ಮಹಾರಾಷ್ಟ್ರ: ಎಂವಿಎ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಮುಕ್ತಾಯ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

ಮಹಾರಾಷ್ಟ್ರದಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಅವರ ಶಿವಸೇನೆ ಪಕ್ಷ 21 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 17, ಶರದ್ ಪವಾರ್ ಅವರ ಪಕ್ಷ 10 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರ: ಎಂವಿಎ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ಮುಕ್ತಾಯ ಯಾವ ಪಕ್ಷಕ್ಕೆ ಎಷ್ಟು ಸ್ಥಾನ?

Updated on: Apr 09, 2024 | 1:00 PM

ಪುಣೆ, ಎ.09: ಮಹಾರಾಷ್ಟ್ರದಲ್ಲಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಉದ್ಧವ್ ಠಾಕ್ರೆ ಅವರ ಶಿವಸೇನೆ ಪಕ್ಷ 21 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 17, ಶರದ್ ಪವಾರ್ ಅವರ ಪಕ್ಷ 10 ಸ್ಥಾನಗಳಲ್ಲಿ ಸ್ಪರ್ಧಿಸಲಿವೆ ಎಂದು ಹೇಳಿದ್ದಾರೆ. ಲೋಕಸಭೆ ಚುನಾವಣೆಗೆ ಮಹಾರಾಷ್ಟ್ರದಲ್ಲಿ ಆಪ್ ಇಂಡಿಯಾ ಬಣದ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲಾಗಿದ್ದು, ಇದರ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಶಿವಸೇನೆ ಬಣ 21 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಶರದ್ ಪವಾರ್ ನೇತೃತ್ವದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ 10 ಸ್ಥಾನಗಳಲ್ಲಿ ಸ್ವರ್ಧಿಸಲಿದೆ. ಚರ್ಚೆಯಲ್ಲಿದ್ದ ಸಾಂಗ್ಲಿಯ ಕ್ಷೇತ್ರ ಶಿವಸೇನೆ (ಯುಬಿಟಿ) ಹಾಗೂ ಭಿವಂಡಿ ಕ್ಷೇತ್ರ ಕಾಂಗ್ರೆಸ್​​​​ಗೆ ನೀಡಲಾಗಿದೆ.

ಇನ್ನು ಮುಂಬೈ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್​​​ ಸ್ಪರ್ಧಿಸಿತ್ತು. ಆದರೆ ಇದೀಗ ಇದನ್ನು ಶಿವಸೇನೆ ಪಡೆದುಕೊಂಡಿದೆ. ಈ ಬಗ್ಗೆ ಮಾತನಾಡಿದ ಉದ್ಧವ್ ಠಾಕ್ರೆ ಎಲ್ಲರೂ ಸೀಟುಗಳಿಗಾಗಿ ಹೋರಾಡಲು ಬಯಸುತ್ತಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ, ಆದರೆ ಕೊನೆಯಲ್ಲಿ ಗೆಲುವಿಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೊದಲ ಚುನಾವಣೆಯಲ್ಲೇ ಸೋಲು ಕಂಡಿದ್ದ ವಾಜಪೇಯಿ, ನೆಹರೂ ಸಂಬಂಧಿ ಎದುರು ಪರಾಭವಗೊಂಡಿದ್ದ ಅಟಲ್

ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಯು ಏಪ್ರಿಲ್ 19, 26 ಮತ್ತು ಮೇ 7, 13 ಮತ್ತು 20 ರಂದು ಐದು ಹಂತಗಳಲ್ಲಿ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:35 pm, Tue, 9 April 24

Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Follow Us