Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಲೆ ಪ್ರಕರಣದಲ್ಲಿ ಆಪ್ತ ಸಹಾಯಕನ ಬಂಧನ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಧನಂಜಯ್ ಮುಂಡೆ

Dhananjay Munde Resigns: ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಎನ್​ಸಿಪಿ ನಾಯಕ ಧನಂಜಯ್ ಮುಂಡೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಮಾಹಿತಿ ನೀಡಿದ್ದಾರೆ. ಧನಂಜಯ್ ಮುಂಡೆ ಅವರ ಆಪ್ತ ಸಹಾಯಕ ಪ್ರಶಾಂತ್ ಜೋಶಿ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಅಧಿಕೃತ ನಿವಾಸವನ್ನು ತಲುಪಿ ಮುಂಡೆ ಅವರ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.

ಕೊಲೆ ಪ್ರಕರಣದಲ್ಲಿ ಆಪ್ತ ಸಹಾಯಕನ ಬಂಧನ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಧನಂಜಯ್ ಮುಂಡೆ
ಧನಂಜಯ್ ಮುಂಡೆImage Credit source: India Today
Follow us
ನಯನಾ ರಾಜೀವ್
|

Updated on:Mar 04, 2025 | 11:49 AM

ಮಹಾರಾಷ್ಟ್ರ, ಮಾರ್ಚ್​ 04: ಮಹಾರಾಷ್ಟ್ರ ಸರ್ಕಾರದ ಸಚಿವ ಮತ್ತು ಎನ್‌ಸಿಪಿ ನಾಯಕ ಧನಂಜಯ್ ಮುಂಡೆ(Dhananjay Munde) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಮಾಹಿತಿ ನೀಡಿದ್ದಾರೆ. ಧನಂಜಯ್ ಮುಂಡೆ ಅವರ ಆಪ್ತ ಸಹಾಯಕ ಪ್ರಶಾಂತ್ ಜೋಶಿ ಅವರು ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಅಧಿಕೃತ ನಿವಾಸವನ್ನು ತಲುಪಿ ಮುಂಡೆ ಅವರ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದರು.

ಮೂಲಗಳ ಪ್ರಕಾರ, ಧನಂಜಯ್ ಮುಂಡೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ ಎಂದು ಸಿಎಂ ದೇವೇಂದ್ರ ಫಡ್ನವೀಸ್ ಅವರು ಅಜಿತ್ ಪವಾರ್ ಮತ್ತು ಪ್ರಫುಲ್ ಪಟೇಲ್ ಅವರಿಗೆ ಪತ್ರ ಬರೆದಿದ್ದರು ಎನ್ನಲಾಗಿದೆ. ಧನಂಜಯ್ ಮುಂಡೆ ಅವರ ಆಪ್ತ ಸಹಚರ ವಾಲ್ಮೀಕ್ ಕರಡ್ ಮತ್ತು ಅವರ ಆರು ಮಂದಿ ಸಹಾಯಕರನ್ನು ಈ ವರ್ಷದ ಜನವರಿಯಲ್ಲಿ ಮಹಾರಾಷ್ಟ್ರ ಪೊಲೀಸರು MCOCA (ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ, 1999) ಅಡಿಯಲ್ಲಿ ಬಂಧಿಸಿದ್ದರು.

ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಧನಂಜಯ್ ಮುಂಡೆ ಬೀಡ್ ಜಿಲ್ಲೆಯ ಪಾರ್ಲಿಯ ಎನ್‌ಸಿಪಿ ಶಾಸಕರಾಗಿದ್ದಾರೆ. ಇದಕ್ಕೂ ಮೊದಲು ಅವರು ಬೀಡ್‌ನ ಉಸ್ತುವಾರಿ ಸಚಿವರಾಗಿದ್ದರು. ಪ್ರಸ್ತುತ, ಎನ್‌ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಪುಣೆ ಮತ್ತು ಬೀಡ್ ಜಿಲ್ಲೆಯ ಉಸ್ತುವಾರಿ ಸಚಿವರಾಗಿದ್ದಾರೆ.

ಮತ್ತಷ್ಟು ಓದಿ: Bell’s Palsy: ಮಾತೇ ಬರುತ್ತಿಲ್ಲ, ಮಹಾರಾಷ್ಟ್ರ ಸಚಿವ ಧನಂಜಯ್​ಗೆ ಬೆಲ್ ಪಾಲ್ಸಿ ಕಾಯಿಲೆ, ಇದೆಷ್ಟು ಅಪಾಯಕಾರಿ?

ದೇಶಮುಖ್ ಹತ್ಯೆ ಮತ್ತು ಅದಕ್ಕೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಫೆಬ್ರವರಿ 27 ರಂದು ಸಿಐಡಿ ಬೀಡ್ ಜಿಲ್ಲೆಯ ನ್ಯಾಯಾಲಯದಲ್ಲಿ 1,200 ಪುಟಗಳ ಆರೋಪಪಟ್ಟಿ ಸಲ್ಲಿಸಿತು.

ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಮೋಕಾ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇಲ್ಲಿಯವರೆಗೆ ಏಳು ಜನರನ್ನು ಬಂಧಿಸಲಾಗಿದ್ದು, ಅವರ ವಿರುದ್ಧ MCOCA ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಒಬ್ಬ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:11 am, Tue, 4 March 25

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ