ನಾಂದೇಡ್ ಆಸ್ಪತ್ರೆಯಲ್ಲಿ 35 ಸಾವು: ಆರೋಗ್ಯವಲಯದಲ್ಲಿ ಶಿಂಧೆ ಸರ್ಕಾರದ ಬಜೆಟ್ ಲೆಕ್ಕ ಕೇಳಿದ ಬಾಂಬೆ ಹೈಕೋರ್ಟ್

ಆಸ್ಪತ್ರೆಯಲ್ಲಿ ಸಾವುಗಳ ಬಗ್ಗೆ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಏತನ್ಮಧ್ಯೆ "ಸಾವು ದುರದೃಷ್ಟಕರವಾಗಿದೆ. ನಾವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ತನಿಖೆಗೆ ಆದೇಶಿಸಲಾಗಿದೆ. ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಮತ್ತೊಂದು ಘಟನೆಯಲ್ಲಿ, ಸಂಭಾಜಿ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎರಡು ಶಿಶುಗಳು ಸೇರಿದಂತೆ 14 ಸಾವುಗಳು ವರದಿಯಾಗಿವೆ.

ನಾಂದೇಡ್ ಆಸ್ಪತ್ರೆಯಲ್ಲಿ 35 ಸಾವು: ಆರೋಗ್ಯವಲಯದಲ್ಲಿ ಶಿಂಧೆ ಸರ್ಕಾರದ ಬಜೆಟ್ ಲೆಕ್ಕ ಕೇಳಿದ ಬಾಂಬೆ ಹೈಕೋರ್ಟ್
ನಾಂದೇಡ್ ಆಸ್ಪತ್ರೆ
Follow us
ರಶ್ಮಿ ಕಲ್ಲಕಟ್ಟ
|

Updated on:Oct 04, 2023 | 6:49 PM

ಮುಂಬೈ ಅಕ್ಟೋಬರ್ 04: 16 ಮಕ್ಕಳು ಸೇರಿದಂತೆ 35 ರೋಗಿಗಳು ಸಾವಿಗೀಡಾದ ನಾಂದೇಡ್‌ನ (Nanded) ಡಾ ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (Dr Shankarrao Chavan Government Medical College Hospital) ಸಂಭವಿಸಿದ ಸಾವಿನ ಬಗ್ಗೆ ಬಾಂಬೆ ಹೈಕೋರ್ಟ್ (Bombay HC) ಬುಧವಾರ ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ನಾಳೆ ಈ ಬಗ್ಗೆ ವಿಚಾರಣೆ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ ಡಿ ಕೆ ಉಪಾಧ್ಯಾಯ ಮತ್ತು ನ್ಯಾಯಮೂರ್ತಿ ಆರಿಫ್ ಡಾಕ್ಟರ್ ಅವರ ವಿಭಾಗೀಯ ಪೀಠವು ರಾಜ್ಯ ಸರ್ಕಾರದ ಪರವಾಗಿ ಹಾಜರಿದ್ದ ಅಡ್ವೊಕೇಟ್ ಜನರಲ್ ಬೀರೇಂದ್ರ ಸರಾಫ್ ಅವರಿಗೆ ಆರೋಗ್ಯಕ್ಕಾಗಿ ರಾಜ್ಯದ ಬಜೆಟ್ ಹಂಚಿಕೆಯ ವಿವರಗಳನ್ನು ಶುಕ್ರವಾರ ಪೀಠಕ್ಕೆ ಸಲ್ಲಿಸುವಂತೆ ನಿರ್ದೇಶಿಸಿದೆ.

ಆಸ್ಪತ್ರೆಯಲ್ಲಿ ಸಾವುಗಳ ಬಗ್ಗೆ ಪ್ರತಿಪಕ್ಷಗಳು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಏತನ್ಮಧ್ಯೆ “ಸಾವು ದುರದೃಷ್ಟಕರವಾಗಿದೆ. ನಾವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ತನಿಖೆಗೆ ಆದೇಶಿಸಲಾಗಿದೆ. ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

ಮತ್ತೊಂದು ಘಟನೆಯಲ್ಲಿ, ಸಂಭಾಜಿ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎರಡು ಶಿಶುಗಳು ಸೇರಿದಂತೆ 14 ಸಾವುಗಳು ವರದಿಯಾಗಿವೆ. ಆಸ್ಪತ್ರೆಯ ಅಧೀಕ್ಷಕ ಡಾ ವಿಜಯ್ ಕಲ್ಯಾಣ್ಕರ್ ಮಾತನಾಡಿ, ಸಾವುಗಳು ಮಾನವ ಸಂಪನ್ಮೂಲ ಅಥವಾ ಔಷಧಿಗಳ ಕೊರತೆಯ ಪರಿಣಾಮವಲ್ಲ ಎಂದಿದ್ದಾರೆ.

ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಸಚಿವ ಹಸನ್ ಮುಶ್ರಿಫ್, “ನಾಂದೇಡ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಪ್ರತಿ ಸಾವಿನ ಪ್ರಕರಣವನ್ನು ಸಮಿತಿಯು ಪ್ರತ್ಯೇಕವಾಗಿ ತನಿಖೆ ನಡೆಸುತ್ತದೆ. ಅಲ್ಲಿನ್ಯೂನತೆಗಳಿವೆ ಮತ್ತು ನಾವು ಅವುಗಳನ್ನು ನಿವಾರಿಸುತ್ತೇವೆ. ಮುಂದಿನ 15 ದಿನಗಳಲ್ಲಿ (ಸೌಲಭ್ಯದಲ್ಲಿ) ಬದಲಾವಣೆ ಗೋಚರಿಸುತ್ತದೆ ಎಂದಿದ್ದಾರೆ.

ಪ್ರತಿಪಕ್ಷಗಳು ಶಿಂಧೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ. ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ “ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ಜನರು ಸಾವನ್ನಪ್ಪಿದ ದುರದೃಷ್ಟಕರ ಘಟನೆ ಅಕ್ಷರಶಃ ಆಘಾತಕಾರಿಯಾಗಿದೆ.

ಇದನ್ನೂ ಓದಿ: ನಾಂದೇಡ್ ಆಸ್ಪತ್ರೆಯಲ್ಲಿ 48 ಗಂಟೆಗಳಲ್ಲಿ 31 ಸಾವು; ಕೊಳಕಾಗಿದ್ದ ಶೌಚಾಲಯವನ್ನು ಡೀನ್ ಕೈಯಲ್ಲೇ ಸ್ವಚ್ಛ ಮಾಡಿಸಿದ ಸಂಸದ

ಕೇವಲ ಎರಡು ತಿಂಗಳ ಹಿಂದೆ, ಥಾಣೆ ಮುನ್ಸಿಪಲ್ ಕಾರ್ಪೊರೇಶನ್‌ನ ಕಲ್ವಾ ಆಸ್ಪತ್ರೆಯಲ್ಲಿ ಒಂದೇ ರಾತ್ರಿಯಲ್ಲಿ 18 ಜನರು ಸಾವನ್ನಪ್ಪಿದ ದುರದೃಷ್ಟಕರ ಘಟನೆ ನಡೆದಿತ್ತು. ಆದರೆ, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸದ ಕಾರಣ ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇಂತಹ ಗಂಭೀರ ಘಟನೆ ಮರುಕಳಿಸಿದೆ. ಇದು ಸರ್ಕಾರಿ ವ್ಯವಸ್ಥೆಗಳ ವೈಫಲ್ಯವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೂಡ “ಬಿಜೆಪಿ ಸರ್ಕಾರ ತನ್ನ ಪ್ರಚಾರಕ್ಕಾಗಿ ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತದೆ, ಆದರೆ ಮಕ್ಕಳಿಗೆ ಔಷಧಿಗಳಿಗೆ ಹಣವಿಲ್ಲ? ಬಿಜೆಪಿ ದೃಷ್ಟಿಯಲ್ಲಿ ಬಡವರ ಜೀವಕ್ಕೆ ಬೆಲೆ ಇಲ್ಲ” ಎಂದು ಪೋಸ್ಟ್ ಮಾಡಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:48 pm, Wed, 4 October 23

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್