ಮಹಾರಾಷ್ಟ್ರ: ಅಂಗೈಯಲ್ಲಿತ್ತು ಸಾಕ್ಷಿ, ವೈದ್ಯೆ ಮೇಲೆ ಅತ್ಯಾಚಾರ, ಆತ್ಮಹತ್ಯೆಗೆ ಪ್ರಚೋದನೆ, ಪೊಲೀಸ್ ಅಧಿಕಾರಿಯ ಬಂಧನ

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ವೈದ್ಯೆ(Doctor)ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬದನೆ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಪ್ರಕರಣ ದಾಖಲಾಗಿದ್ದು, ನಂತರ ಬದ್ನೆ ತಲೆಮರೆಸಿಕೊಂಡಿದ್ದರು. ಬದ್ನೆ ಫಲ್ಟನ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶರಣಾದರು, ನಂತರ ಅವರನ್ನು ಬಂಧಿಸಲಾಯಿತು ಎಂಬುದು ತಿಳಿದುಬಂದಿದೆ.

ಮಹಾರಾಷ್ಟ್ರ: ಅಂಗೈಯಲ್ಲಿತ್ತು ಸಾಕ್ಷಿ, ವೈದ್ಯೆ ಮೇಲೆ ಅತ್ಯಾಚಾರ, ಆತ್ಮಹತ್ಯೆಗೆ ಪ್ರಚೋದನೆ, ಪೊಲೀಸ್ ಅಧಿಕಾರಿಯ ಬಂಧನ
ಪೊಲೀಸ್

Updated on: Oct 26, 2025 | 8:14 AM

ಸತಾರಾ, ಅಕ್ಟೋಬರ್ 26: ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ವೈದ್ಯೆ(Doctor)ಮೇಲೆ ನಡೆದ ಅತ್ಯಾಚಾರ ಹಾಗೂ ಆಕೆಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸಬ್-ಇನ್ಸ್‌ಪೆಕ್ಟರ್ ಗೋಪಾಲ್ ಬದನೆ ಅವರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬದನೆ ಮತ್ತು ಇನ್ನೊಬ್ಬ ವ್ಯಕ್ತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆಯ ಪ್ರಕರಣ ದಾಖಲಾಗಿದ್ದು, ನಂತರ ಬದನೆ ತಲೆಮರೆಸಿಕೊಂಡಿದ್ದರು. ಬದನೆ ಫಲ್ಟನ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಶರಣಾದರು, ನಂತರ ಅವರನ್ನು ಬಂಧಿಸಲಾಯಿತು ಎನ್ನುವ ಮಾಹಿತಿ ಲಭ್ಯವಾಗಿದೆ.

28 ವರ್ಷದ ವೈದ್ಯೆಯ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಸಾಫ್ಟ್‌ವೇರ್ ಎಂಜಿನಿಯರ್ ಪ್ರಶಾಂತ್ ಬಂಕರ್ ಅವರನ್ನು ಬಂಧಿಸಿದ್ದರು. ಮೃತರು ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಬೀಡ್ ಜಿಲ್ಲೆಯ ನಿವಾಸಿಯಾಗಿದ್ದು, ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಗುರುವಾರ ರಾತ್ರಿ ಫಾಲ್ಟನ್ ಪಟ್ಟಣದ ಹೋಟೆಲ್ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆಯಾಗಿದೆ.

ಆಕೆಯ ಅಂಗೈಯಲ್ಲಿ ಬರೆದಿರುವ ಆತ್ಮಹತ್ಯೆ ಪತ್ರದಲ್ಲಿ ವೈದ್ಯೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಪೊಲೀಸ್ ಸಬ್​ ಇನ್ಸ್​ಪೆಕ್ಟರ್ ಗೋಪಾಲ್ ಬದನೆ ತನ್ನ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ ಮತ್ತು ಬಂಕರ್ ಮಾನಸಿಕವಾಗಿ ಕಿರುಕುಳ ನೀಡಿದ್ದರು ಎಂದು ಬರೆಯಲಾಗಿತ್ತು.

ಮತ್ತಷ್ಟು ಓದಿ: ವೈದ್ಯರ ಹಾಸ್ಟೆಲ್​ ಟಾಯ್ಲೆಟ್​​​ ಕಮೋಡ್​​ನೊಳಗೆ ನಾಗರಹಾವು!

ಫಾಲ್ಟನ್‌ನಲ್ಲಿ ಇಬ್ಬರೂ ಆರೋಪಿಗಳ ವಿರುದ್ಧ ಅತ್ಯಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಾಗಿದೆ. ಪೊಲೀಸರ ಪ್ರಕಾರ, ಬಂಕರ್ ವೈದ್ಯೆ ವಾಸಿಸುತ್ತಿದ್ದ ಮನೆಯ ಮಾಲೀಕರ ಮಗ. ತನಿಖೆಯ ಸಮಯದಲ್ಲಿ ಪ್ರಕರಣದಲ್ಲಿ ಬದನೆ ಹೆಸರು ಕಾಣಿಸಿಕೊಂಡ ನಂತರ ಅವರನ್ನು ಅಮಾನತುಗೊಳಿಸಲಾಗಿದೆ.

ಶುಕ್ರವಾರ ರಾತ್ರಿ ಬೀಡ್​ನ ವಡ್ವಾನಿ ತಹಸಿಲ್​ನಲ್ಲಿರುವ ಅವರ ಪೂರ್ವಜರ ಮನೆಯಲ್ಲಿ ವೈದ್ಯರ ಅಂತ್ಯಕ್ರಿಯೆ ನಡೆಸಲಾಯಿತು. ವೈದ್ಯರ ಸಂಬಂಧಿಕರು ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿದರು.ಕಿರುಕುಳದ ಬಗ್ಗೆ ಆಕೆ ಹಲವು ಬಾರಿ ದೂರು ನೀಡಿದ್ದರೂ ಕೂಡ ಯಾರೂ ಕಿವಿಗೊಡಲಿಲ್ಲ.

ಯುವತಿಯ ಕುಟುಂಬದ ಪ್ರಕಾರ, ಅವರು ಎಂಡಿ (ಡಾಕ್ಟರ್ ಆಫ್ ಮೆಡಿಸಿನ್) ಕೋರ್ಸ್ ಮಾಡಲು ಬಯಸಿದ್ದರು ಮತ್ತು ಅದಕ್ಕಾಗಿ ತಯಾರಿ ನಡೆಸುತ್ತಿದ್ದರು. ಎಂಬಿಬಿಎಸ್ ಕೋರ್ಸ್‌ಗಾಗಿ ತೆಗೆದುಕೊಂಡಿದ್ದ 3 ಲಕ್ಷ ರೂಪಾಯಿ ಸಾಲವನ್ನು ಇನ್ನೂ ಮರುಪಾವತಿಸಲಾಗಿಲ್ಲ ಎಂದು ಆಕೆಯ ಚಿಕ್ಕಪ್ಪ ಪಿಟಿಐಗೆ ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us