Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ನ್ಯಾಯಾಂಗ ಬಂಧನ ಏ. 18ರವರೆಗೆ ವಿಸ್ತರಣೆ

ನವಾಬ್ ಮಲಿಕ್ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ತಿರಸ್ಕರಿಸಿರುವ ಬಾಂಬೆ ಹೈಕೋರ್ಟ್‌ನ ಆದೇಶದ ವಿರುದ್ಧ ಸಚಿವ ನವಾಬ್ ಮಲಿಕ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ನ್ಯಾಯಾಂಗ ಬಂಧನ ಏ. 18ರವರೆಗೆ ವಿಸ್ತರಣೆ
ನವಾಬ್ ಮಲಿಕ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 04, 2022 | 8:34 PM

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ (Nawab Malik) ಅವರ ನ್ಯಾಯಾಂಗ ಬಂಧನವನ್ನು ಮುಂಬೈನ ವಿಶೇಷ ನ್ಯಾಯಾಲಯವು ಏಪ್ರಿಲ್ 18ರವರೆಗೆ ವಿಸ್ತರಿಸಿದೆ. ಭೂಗತಪಾತಕಿ ದಾವೂದ್ ಇಬ್ರಾಹಿಂ ಮತ್ತು ಆತನ ಸಹಾಯಕರ ಚಟುವಟಿಕೆಗಳಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಯಲ್ಲಿ 62 ವರ್ಷದ ನವಾಬ್ ಮಲಿಕ್ ಅವರನ್ನು ಫೆಬ್ರವರಿ 23ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು.

ಎನ್‌ಸಿಪಿ ನಾಯಕ ನವಾಬ್ ಮಲಿಕ್​ರನ್ನು ಮಾರ್ಚ್ 7ರವರೆಗೆ ಇಡಿ ವಶದಲ್ಲಿರಿಸಲಾಗಿತ್ತು. ಮಾರ್ಚ್ 21ರವರೆಗೆ ಅವರಿಗೆ ನ್ಯಾಯಾಂಗ ಬಂಧನದಡಿಯಲ್ಲಿ ಜೈಲಿಗೆ ಕಳುಹಿಸಲಾಗಿತ್ತು. ನಂತರ ಅದನ್ನು ಏಪ್ರಿಲ್ 4ರವರೆಗೆ ವಿಸ್ತರಿಸಲಾಗಿತ್ತು. ಇದೀಗ ನ್ಯಾಯಾಂಗ ಬಂಧನದ ಅವಧಿಯನ್ನು ಏ. 18ರವರೆಗೆ ವಿಸ್ತರಿಸಲಾಗಿದೆ.

ಇಂದು ಸಚಿವ ನವಾಬ್ ಮಲಿಕ್ ಅವರನ್ನು ಮನಿ ಲಾಂಡರಿಂಗ್ ಆಕ್ಟ್ (ಪಿಎಂಎಲ್‌ಎ) ತಡೆಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ಗೊತ್ತುಪಡಿಸಿದ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಧೀಶ ಆರ್‌ಎನ್ ರೋಕಡೆ ಅವರು ಏಪ್ರಿಲ್ 18ರವರೆಗೆ ವಿಸ್ತರಿಸಿದ್ದಾರೆ.

ನವಾಬ್ ಮಲಿಕ್ ಅವರನ್ನು ಕೂಡಲೇ ಜೈಲಿನಿಂದ ಬಿಡುಗಡೆ ಮಾಡುವಂತೆ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ತಿರಸ್ಕರಿಸಿರುವ ಬಾಂಬೆ ಹೈಕೋರ್ಟ್‌ನ ಆದೇಶದ ವಿರುದ್ಧ ಸಚಿವ ನವಾಬ್ ಮಲಿಕ್ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ನವಾಬ್ ಮಲಿಕ್ ಮುಸ್ಲಿಂ ಎಂಬ ಕಾರಣಕ್ಕೆ ದಾವೂದ್ ಇಬ್ರಾಹಿಂ ಜೊತೆ ತಳುಕು ಹಾಕಲಾಗುತ್ತಿದೆ; ಶರದ್ ಪವಾರ್ ಆರೋಪ

Nawab Malik: ಸಮೀರ್ ವಾಂಖೆಡೆ ವಿರುದ್ಧದ ಹೇಳಿಕೆಗೆ ಬಾಂಬೆ ಹೈಕೋರ್ಟ್​ಗೆ ಬೇಷರತ್ ಕ್ಷಮೆ ಯಾಚಿಸಿದ ನವಾಬ್ ಮಲಿಕ್