AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ: ನವರಾತ್ರಿ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ಪ್ರವೇಶವಿಲ್ಲ, ಹಣೆಯಲ್ಲಿ ತಿಲಕ ಕಡ್ಡಾಯ

ಮಹಾರಾಷ್ಟ್ರದಲ್ಲಿ ನವರಾತ್ರಿ ಆಚರಣೆಗಳಿಗೆ ವಿಎಚ್​ಪಿ ಕಠಿಣ ಮಾರ್ಗಸೂಚಿ ಪ್ರಕಟಿಸಿದೆ. ಗರ್ಭಾ ಕಾರ್ಯಕ್ರಮಗಳಿಗೆ ಮುಸ್ಲಿಮರ ಪ್ರವೇಶ ನಿಷೇಧಿಸಿ, ಆಧಾರ್ ಪರಿಶೀಲನೆ ಹಾಗೂ ತಿಲಕ ಕಡ್ಡಾಯಗೊಳಿಸಿದೆ. 'ಲವ್ ಜಿಹಾದ್' ತಡೆಗೆ ಈ ಕ್ರಮ ಎಂದಿದೆ. ಆರ್‌ಎಸ್‌ಎಸ್ ಮುಖ್ಯಸ್ಥರ ಏಕತೆಯ ಹೇಳಿಕೆಗೆ ವಿರುದ್ಧವಾಗಿರುವ ಈ ನಿರ್ಧಾರ, ರಾಜಕೀಯ ವಿರೋಧಕ್ಕೆ ಗುರಿಯಾಗಿದೆ. ಸಂವಿಧಾನಾತ್ಮಕ ಸಮಾನತೆ ಹಕ್ಕಿನ ಉಲ್ಲಂಘನೆ ಎಂದು ವಿರೋಧ ಪಕ್ಷಗಳು ಖಂಡಿಸಿವೆ.

ಮಹಾರಾಷ್ಟ್ರ: ನವರಾತ್ರಿ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ಪ್ರವೇಶವಿಲ್ಲ, ಹಣೆಯಲ್ಲಿ ತಿಲಕ ಕಡ್ಡಾಯ
ನೃತ್ಯImage Credit source: The Indian Express
ನಯನಾ ರಾಜೀವ್
|

Updated on: Sep 04, 2026 | 3:33 PM

Share

ಮುಂಬೈ, ಸೆಪ್ಟೆಂಬರ್ 04: ಆರ್‌ಎಸ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಅವರು ಸಾರ್ವತ್ರಿಕ ಏಕತೆ ಮತ್ತು ಸಹಬಾಳ್ವೆಯ ಕುರಿತು ಮಾತನಾಡಿದ ಬೆನ್ನಲ್ಲೇ, ಮಹಾರಾಷ್ಟ್ರದಲ್ಲಿ 10 ದಿನಗಳ ನವರಾತ್ರಿ ಉತ್ಸವಕ್ಕೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ವಿವಾದಾತ್ಮಕ ಕಠಿಣ ಮಾರ್ಗಸೂಚಿ ಹೊರಡಿಸಿದೆ. ಗರ್ಬಾ ಮತ್ತು ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲು ನಿರ್ಧರಿಸಿರುವ ವಿಎಚ್‌ಪಿ, ದ್ವಾರದಲ್ಲೇ ಪ್ರತಿಯೊಬ್ಬರ ಆಧಾರ್ ಕಾರ್ಡ್ ಪರಿಶೀಲನೆ ಹಾಗೂ ಹಣೆಗೆ ತಿಲಕ ಇಡುವುದನ್ನು ಕಡ್ಡಾಯಗೊಳಿಸುವಂತೆ ಆಯೋಜಕರಿಗೆ ಸೂಚಿಸಿರುವುದು ಭಾರಿ ಚರ್ಚೆಗೆ ಗ್ರಾಸವಾಗಿದೆ.

ಮುಸ್ಲಿಮರಿಗೆ ನವರಾತ್ರಿ ಆಚರಿಸುವ ಅಷ್ಟೊಂದು ಆಸಕ್ತಿಯಿದ್ದರೆ, ಅವರು ತಮ್ಮ ಪತ್ನಿಯರು, ತಾಯಂದಿರು ಮತ್ತು ಸಹೋದರಿಯರೊಂದಿಗೆ ಸಕುಟುಂಬವಾಗಿ ಬರಲಿ ಅಥವಾ ತಮ್ಮದೇ ಮಸೀದಿಗಳು ಮತ್ತು ಬಡಾವಣೆಗಳಲ್ಲಿ ನವರಾತ್ರಿ ಆಯೋಜಿಸಲಿ ಎಂದು ನಾಯರ್ ಸವಾಲೆಸೆದಿದ್ದಾರೆ.

ಭಾಗವತ್ ನೀಡಿದ್ದ ಸಂದೇಶ: ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಸಮಾವೇಶದಲ್ಲಿ ಮಾತನಾಡಿದ್ದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಭಾರತದಲ್ಲಿ ಮುಸ್ಲಿಮರು ಇರಬಾರದು ಎಂದು ಯಾವುದೇ ಹಿಂದೂ ಭಾವಿಸಿದರೆ ಅವನು ನಿಜವಾದ ಹಿಂದೂವೇ ಅಲ್ಲ. ಎಲ್ಲಾ ಧರ್ಮಗಳ ದಾರಿಗಳು ಅಂತಿಮವಾಗಿ ಸಾಗುವುದು ಒಂದೇ ಗುರಿಯತ್ತ. ಪ್ರತಿಯೊಬ್ಬ ಮನುಷ್ಯನಿಗೂ ಘನತೆಯಿದೆ ಎಂದು ಸ್ಪಷ್ಟಪಡಿಸಿದ್ದರು.

ಮತ್ತಷ್ಟು ಓದಿ: ಭಾರತದ್ದು ಆಕ್ರಮಣದ ಇತಿಹಾಸವಲ್ಲ, ಜ್ಞಾನ ಹಂಚಿದ ಪರಂಪರೆ: ಭಾರತ ಮಹಾಶಕ್ತಿಯಲ್ಲ, ಜಗತ್ತಿಗೆ ವಿಶ್ವಗುರು ಎಂದ ಭಾಗವತ್

ಪ್ರತಿಕ್ರಿಯಿಸಲು ವಿಎಚ್‌ಪಿ ನಕಾರ: ಭಾಗವತ್ ಅವರ ಈ ಹೇಳಿಕೆ ಬಗ್ಗೆ ಪ್ರಶ್ನಿಸಿದಾಗ, “ನಾವು ಆರ್‌ಎಸ್‌ಎಸ್ ಸರಸಂಘಚಾಲಕರ ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ. ನಾವು ಯಾರ ವಿರುದ್ಧವೂ ಇಲ್ಲ ಹಾಗೂ ಸಾಮಾಜಿಕ ಸೌಹಾರ್ದತೆಯನ್ನು ನಂಬುತ್ತೇವೆ. ಆದರೆ ನಮ್ಮ ನಂಬಿಕೆಗಳನ್ನೇ ಒಪ್ಪದವರಿಗೆ ಸಾಂಸ್ಕೃತಿಕ ಮಾರ್ಗಸೂಚಿ ಸಡಿಲಿಸಲು ಸಾಧ್ಯವಿಲ್ಲ” ಎಂದು ಶ್ರೀರಾಜ್ ನಾಯರ್ ಹೇಳಿದ್ದಾರೆ.

ನವರಾತ್ರಿ ಗರ್ಭಾ ಮೈದಾನಗಳಲ್ಲಿ ಅನ್ಯಕೋಮಿನ ಯುವಕರು ನಕಲಿ ಹೆಸರುಗಳಲ್ಲಿ ನುಗ್ಗಿ ಹಿಂದೂ ಯುವತಿಯರನ್ನು ವಂಚಿಸುವುದನ್ನು ಮತ್ತು ‘ಲವ್ ಜಿಹಾದ್’ ಪ್ರಕರಣಗಳನ್ನು ತಡೆಯಲು ಬಜರಂಗದಳ ಮತ್ತು ವಿಎಚ್‌ಪಿ ಕಾರ್ಯಕರ್ತರು ಈ ಕಠಿಣ ತಪಾಸಣೆಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಳ್ಳುತ್ತಿದ್ದಾರೆ ಎಂದು ಸಂಘಟನೆ ತಿಳಿಸಿದೆ.

ರಾಜಕೀಯ ವಿರೋಧ ಹಾಗೂ ಕಾನೂನು ಇಕ್ಕಟ್ಟು: ವಿಎಚ್‌ಪಿಯ ಈ ಫರ್ಮಾನು ಸಾರ್ವಜನಿಕವಾಗಿ ತಾರತಮ್ಯ ಹುಟ್ಟುಹಾಕುವ ಯತ್ನವಾಗಿದ್ದು, ಸಮಾಜದಲ್ಲಿ ಧ್ರುವೀಕರಣಕ್ಕೆ ದಾರಿಮಾಡಿಕೊಡುತ್ತದೆ ಎಂದು ಮಹಾರಾಷ್ಟ್ರದ ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸಂವಿಧಾನ ನೀಡಿರುವ ಸಮಾನತೆಯ ಹಕ್ಕನ್ನು ಕಸಿದುಕೊಳ್ಳಲಾಗದು ಎಂದು ಎನ್‌ಸಿಪಿ (ಶರದ್ ಪವಾರ್ ಬಣ) ಹಾಗೂ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಧಾರವಾಡ ಕೃಷಿ ಮೇಳದಲ್ಲಿ ಎಲ್ಲರ ಗಮನ ಸೆಳೆದ ವಿವಿಧ ತಳಿಯ ಜಾನುವಾರು!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಬೆಂಗಳೂರು ಪಿಂಕ್ ಲೈನ್ ಮೆಟ್ರೋ ಮಾರ್ಗಕ್ಕೆ ಸ್ಥಳೀಯರಿಂದಲೇ ಚಾಲನೆ!
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
ಚುನಾವಣಾ ಆಯೋಗದ ವಿರುದ್ಧ 84 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಾದಯಾತ್ರೆ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
‘ಬಿಗ್ ಬಾಸ್​ಗೆ ಮೂರು ಬಿಟ್ಟು ಬರ್ತಾರೆ ಅಂದುಕೊಂಡಿರಲಿಲ್ಲ’; ವೈಷ್ಣವಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಕೆಪಿಎಸ್​ಸಿ ಅಕ್ರಮ: ಬಸವರಾಜ್ ಕನ್ನಾಳೆ ಡೈರಿಯಲ್ಲಿ ಸಿಕ್ತು ಸ್ಫೋಟಕ ಮಾಹಿತಿ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಬಿಜೆಪಿ ಶಾಸಕ ಮುನಿರತ್ನ ಮನೆ ಬಳಿ ಭಾರಿ ಹೈಡ್ರಾಮಾ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಛತ್ತೀಸ್​ಗಢ: 48 ಗಂಟೆಗಳ ಮಳೆಗೆ ಕುಸಿದ ಬೆಟ್ಟ
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
ಲಾರಿ ಅಡ್ಡಗಟ್ಟಿದ ಗಜಪಡೆ: ಛಂಗನೆ ನೆಗೆದು ರಸ್ತೆ ದಾಟಿದ ಬೃಹತ್ ಚಿರತೆ!
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
'ಮನೆಯಲ್ಲಿ ಅಮ್ಮ ಇರಲಿಲ್ಲ, ಹೀಗಾಗಿ ಬರೋದು ತಡವಾಯ್ತು': ಸಚಿವ ಯತೀಂದ್ರ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ