬಗ್ಗೆ ರಾಜ್ಯ ಸರ್ಕಾರ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯುತ್ತಿದೆ. ಭೂಕುಸಿತ ಘಟನೆಯ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಭೂಕುಸಿತ ಪೀಡಿತ ಪ್ರದೇಶಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ಶುಕ್ರವಾರ ರಾಜ್ಯ ವಿಧಾನಸಭೆಗೆ ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್