Maharashtra New Cabinet: ಬಿಜೆಪಿಗೆ 25 ಸಚಿವ ಸ್ಥಾನ, ಶಿಂಧೆ ಬಣಕ್ಕೆ 13 ಸ್ಥಾನ; ಮಹಾರಾಷ್ಟ್ರ ನೂತನ ಸಂಪುಟ ಹೀಗಿದೆ

ಇದೀಗ ಸಚಿವ ಸಂಪುಟ ರಚನೆಗೆ ಮಹಾರಾಷ್ಟ್ರ ಸರ್ಕಾರ ಕಸರತ್ತು ನಡೆಸಿದ್ದು, ನೂತನ ಸಂಪುಟದಲ್ಲಿ 38 ಸಚಿವರಿಗೆ ಮಂತ್ರಿ ಪಟ್ಟ ನೀಡುವ ಸಾಧ್ಯತೆಯಿದೆ. ಸಂಪುಟದಲ್ಲಿ ಬಿಜೆಪಿಗೆ ಹೆಚ್ಚು ಸಚಿವ ಸ್ಥಾನ ನೀಡಲಾಗುವುದು ಎನ್ನಲಾಗಿದೆ.

Maharashtra New Cabinet: ಬಿಜೆಪಿಗೆ 25 ಸಚಿವ ಸ್ಥಾನ, ಶಿಂಧೆ ಬಣಕ್ಕೆ 13 ಸ್ಥಾನ; ಮಹಾರಾಷ್ಟ್ರ ನೂತನ ಸಂಪುಟ ಹೀಗಿದೆ
ಏಕನಾಥ್ ಶಿಂಧೆ ಜೊತೆ ಬಂಡಾಯ ಬಣದ ಶಾಸಕರುImage Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 07, 2022 | 1:52 PM

ಮುಂಬೈ: ಕಳೆದ ವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ (Eknath Shinde) ಪ್ರಮಾಣವಚನ ಸ್ವೀಕಾರ ಮಾಡುವ ಮೂಲಕ ಅಚ್ಚರಿ ಮೂಡಿಸಿದ್ದರು. ಹೆಚ್ಚು ಶಾಸಕರ ಬೆಂಬಲವಿದ್ದರೂ ಏಕನಾಥ್​ ಶಿಂಧೆಗೆ ಸಿಎಂ ಪಟ್ಟ ಬಿಟ್ಟುಕೊಟ್ಟು ಬಿಜೆಪಿಯ ದೇವೇಂದ್ರ ಫಡ್ನವಿಸ್​ (Devendra Fadnavis) ಉಪಮುಖ್ಯಮಂತ್ರಿ ಹುದ್ದೆ ಪಡೆದಿದ್ದರು. ಇದೀಗ ಸಚಿವ ಸಂಪುಟ ರಚನೆಗೆ ಮಹಾರಾಷ್ಟ್ರ ಸರ್ಕಾರ ಕಸರತ್ತು ನಡೆಸಿದ್ದು, ನೂತನ ಸಂಪುಟದಲ್ಲಿ 38 ಸಚಿವರಿಗೆ ಮಂತ್ರಿ ಪಟ್ಟ ನೀಡುವ ಸಾಧ್ಯತೆಯಿದೆ. ಸಂಪುಟದಲ್ಲಿ ಬಿಜೆಪಿಗೆ ಹೆಚ್ಚು ಸಚಿವ ಸ್ಥಾನ ನೀಡಲಾಗುವುದು ಎನ್ನಲಾಗಿದೆ.

ಇದೀಗ ಸಚಿವ ಸಂಪುಟ ರಚನೆಗೆ ಮಹಾರಾಷ್ಟ್ರ ಸರ್ಕಾರ ಕಸರತ್ತು ನಡೆಸಿದ್ದು, ನೂತನ ಸಂಪುಟದಲ್ಲಿ 38 ಸಚಿವರನ್ನು ಹೊಂದುವ ಸಾಧ್ಯತೆಯಿದೆ. ಮಹಾರಾಷ್ಟ್ರದ ಹೊಸ ಸಂಪುಟದಲ್ಲಿ ಬಿಜೆಪಿಯಿಂದ 25, ಏಕನಾಥ್ ಶಿಂಧೆ ಅವರ ಶಿವಸೇನೆಯಿಂದ 13 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಹೊರತುಪಡಿಸಿ ಹೆಚ್ಚಿನ ಮಂತ್ರಿಗಳು ಹೊಸಬರಾಗಿದ್ದಾರೆ.

ಇದನ್ನೂ ಓದಿ: Eknath Shinde: ಪ್ರಜ್ಞೆ ತಪ್ಪಿದ ಮಹಿಳಾ ಕಾನ್​ಸ್ಟೆಬಲ್​ಗೆ ಸಹಾಯ ಮಾಡಿದ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ; ವಿಡಿಯೋ ವೈರಲ್

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಸಂಪುಟ ವಿಸ್ತರಣೆಗೆ ಮುಂದಾಗಿದೆ. ಮುಂದಿನ ಮಹಾರಾಷ್ಟ್ರ ಚುನಾವಣೆಗೆ ತಯಾರಿ ನಡೆಸುವ ಮುನ್ನ ಹೊಸಬರಿಗೆ ಸಚಿವ ಸ್ಥಾನ ನೀಡಿ, ಜನರ ಅಭಿಪ್ರಾಯವನ್ನು ತಿಳಿಯಲು ಬಿಜೆಪಿ ಬಯಸಿದೆ ಎಂದು ಮೂಲಗಳು ತಿಳಿಸಿವೆ. ಈ ಸಚಿವ ಸಂಪುಟ ವಿಸ್ತರಣೆಯು ಎರಡು ಹಂತಗಳಲ್ಲಿ ನಡೆಯುತ್ತದೆ. ಜುಲೈ 18ರಂದು ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯ ಮೊದಲು ಮತ್ತು ನಂತರ ಎರಡು ಹಂತದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ.

ಶಿವಸೇನೆಯೊಂದಿಗೆ ಮೈತ್ರಿ ಮಾಡಿಕೊಂಡ ನಂತರ ಮತ್ತೆ ಅಧಿಕಾರಕ್ಕೆ ಬಂದ ಬಿಜೆಪಿ ಪ್ರಮುಖ ಖಾತೆಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ. ಮೊದಲ ಹಂತದಲ್ಲಿ ಶಿವಸೇನೆಯ ಏಕನಾಥ್ ಶಿಂಧೆ ಬಣ ಮತ್ತು ಕೆಲವು ಬಿಜೆಪಿ ನಾಯಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Published On - 1:45 pm, Thu, 7 July 22

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು