ಮಾಜಿ ಸಚಿವ ಅನಿಲ್ ದೇಶ್‌ಮುಖ್​ಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಇಲ್ಲ!

ಮಾಜಿ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕನಿಗೆ ಜಾಮೀನು ಸಿಕ್ಕಿದೆ. ಆದರೂ ಅವರಿಗೆ ಜೈಲೇ ಗತಿ.

ಮಾಜಿ ಸಚಿವ ಅನಿಲ್ ದೇಶ್‌ಮುಖ್​ಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಇಲ್ಲ!
Anil Deshmukh
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 04, 2022 | 4:41 PM

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ(Money Laundering Case) ಸಿಲುಕಿರುವ ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಅನಿಲ್ ದೇಶ್‌ಮುಖ್‌ಗೆ ಮುಂಬೈ ಹೈಕೋರ್ಟ್ ಜಾಮೀನು ನೀಡಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶ್​ಮುಖ್​ ಅವರನ್ನು ಕಳೆದ ವರ್ಷ ನವೆಂಬರ್‌ನಲ್ಲಿ ಬಂಧಿಸಿದ್ದರು. ಈ ಪ್ರಕರಣದಲ್ಲಿ ಸೆಷನ್ಸ್​ ಕೋರ್ಟ್​ ಜಾಮೀನು ನಿರಾಕರಿಸಿದ್ದನ್ನು ಪ್ರಶ್ನಿಸಿ ದೇಶ್​ಮುಖ್​ ಮುಂಬೈ ಹೈಕೋರ್ಟ್​ ಮೊರೆ ಹೋಗಿದ್ದರು. ಅವರಿಗೆ ಈಗ ಜಾಮೀನು ಸಿಕ್ಕಿದೆ. ಜಾಮೀನು ಸಿಕ್ಕರೂ ದೇಶ್​ಮುಖ್​ಗೆ​ಜೈಲೇ ಗತಿ.

ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​​ಗೆ ಜಾರಿ ನಿರ್ದೇಶನಾಲಯ ಸಮನ್ಸ್

ಹೌದು.. ಕಳೆದ ವರ್ಷ ಏಪ್ರಿಲ್‌ನಲ್ಲಿ ಇವರ ವಿರುದ್ಧ ಸಿಬಿಐ ಇನ್ನೊಂದು ಪ್ರಕರಣ ದಾಖಲಿಸಿದ್ದು, ಅದಕ್ಕೆ ಸಂಬಂಧಿಸಿದಂತೆ ಅವರು ಜೈಲಿನಲ್ಲಿ ಇದ್ದಾರೆ. ಈ ಹಿನ್ನೆಲೆಯಲ್ಲಿ ಒಂದು ಕೇಸ್​ನಲ್ಲಿ ಜಾಮೀನು ಮಂಜೂರು ಆಗಿದ್ದರೂ, ಅವರು ಜೈಲಿನಿಂದ ಹೊರಕ್ಕೆ ಬರಲು ಸಾಧ್ಯವಿಲ್ಲ.

ಅನಿಲ್ ದೇಶ್‌ಮುಖ್‌ ಪ್ರಕರಣಗಳ ಹಿನ್ನೆಲೆ ಕಳೆದ ಫೆಬ್ರವರಿ 25ರಂದು, ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಅವರ ಮನೆಯ ಆಂಟಿಲಿಯಾ ಹೊರಗೆ ಸ್ಫೋಟಕಗಳನ್ನು ತುಂಬಿದ ವಾಹನವು ಪತ್ತೆಯಾಗಿತ್ತು. ಈ ಕೃತ್ಯದ ಹಿಂದೆ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಹೆಸರು ಕೇಳಿಬಂದಿತ್ತು. ಇದಾದ ನಂತರ, ಮಹಾರಾಷ್ಟ್ರ ಸರ್ಕಾರವು ಆಗಿನ ಮುಂಬೈ ಪೊಲೀಸ್ ಕಮಿಷನರ್ ಪರಂಬಿರ್ ಸಿಂಗ್ ಅವರನ್ನು ಗೃಹರಕ್ಷಕ ದಳದ ಡಿಜಿಯನ್ನಾಗಿ ವರ್ಗಾವಣೆ ಮಾಡಿತ್ತು.

ಅನಿಲ್ ದೇಶ್‌ಮುಖ್ 100 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ ಎಂದು ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ಈ ಸಂಬಂಧ ಅವರು ಮಹಾರಾಷ್ಟ್ರದ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಈ ಪ್ರಕರಣ ಮುನ್ನೆಲೆಗೆ ಬಂದಿತ್ತು. ಇದರಿಂದ ಅನಿಲ್ ದೇಶಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು.

ಮುಂಬೈನ ಹೋಟೆಲ್‌ಗಳು ಮತ್ತು ಬಾರ್‌ಗಳಿಂದ ಪ್ರತಿ ತಿಂಗಳು 100 ಕೋಟಿ ರೂ. ಸಂಗ್ರಹಿಸುವಂತೆ ವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜ್ ಅವರಿಗೆ ಅನಿಲ್ ದೇಶಮುಖ್ ನಿರ್ದೇಶನ ನೀಡಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ಆರೋಪಿಸಿದ್ದರು. ನಂತರ ಸಿಬಿಐ ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿತ್ತು. ಈಗ ಈ ಕೇಸ್​ನಲ್ಲಿ ಅವರಿಗೆ ಜಾಮೀನು ಸಿಕ್ಕಿದೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ