ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿ ಜೈಲಿನಲ್ಲೇ ಆತ್ಮಹತ್ಯೆ

ಬಾಲಕಿ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿ ಜೈಲು ಸೇರಿದ್ದ ಆರೋಪಿ ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಕರಣದ ಪ್ರಮುಖ ಆರೋಪಿ ವಿಶಾಲ್ ಗಾವ್ಲಿ ಭಾನುವಾರ ಬೆಳಗ್ಗೆ ತಲೋಜಾ ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಆರೋಪಿ ತಲೋಜಾ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೈಲು ಅಧಿಕಾರಿಗಳ ಪ್ರಕಾರ, ಗಾವ್ಲಿ ಹಿಂದಿನ ಸಂಜೆ ಊಟ ಮಾಡಿದ್ದ ಮತ್ತು ಬೆಳಗಿನ ಜಾವ 3.30 ರ ಸುಮಾರಿಗೆ ಶೌಚಾಲಯಕ್ಕೆ ಹೋಗುತ್ತಿರುವುದು ಕಂಡುಬಂದಿದೆ.

ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ, ಆರೋಪಿ ಜೈಲಿನಲ್ಲೇ ಆತ್ಮಹತ್ಯೆ
ಜೈಲು
Image Credit source: Harvard Gazette

Updated on: Apr 13, 2025 | 12:15 PM

ಕಲ್ಯಾಣ್, ಏಪ್ರಿಲ್ 13: ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣದಲ್ಲಿ ಆರೋಪಿ ಜೈಲಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಕಲ್ಯಾಣ್​ನಲ್ಲಿ ನಡೆದಿದೆ. ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ(Kidnap), ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿಶಾಲ್ ಗಾವ್ಲಿ ಭಾನುವಾರ ಬೆಳಗ್ಗೆ ತಲೋಜಾ ಜೈಲಿನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ಮೂರು ತಿಂಗಳಿಗೂ ಹೆಚ್ಚು ಕಾಲ ಬಂಧನದಲ್ಲಿದ್ದ ಆರೋಪಿ ತಲೋಜಾ ಕೇಂದ್ರ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೈಲು ಅಧಿಕಾರಿಗಳ ಪ್ರಕಾರ, ಗಾವ್ಲಿ ಹಿಂದಿನ ಸಂಜೆ ಊಟ ಮಾಡಿದ್ದ ಮತ್ತು ಬೆಳಗಿನ ಜಾವ 3.30 ರ ಸುಮಾರಿಗೆ ಶೌಚಾಲಯಕ್ಕೆ ಹೋಗುತ್ತಿರುವುದು ಕಂಡುಬಂದಿದೆ.

ಬೆಳಗಿನ ಜಾವ 4.00 ಗಂಟೆಯ ಸುಮಾರಿಗೆ ಮತ್ತೊಬ್ಬ ಕೈದಿ ಜೈಲಿನ ಶೌಚಾಲಯದಲ್ಲಿ ಈತ ನೇಣುಹಾಕಿಕೊಂಡಿರುವುದನ್ನು ಕಂಡು ಕೂಡಲೇ ಅಧಿಕಾರಿಗಳಿಗೆ ತಿಳಿಸಿದ್ದಾರೆ. ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜೆಜೆ ಆಸ್ಪತ್ರೆಗೆ ಕಳುಹಿಸಲಾಯಿತು. ಡಿಸೆಂಬರ್ 2024 ರಲ್ಲಿ ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಾವ್ಲಿ ವಿಚಾರಣೆ ಎದುರಿಸುತ್ತಿದ್ದ.

ಇದನ್ನೂ ಓದಿ
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಪತ್ನಿ ಸಾಕ್ಷಿ ಗಾವ್ಲಿ ಅಪರಾಧಕ್ಕೆ ಸಾಕ್ಷಿಯಾಗಿದ್ದಳು. ಗೌಲಿಯ ಮಾನಸಿಕ ಒತ್ತಡ, ಅವರ ವಿರುದ್ಧ ಪತ್ನಿ ನೀಡಿದ ಸಾಕ್ಷ್ಯದಿಂದ ಆತನಿಗೆ ಹೆಚ್ಚು ನೋವಾಗಿರಬಹುದು ಎಂದು ಹೇಳಲಾಗುತ್ತಿದೆ. 2024ರ ಡಿಸೆಂಬರ್ 23ರಂದು ವಿಶಾಲ್ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದ, ಆಕೆಯ ಮೇಲೆ ಅತ್ಯಾಚಾರ ಮಾಡಿ, ಬಳಿಕ ಕೊಲೆ ಮಾಡಿದ್ದ.

ಮತ್ತಷ್ಟು ಓದಿ: ಅಯೋಧ್ಯೆ: ಪತ್ನಿ, ಮೂರು ವರ್ಷದ ಮಗುವನ್ನು ಕೊಂದು ವ್ಯಕ್ತಿ ಪರಾರಿ

ಪತ್ನಿ ಸಾಕ್ಷಿ ಸಹಾಯದಿಂದಲೇ ಆತ ಶವವನ್ನು ಭಿವಾಂಡಿಯ ಬಾಪಗಾವ್ ಪ್ರದೇಶದಲ್ಲಿ ವಿಲೇವಾರಿ ಮಾಡಿದ್ದ. ಆತನನ್ನು ಬಂಧಿಸಿದ ಬಳಿಕ ಇದೇ ಮೊದಲಲ್ಲ ಆತನಿಗೆ ಮಕ್ಕಳಿಗೆ ಕಿರುಕುಳ ನೀಡಿರುವ ಇತಿಹಾಸವಿದೆ ಎಂಬುದು ತಿಳಿದುಬಂದಿತ್ತು. ಆತನ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದವು. ಬಾಲಕಿಯ ಕುಟುಂಬ ಪ್ರತಿಭಟನೆ ನಡೆಸಿ, ಆರೋಪಿಗೆ ಮರಣದಂಡನೆ ವಿಧಿಸಬೇಕೆಂದು ಒತ್ತಾಯಿಸಿತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us