ಮಹಾರಾಷ್ಟ್ರ: ಎಂವಿಎ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಮುಕ್ತಾಯ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?
ಮಹಾರಾಷ್ಟ್ರದಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಅವರ ಶಿವಸೇನೆ ಪಕ್ಷ 21 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 17, ಶರದ್ ಪವಾರ್ ಅವರ ಪಕ್ಷ 10 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಹೇಳಿದ್ದಾರೆ.
ಪುಣೆ, ಎ.09: ಮಹಾರಾಷ್ಟ್ರದಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಅವರ ಶಿವಸೇನೆ ಪಕ್ಷ 21 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 17, ಶರದ್ ಪವಾರ್ ಅವರ ಪಕ್ಷ 10 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಆಪ್ ಇಂಡಿಯಾ ಬಣದ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲಾಗಿದ್ದು, ಇದರ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಶಿವಸೇನೆ ಬಣ 21 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ 10 ಸ್ಥಾನಗಳಲ್ಲಿ ಸ್ವರ್ಧಿಸಲಿದೆ. ಚರ್ಚೆಯಲ್ಲಿದ್ದ ಸಾಂಗ್ಲಿಯ ಕ್ಷೇತ್ರ ಶಿವಸೇನೆ (ಯುಬಿಟಿ) ಹಾಗೂ ಭಿವಂಡಿ ಕ್ಷೇತ್ರ ಕಾಂಗ್ರೆಸ್ಗೆ ನೀಡಲಾಗಿದೆ.
ಇನ್ನು ಮುಂಬೈ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಸ್ಪರ್ಧಿಸಿತ್ತು. ಆದರೆ ಇದೀಗ ಇದನ್ನು ಶಿವಸೇನೆ ಪಡೆದುಕೊಂಡಿದೆ. ಈ ಬಗ್ಗೆ ಮಾತನಾಡಿದ ಉದ್ಧವ್ ಠಾಕ್ರೆ ಎಲ್ಲರೂ ಸೀಟುಗಳಿಗಾಗಿ ಹೋರಾಡಲು ಬಯಸುತ್ತಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ, ಆದರೆ ಕೊನೆಯಲ್ಲಿ ಗೆಲುವಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮೊದಲ ಚುನಾವಣೆಯಲ್ಲೇ ಸೋಲು ಕಂಡಿದ್ದ ವಾಜಪೇಯಿ, ನೆಹರೂ ಸಂಬಂಧಿ ಎದುರು ಪರಾಭವಗೊಂಡಿದ್ದ ಅಟಲ್
ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಯು ಏಪ್ರಿಲ್ 19, 26 ಮತ್ತು ಮೇ 7, 13 ಮತ್ತು 20 ರಂದು ಐದು ಹಂತಗಳಲ್ಲಿ ನಡೆಯಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:35 pm, Tue, 9 April 24