ನ. 1ಕ್ಕೆ MES ಕರಾಳ ದಿನಾಚರಣೆ, ಮಹಾರಾಷ್ಟ್ರ ಬೆಂಬಲಕ್ಕೆ ಕನ್ನಡ ಸಂಘಟನೆಗಳ ಆಕ್ರೋಶ
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಶಿವಸೇನೆ ಮತ್ತೆ ಕ್ಯಾತೆ ತೆಗೆದಿದೆ. ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ವಿರೋಧಿಸಿ ಎಂಇಎಸ್ ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಸರ್ಕಾರ ಬೆಂಬಲ ನೀಡಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಬೆಂಬಲ ವ್ಯಕ್ತವಾಗಿದೆ. ನವೆಂಬರ್ 1ರಂದು ಕಪ್ಪು ಪಟ್ಟಿ ಧರಿಸಿ ಮಹಾರಾಷ್ಟ್ರ ಸಚಿವರು ಕೆಲಸ ಮಾಡ್ತಾರೆ ಎಂದು ಮುಂಬೈನಲ್ಲಿ ಗಡಿ ಉಸ್ತುವಾರಿ ಸಚಿವ ಏಕನಾಥ ಶಿಂಧೆ ಹೇಳಿದ್ದಾರೆ. ಮರಾಠಿ ಭಾಷಿಕರ ಮೇಲೆ ಕರ್ನಾಟಕ ಸರ್ಕಾರ ನಿರಂತರ ಅನ್ಯಾಯ, ದಬ್ಬಾಳಿಕೆ ಮಾಡ್ತಿದೆ. ಮರಾಠಿ ಭಾಷಿಕರ ಧ್ವನಿ […]
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಶಿವಸೇನೆ ಮತ್ತೆ ಕ್ಯಾತೆ ತೆಗೆದಿದೆ. ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವ ವಿರೋಧಿಸಿ ಎಂಇಎಸ್ ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಸರ್ಕಾರ ಬೆಂಬಲ ನೀಡಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಬೆಂಬಲ ವ್ಯಕ್ತವಾಗಿದೆ.
ನವೆಂಬರ್ 1ರಂದು ಕಪ್ಪು ಪಟ್ಟಿ ಧರಿಸಿ ಮಹಾರಾಷ್ಟ್ರ ಸಚಿವರು ಕೆಲಸ ಮಾಡ್ತಾರೆ ಎಂದು ಮುಂಬೈನಲ್ಲಿ ಗಡಿ ಉಸ್ತುವಾರಿ ಸಚಿವ ಏಕನಾಥ ಶಿಂಧೆ ಹೇಳಿದ್ದಾರೆ. ಮರಾಠಿ ಭಾಷಿಕರ ಮೇಲೆ ಕರ್ನಾಟಕ ಸರ್ಕಾರ ನಿರಂತರ ಅನ್ಯಾಯ, ದಬ್ಬಾಳಿಕೆ ಮಾಡ್ತಿದೆ. ಮರಾಠಿ ಭಾಷಿಕರ ಧ್ವನಿ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಗಡಿ ವಿವಾದ ಸಂಬಂಧ ಮಹಾರಾಷ್ಟ್ರ ಸರ್ಕಾರ ತನ್ನ ಕಾನೂನು ಹೋರಾಟವನ್ನು ಮುಂದುವರೆಸುತ್ತೆ. ಆದಷ್ಟು ಬೇಗ ಮರಾಠಿ ಭಾಷಿಕರಿಗೆ ನ್ಯಾಯ ಸಿಗುವ ವಿಶ್ವಾಸವಿದೆ.
ಮಂತ್ರಿಮಂಡಲ ಎಲ್ಲಾ ಸದಸ್ಯರು ಕರಾಳ ದಿನಾಚರಣೆಗೆ ಬೆಂಬಲ ನೀಡುತ್ತೇವೆ. ನವೆಂಬರ್ 1ರಂದು ಎಲ್ಲಾ ಸಚಿವರು ಕಪ್ಪುಪಟ್ಟಿ ಧರಿಸಿ ಕೆಲಸ ಮಾಡ್ತೇವೆ. ಮರಾಠಿ ಭಾಷಿಕರ ಹೋರಾಟಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ ಎಂದು ಸಚಿವ ಏಕನಾಥ ಶಿಂಧೆ ಉದ್ಧಟತನದ ಹೇಳಿಕೆ ನೀಡಿದ್ದಾರೆ.
ಅಷ್ಟೇ ಅಲ್ಲದೇ ಕರ್ನಾಟಕದ ಮರಾಠಿ ಭಾಷಿಕರನ್ನುದ್ದೇಶಿಸಿ ಗಡಿ ಉಸ್ತುವಾರಿ ಮಂತ್ರಿಗಳಾದ ಏಕನಾಥ ಶಿಂಧೆ, ಛಗನ್ ಭುಜಬಲ್ ಪತ್ರ ಬರೆದಿದ್ದಾರೆ. ಮಹಾರಾಷ್ಟ್ರ ಸರ್ಕಾರದ ಉದ್ಧಟತನಕ್ಕೆ ಕನ್ನಡ ಸಂಘಟನೆಗಳ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ನವೆಂಬರ್ 1ರಂದು ಎಂಇಎಸ್‌ಗೆ ಕರಾಳ ದಿನ ಆಚರಣೆಗೆ ಅನುಮತಿ ನೀಡದಂತೆ ಕನ್ನಡ ಸಂಘಟನೆಗಳು ಒತ್ತಾಯಿಸಿವೆ.