ಗಡಿ ವಿವಾದ: ಅಮಿತ್​ ಶಾ ಭೇಟಿಯಾದ ಮಹಾರಾಷ್ಟ್ರ ನಾಯಕರು, ಕರ್ನಾಟಕದ ವಿರುದ್ಧ ದೂರು

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬಗೆಹರಿಸಲು ಅಮಿತಾ ಶಾ ಮಧ್ಯಸ್ಥಿಕೆ ವಹಿಸಬೇಕೆಂದು ಮಹಾರಾಷ್ಟ್ರ ನಾಯಕರು ಒತ್ತಾಯಿಸುತ್ತಿದ್ದಾರೆ.

ಗಡಿ ವಿವಾದ: ಅಮಿತ್​ ಶಾ ಭೇಟಿಯಾದ ಮಹಾರಾಷ್ಟ್ರ ನಾಯಕರು, ಕರ್ನಾಟಕದ ವಿರುದ್ಧ ದೂರು
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಅಮಿತ್​ ಶಾರನ್ನ ಭೇಟಿಯಾದ ಮಹಾರಾಷ್ಟ್ರ ನಾಯಕರು
Follow us
| Updated By: ವಿವೇಕ ಬಿರಾದಾರ

Updated on:Dec 09, 2022 | 4:57 PM

ನವದೆಹಲಿ: ಮಹಾರಷ್ಟ್ರ (Maharashtra) ಮತ್ತೆ ಗಡಿ ವಿವಾದ ಮುನ್ನಲೆಗೆ ತಂದಿದ್ದು, ಕಳೆದ ಹತ್ತು ಹದಿನೈದು ದಿನಗಳಿಂದ ಬೆಳಗಾವಿ (Belagavi) ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ವಿವಾದದ ಕುರಿತು ಎನ್​​ಸಿಪಿ ಸಂಸದೆ ಸುಪ್ರಿಯಾ ಸುಳೆ (NCP MP Supriya Sule) (ಡಿ.7) ಲೋಕಸಭೆಯಲ್ಲಿ ಪ್ರಸ್ತಾಪಿಸಿ ಮಹಾರಾಷ್ಟ್ರದ ವಿರುದ್ಧ ಕರ್ನಾಟಕ ಸರ್ಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪ ಮಾಡಿದ್ದರು. ಇದೇ ವಿಚಾರವಾಗಿ ಸುಪ್ರಿಯಾ ಸುಳೆ ಮತ್ತು ಮಹಾರಾಷ್ಟ್ರದ ಕೆಲ ನಾಯಕರು ಇಂದು (ಡಿ.9) ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಅವರನ್ನು ಭೇಟಿಯಾಗಿ ಗಡಿ ವಿವಾದದ ಕುರಿತು ಪ್ರಸ್ತಾಪಿಸಿದರು.

ಇದನ್ನೂ ಓದಿ: ಬೆಳಗಾವಿಯಲ್ಲಿ ಗಡಿ ಕಿಚ್ಚು: ಬೊಮ್ಮಾಯಿಗೆ ಕರೆ ಮಾಡಿ ಶಾಂತಿ ಮಂತ್ರ ಪಠಿಸಿದ ಮಹಾರಾಷ್ಟ್ರ ಸಿಎಂ ಶಿಂಧೆ

ಬಳಿಕ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ‌ ಬಗ್ಗೆ ಪ್ರಸ್ತಾಪ ಮಾಡಿದ್ದೇವೆ. ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವುದಾಗಿ ಅಮಿತ್​ ಶಾ ಹೇಳಿದ್ದಾರೆ. ಗಡಿ ಸಮಸ್ಯೆಗೆ ಕ್ರಮ ಕೈಗೊಳ್ಳಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ. ಸರ್ವಪಕ್ಷ ಸಭೆ ಕರೆಯುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಒತ್ತಾಯಿಸುತ್ತೇವೆ ಎಂದು ಹೇಳಿದರು.

ಇದನ್ನೂ ಓದಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಬಿಸಿಬಿಸಿ ಚರ್ಚೆ

ಲೋಕಸಭೆಯಲ್ಲಿ ಗಡಿ ವಿವಾದ ಪ್ರಸ್ತಾಪಸಿದ ಸಂಸದ ಧರೀಯಶೀಲ್​ ಮಾನೆ

ದೇಶದಲ್ಲಿ ಎಲ್ಲರೂ ಒಂದೇ ಎಂದು ಭಾವಿಸಲಾಗಿದೆ. ಆದರೆ ಗಡಿ ಭಾಗಗಳಲ್ಲಿ ಶಾಂತಿ ಕದಡುವ ಪರಿಸ್ಥಿತಿ ಇದೆ. ಗಡಿ ಭಾಗದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಕನ್ನಡ ಸಂಘಟನೆಗಳು ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿವೆ. ಮರಾಠಿಗರು ಆತಂಕದಿಂದ ಜೀವನ ನಡೆಸುವಂತಾಗಿದೆ. ಕರ್ನಾಟಕ ಸಿಎಂ ಬೊಮ್ಮಾಯಿ ಪ್ರಚೋದನಾಕಾರಿ ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು. ಆಗ ಮಾತ್ರ ಅಲ್ಲಿನ ಪರಿಸ್ಥಿತಿ ತಿಳಿಗೊಳಿಸಲು ಸಾಧ್ಯವಿದೆ. ಎರಡು ರಾಜ್ಯಗಳ ಸಿಎಂಗಳನ್ನು ಒಟ್ಟುಗೂಡಿಸಿ ಸಮಸ್ಯೆ ಬಗೆಹರಿಸಿ ಎಂದು ಮಹಾರಾಷ್ಟ್ರ ಸಂಸದ ಧರೀಯಶೀಲ್​ ಮಾನೆ ಲೋಕಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:15 pm, Fri, 9 December 22

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ