ಡಿ. 5ರಂದು ಮಹಾರಾಷ್ಟ್ರದ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ; ಪ್ರಧಾನಿ ಮೋದಿ ಭಾಗಿ

ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದರ ಕುರಿತು ಇನ್ನೂ ಅಧಿಕೃತ ನಿರ್ಧಾರ ಹೊರಬಿದ್ದಿಲ್ಲ. ಇದರ ನಡುವೆ ಬಿಜೆಪಿ ಸಿಎಂ ಪ್ರಮಾಣವಚನ ಸ್ವೀಕಾರದ ದಿನಾಂಕವನ್ನು ಘೋಷಿಸಿದೆ. ಡಿಸೆಂಬರ್ 5ರಂದು ಪ್ರಧಾನಿ ಮೋದಿ ಸಮ್ಮುಖದಲ್ಲಿ ಮಹಾರಾಷ್ಟ್ರದ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಡಿ. 5ರಂದು ಮಹಾರಾಷ್ಟ್ರದ ನೂತನ ಸಿಎಂ ಪ್ರಮಾಣ ವಚನ ಸ್ವೀಕಾರ; ಪ್ರಧಾನಿ ಮೋದಿ ಭಾಗಿ
ಏಕನಾಥ್ ಶಿಂಧೆ, ಅಜಿತ್ ಪವಾರ್, ದೇವೇಂದ್ರ ಫಡ್ನವಿಸ್
Follow us
ಸುಷ್ಮಾ ಚಕ್ರೆ
|

Updated on: Nov 30, 2024 | 9:01 PM

ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮಿತ್ರಕೂಟದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಸಿಎಂ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ, ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಇನ್ನೂ ಘೋಷಣೆಯಾಗಿಲ್ಲ. ಈ ನಡುವೆ ಡಿಸೆಂಬರ್ 5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಗಾದಿಗಾಗಿ ಮಹಾಯುತಿಯ ಮೂರು ಘಟಕಗಳಾದ ಬಿಜೆಪಿ, ಎನ್‌ಸಿಪಿ ಮತ್ತು ಶಿವಸೇನೆ ನಡುವಿನ ಜಗಳದ ನಡುವೆಯೇ ಪ್ರಮಾಣವಚನ ಸ್ವೀಕಾರದ ದಿನಾಂಕ ಘೋಷಣೆಯಾಗಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.

ಮಹಾರಾಷ್ಟ್ರದಲ್ಲಿ ಮುಂದಿನ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತು ಮೈತ್ರಿಕೂಟವು ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಮತ್ತು ಸ್ಥಳವನ್ನು ನಿರ್ಧರಿಸಲಾಗಿದೆ. ಆದರೆ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಇನ್ನೂ ಘೋಷಿಸಲಾಗಿಲ್ಲ. ಆದರೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಇನ್ನೂ ಮುಖ್ಯಮಂತ್ರಿ ರೇಸ್​ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಆಯ್ಕೆ ಇನ್ನೂ ಅತಂತ್ರ; ಡಿ. 5ಕ್ಕೆ ಸಂಪುಟದ ಪ್ರಮಾಣವಚನ ಸ್ವೀಕಾರ ಸಾಧ್ಯತೆ

ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ 16,416 ಶಾಸಕರು, ಸಂಸದರು, ವಿವಿಧ ಸೆಲ್ ಅಧ್ಯಕ್ಷರು ಮತ್ತು ಮಂಡಲ ಅಧ್ಯಕ್ಷರು ಉಪಸ್ಥಿತರಿರಲಿದ್ದಾರೆ. 6,000-7,000 ಪಕ್ಷದ ಕಾರ್ಯಕರ್ತರು ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆಯ ಪದಾಧಿಕಾರಿಗಳು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಜಿತ್ ಪವಾರ್ ಅವರ ಎನ್‌ಸಿಪಿಯ 4,000 ಕಾರ್ಯಕರ್ತರು ಅಲ್ಲಿಗೆ ಆಗಮಿಸುವ ನಿರೀಕ್ಷೆಯಿದೆ. ಆಜಾದ್ ಮೈದಾನದ ಸಾಮರ್ಥ್ಯ 50 ಸಾವಿರ ಜನರು. ಸುಮಾರು 25,000 ಮಂದಿಗೆ ಆಸನ ವ್ಯವಸ್ಥೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ನೂತನ ಮಹಾರಾಷ್ಟ್ರ ಸಂಪುಟದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯಿಂದ ಗೃಹ ಖಾತೆಗೆ ಬೇಡಿಕೆ

ಈ ಹಿಂದೆ, ಮುಂದಿನ ಮುಖ್ಯಮಂತ್ರಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೈಗೊಂಡ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ನಿರ್ಗಮಿತ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಘೋಷಿಸಿದ್ದರು. ಬಳಿಕ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಜೊತೆ ಏಕನಾಥ್ ಶಿಂಧೆ ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದರು.

ಮಹಾರಾಷ್ಟ್ರದಲ್ಲಿ ತನ್ನ ಲೋಕಸಭಾ ಚುನಾವಣೆಯ ಸೋಲಿನಿಂದ ಚೇತರಿಸಿಕೊಂಡ ಬಿಜೆಪಿ 132 ಕ್ಷೇತ್ರಗಳನ್ನು ಗೆದ್ದುಕೊಂಡಿತು. ಇದು ಮಹಾಯುತಿಯ ಎಲ್ಲಾ ಮಿತ್ರಪಕ್ಷಗಳಲ್ಲಿ ಅತ್ಯಧಿಕವಾಗಿದೆ. ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ ಕೂಡ ಉತ್ತಮ ಪ್ರದರ್ಶನ ನೀಡಿವೆ. ಶಿವಸೇನೆ 57, ಎನ್‌ಸಿಪಿ 41 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೈಸೂರು: 188 ವರ್ಷಗಳ ಹಳೆಯದಾದ ಗರಡಿ ಮನೆ ಗೋಡೆ ಕುಸಿತ
ಮೈಸೂರು: 188 ವರ್ಷಗಳ ಹಳೆಯದಾದ ಗರಡಿ ಮನೆ ಗೋಡೆ ಕುಸಿತ
ಎಸ್ ಟಿ ಸೋಮಶೇಖರ್ ವಿರುದ್ಧ ಶಿಸ್ತುಕ್ರಮ, ಸುಳಿವು ನೀಡಿದ ಬಿವೈ ವಿಜಯೇಂದ್ರ
ಎಸ್ ಟಿ ಸೋಮಶೇಖರ್ ವಿರುದ್ಧ ಶಿಸ್ತುಕ್ರಮ, ಸುಳಿವು ನೀಡಿದ ಬಿವೈ ವಿಜಯೇಂದ್ರ
ಒಂದಿಬ್ಬರ ನಡುವಿನ ಜಗಳ ಪಕ್ಷದ ಕಲಹ ಆಗಲಾರದು: ರಾಧಾ ಮೋಹನ್ ದಾಸ್ ಅಗರವಾಲ್
ಒಂದಿಬ್ಬರ ನಡುವಿನ ಜಗಳ ಪಕ್ಷದ ಕಲಹ ಆಗಲಾರದು: ರಾಧಾ ಮೋಹನ್ ದಾಸ್ ಅಗರವಾಲ್
ತೆಲಂಗಾಣದಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ
ತೆಲಂಗಾಣದಲ್ಲಿ ಪ್ರಬಲ ಭೂಕಂಪ, ವಿಡಿಯೋ ಇಲ್ಲಿದೆ
ಸಚಿನ್ ತೆಂಡೂಲ್ಕರ್ ಮುಂದೆ ಅಸಹಾಯಕತೆ ತೋಡಿಕೊಂಡ ವಿನೋದ್ ಕಾಂಬ್ಳಿ
ಸಚಿನ್ ತೆಂಡೂಲ್ಕರ್ ಮುಂದೆ ಅಸಹಾಯಕತೆ ತೋಡಿಕೊಂಡ ವಿನೋದ್ ಕಾಂಬ್ಳಿ
ಸ್ಥಾನ ಉಳಿಸಿಕೊಳ್ಳಲು ಐಶ್ವರ್ಯಾ ಹೋರಾಟ; ಮಂಜುನೇ ಎದುರು ಹಾಕಿಕೊಂಡ್ರು
ಸ್ಥಾನ ಉಳಿಸಿಕೊಳ್ಳಲು ಐಶ್ವರ್ಯಾ ಹೋರಾಟ; ಮಂಜುನೇ ಎದುರು ಹಾಕಿಕೊಂಡ್ರು
ವೀಳ್ಯದೆಲೆ ಗಿಡ ಮನೆಯಲ್ಲಿ ಇದ್ದರೆ ಏನೆಲ್ಲಾ ಲಾಭವಾಗುತ್ತದೆ? ವಿಡಿಯೋ ನೋಡಿ
ವೀಳ್ಯದೆಲೆ ಗಿಡ ಮನೆಯಲ್ಲಿ ಇದ್ದರೆ ಏನೆಲ್ಲಾ ಲಾಭವಾಗುತ್ತದೆ? ವಿಡಿಯೋ ನೋಡಿ
ಸಣ್ಣ ವಿವಾದ, ಬೈಕ್ ಸವಾರನನ್ನು ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಚಾಲಕ
ಸಣ್ಣ ವಿವಾದ, ಬೈಕ್ ಸವಾರನನ್ನು ಕಾರಿನ ಬಾನೆಟ್​ ಮೇಲೆ ಎಳೆದೊಯ್ದ ಚಾಲಕ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಇಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಇಡೇರಲಿವೆ
ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..
ಬೆನ್ನಿಗೆ ವ್ಯಾಯಾಮ ನೀಡುವ ಯೋಗಾಸನ ಕಲಿಸಿದ ಶಿಲ್ಪಾ ಶೆಟ್ಟಿ; ವಿಡಿಯೋ ನೋಡಿ..