ಮುಂಬೈ: ಮಹಾರಾಷ್ಟ್ರದಲ್ಲಿ ಮಹಾಯುತಿ ಮಿತ್ರಕೂಟದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿರುವ ಬಿಜೆಪಿಗೆ ಸಿಎಂ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ. ಆದರೆ, ಸಿಎಂ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದು ಇನ್ನೂ ಘೋಷಣೆಯಾಗಿಲ್ಲ. ಈ ನಡುವೆ ಡಿಸೆಂಬರ್ 5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಬವಾಂಕುಲೆ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮುಖ್ಯಮಂತ್ರಿ ಗಾದಿಗಾಗಿ ಮಹಾಯುತಿಯ ಮೂರು ಘಟಕಗಳಾದ ಬಿಜೆಪಿ, ಎನ್‌ಸಿಪಿ ಮತ್ತು ಶಿವಸೇನೆ ನಡುವಿನ ಜಗಳದ ನಡುವೆಯೇ ಪ್ರಮಾಣವಚನ ಸ್ವೀಕಾರದ ದಿನಾಂಕ ಘೋಷಣೆಯಾಗಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ.
ಮಹಾರಾಷ್ಟ್ರದಲ್ಲಿ ಮುಂದಿನ ಸಂಪುಟದಲ್ಲಿ ಖಾತೆ ಹಂಚಿಕೆ ಕುರಿತು ಮೈತ್ರಿಕೂಟವು ಅಂತಿಮ ಒಪ್ಪಂದಕ್ಕೆ ಬಂದಿಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಮತ್ತು ಸ್ಥಳವನ್ನು ನಿರ್ಧರಿಸಲಾಗಿದೆ. ಆದರೆ ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಇನ್ನೂ ಘೋಷಿಸಲಾಗಿಲ್ಲ. ಆದರೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಇನ್ನೂ ಮುಖ್ಯಮಂತ್ರಿ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.
#WATCH | Nagpur, Maharashtra: State BJP President Chandrashekhar Bawankule says, “… The oath-taking ceremony of the Mahayuti government, will be held in Mumbai’s Azad Maidaan, in the presence of PM Narendra Modi, on 5 December 2024…” pic.twitter.com/MKJNhUvqoO
— ANI (@ANI) November 30, 2024
ಇದನ್ನೂ ಓದಿ: ಮಹಾರಾಷ್ಟ್ರ ಸಿಎಂ ಆಯ್ಕೆ ಇನ್ನೂ ಅತಂತ್ರ; ಡಿ. 5ಕ್ಕೆ ಸಂಪುಟದ ಪ್ರಮಾಣವಚನ ಸ್ವೀಕಾರ ಸಾಧ್ಯತೆ
ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಬಿಜೆಪಿಯ 16,416 ಶಾಸಕರು, ಸಂಸದರು, ವಿವಿಧ ಸೆಲ್ ಅಧ್ಯಕ್ಷರು ಮತ್ತು ಮಂಡಲ ಅಧ್ಯಕ್ಷರು ಉಪಸ್ಥಿತರಿರಲಿದ್ದಾರೆ. 6,000-7,000 ಪಕ್ಷದ ಕಾರ್ಯಕರ್ತರು ಮತ್ತು ಏಕನಾಥ್ ಶಿಂಧೆ ಅವರ ಶಿವಸೇನೆಯ ಪದಾಧಿಕಾರಿಗಳು ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅಜಿತ್ ಪವಾರ್ ಅವರ ಎನ್‌ಸಿಪಿಯ 4,000 ಕಾರ್ಯಕರ್ತರು ಅಲ್ಲಿಗೆ ಆಗಮಿಸುವ ನಿರೀಕ್ಷೆಯಿದೆ. ಆಜಾದ್ ಮೈದಾನದ ಸಾಮರ್ಥ್ಯ 50 ಸಾವಿರ ಜನರು. ಸುಮಾರು 25,000 ಮಂದಿಗೆ ಆಸನ ವ್ಯವಸ್ಥೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
राज्यातील महायुती सरकारचा शपथविधी
विश्वगौरव माननीय पंतप्रधान श्री. @narendramodi जी यांच्या उपस्थितीत गुरुवार, दि. ५ डिसेंबर २०२४ रोजी संध्याकाळी ५ वाजता आझाद मैदान, मुंबई येथे संपन्न होणार आहे.
राज्य में महायुती सरकार का शपथ ग्रहण समारोह
विश्वगौरव माननीय प्रधानमंत्री श्री…
— Chandrashekhar Bawankule (@cbawankule) November 30, 2024
ಇದನ್ನೂ ಓದಿ: ನೂತನ ಮಹಾರಾಷ್ಟ್ರ ಸಂಪುಟದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಯಿಂದ ಗೃಹ ಖಾತೆಗೆ ಬೇಡಿಕೆ
ಈ ಹಿಂದೆ, ಮುಂದಿನ ಮುಖ್ಯಮಂತ್ರಿ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೈಗೊಂಡ ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ನಿರ್ಗಮಿತ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಘೋಷಿಸಿದ್ದರು. ಬಳಿಕ ಅಜಿತ್ ಪವಾರ್ ಮತ್ತು ದೇವೇಂದ್ರ ಫಡ್ನವಿಸ್ ಜೊತೆ ಏಕನಾಥ್ ಶಿಂಧೆ ಗುರುವಾರ ರಾತ್ರಿ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಕುರಿತು ಚರ್ಚಿಸಿದರು.
ಮಹಾರಾಷ್ಟ್ರದಲ್ಲಿ ತನ್ನ ಲೋಕಸಭಾ ಚುನಾವಣೆಯ ಸೋಲಿನಿಂದ ಚೇತರಿಸಿಕೊಂಡ ಬಿಜೆಪಿ 132 ಕ್ಷೇತ್ರಗಳನ್ನು ಗೆದ್ದುಕೊಂಡಿತು. ಇದು ಮಹಾಯುತಿಯ ಎಲ್ಲಾ ಮಿತ್ರಪಕ್ಷಗಳಲ್ಲಿ ಅತ್ಯಧಿಕವಾಗಿದೆ. ಏಕನಾಥ್ ಶಿಂಧೆ ಅವರ ಶಿವಸೇನೆ ಮತ್ತು ಅಜಿತ್ ಪವಾರ್ ಅವರ ಎನ್‌ಸಿಪಿ ಕೂಡ ಉತ್ತಮ ಪ್ರದರ್ಶನ ನೀಡಿವೆ. ಶಿವಸೇನೆ 57, ಎನ್‌ಸಿಪಿ 41 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ