ಸುಪ್ರಿಯಾ ಸುಳೆ ವಾಟ್ಸಾಪ್​ ಹ್ಯಾಕ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಹ್ಯಾಕರ್ಸ್​

ಸುಪ್ರಿಯಾ ಸುಳೆ ಸೇರಿದಂತೆ ಎನ್​ಸಿಪಿ ಪಕ್ಷದ 20ಕ್ಕೂ ಅಧಿಕ ಜನರ ವಾಟ್ಸಾಪ್ ಖಾತೆಯನ್ನು ಹ್ಯಾಕ್​ ಮಾಡಲಾಗಿತ್ತು. ಅಷ್ಟೇ ಅಲ್ಲದೆ 400 ಡಾಲರ್​ ನೀಡುವಂತೆ ಹ್ಯಾಕರ್ಸ್​ ಬೇಡಿಕೆ ಇಟ್ಟಿದ್ದರು. ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಾಯಕರ ಫೋನ್ ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶರದ್ ಪವಾರ್ ಅವರ ಪಕ್ಷದ ಸಂಸದೆ ಸುಪ್ರಿಯಾ ಸುಳೆ ಸೇರಿದಂತೆ ಪಕ್ಷದ 20 ನಾಯಕರ ವಾಟ್ಸಾಪ್ ಹ್ಯಾಕ್ ಆಗಿದೆ.

ಸುಪ್ರಿಯಾ ಸುಳೆ ವಾಟ್ಸಾಪ್​ ಹ್ಯಾಕ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಹ್ಯಾಕರ್ಸ್​
ಸುಪ್ರಿಯಾ ಸುಳೆImage Credit source: The Hindu
Follow us
ನಯನಾ ರಾಜೀವ್
|

Updated on: Aug 12, 2024 | 1:59 PM

ಶರದ್​ ಪವಾರ್(Sharad Pawar)​ ಅವರ ಎನ್​ಸಿಪಿ(NCP) ಪಕ್ಷದ ಕಾರ್ಯಾಧ್ಯಕ್ಷೆ, ಸಂಸದೆ ಸುಪ್ರಿಯಾ ಸುಳೆ(Supriya Sule) ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಲಾಗಿತ್ತು. ತನ್ನ ಖಾತೆಯನ್ನು ಮರುಸ್ಥಾಪಿಸಲು ಹ್ಯಾಕರ್​ 32,000 ರೂ. ಕೊಡುವಂತೆ ಬೇಡಿಕೆ ಇಟ್ಟಿದ್ದ. ಆದರೆ ಕೆಲವೇ ಗಂಟೆಗಳಲ್ಲಿ ಪೊಲೀಸರು ವಾಟ್ಸಾಪ್ ಅ​ನ್ನು ಮರುಸ್ಥಾಪಿಸಿದ್ದಾರೆ. ಸುಪ್ರಿಯಾ ಅವರು ದೌಂಡ್ ತೆಹಸಿಲ್‌ನಲ್ಲಿ ಪಾರ್ಟಿ ಕಾರ್ಯಕ್ರಮವೊಂದರಲ್ಲಿದ್ದಾಗ ತಮ್ಮ ವಾಟ್ಸಾಪ್ ಹ್ಯಾಕ್ ಆಗಿರುವುದು ಅರಿವಾಯಿತು.

ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ನಾಯಕರ ಫೋನ್ ಹ್ಯಾಕ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶರದ್ ಪವಾರ್ ಅವರ ಪಕ್ಷದ ಸಂಸದೆ ಸುಪ್ರಿಯಾ ಸುಳೆ ಸೇರಿದಂತೆ ಪಕ್ಷದ 20 ನಾಯಕರ ವಾಟ್ಸಾಪ್ ಹ್ಯಾಕ್ ಆಗಿದೆ. ಮೂಲಗಳ ಪ್ರಕಾರ, ಬಿಹಾರವು ಅಧಿಕಾರಿಗಳ ವಾಟ್ಸಾಪ್ ಖಾತೆಗಳನ್ನು ಹ್ಯಾಕ್ ಮಾಡುವ ಕೇಂದ್ರವಾಗಿದೆ ಎಂದು ಹೇಳಲಾಗಿದೆ.

ಆಗಸ್ಟ್ 11 ರಂದು ಮಧ್ಯಾಹ್ನ 1 ಗಂಟೆಗೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ವಾಟ್ಸಾಪ್ ಹ್ಯಾಕ್ ಆಗಿರುವ ಬಗ್ಗೆ ಸುಪ್ರಿಯಾ ಮೊದಲ ಮಾಹಿತಿ ನೀಡಿದರು. ನಂತರ ಸಂಜೆ 4.15ಕ್ಕೆ ವಾಟ್ಸಾಪ್ ಮರುಸ್ಥಾಪನೆ ಬಗ್ಗೆಯೂ ಮಾಹಿತಿ ನೀಡಿದ್ದರು.

ನನ್ನ ವಾಟ್ಸಾಪ್ ಬಳಸಿ ನನ್ನ ತಂಡದ ಸದಸ್ಯರೊಬ್ಬರಿಗೆ ಹ್ಯಾಕರ್ ಸಂದೇಶ ಕಳುಹಿಸಿದ್ದಾನೆ. ಹ್ಯಾಕರ್ 400 ಡಾಲರ್​ ಕೇಳಿದ್ದ, ಈ ಸಂದೇಶದ ಬಗ್ಗೆ ನನ್ನ ತಂಡದ ಸದಸ್ಯರು ತಕ್ಷಣವೇ ನನಗೆ ತಿಳಿಸಿದ್ದರು.

ಮತ್ತಷ್ಟು ಓದಿ: WhatsApp Ban: ನಿಷೇಧವಾದ ವಾಟ್ಸ್​ಆ್ಯಪ್ ಖಾತೆಯನ್ನು ಮರಳಿ ಪಡೆಯುವುದು ಹೇಗೆ?

ಹ್ಯಾಕರ್ ತನ್ನ ತಂಡದ ಇನ್ನೊಬ್ಬ ಸದಸ್ಯನ ವಾಟ್ಸಾಪ್ ಖಾತೆಯನ್ನು ಸಹ ಹ್ಯಾಕ್ ಮಾಡಿದ್ದಾನೆ ಎಂದು ಸುಪ್ರಿಯಾ ಹೇಳಿದ್ದಾರೆ. ನಂತರ ಅವರು 20 ಕ್ಕೂ ಹೆಚ್ಚು ಸಂಖ್ಯೆಗಳಿಗೆ ಸಂದೇಶಗಳನ್ನು ಕಳುಹಿಸಿದ್ದಾರೆ. ಈ ವಿಚಾರವಾಗಿ ಪುಣೆ ಗ್ರಾಮಾಂತರ ಎಸ್‌ಪಿ ಪಂಕಜ್ ದೇಶಮುಖ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ