Maharashtra: ಮಹಾರಾಷ್ಟ್ರದ ಅಮಲ್ನೇರ್​ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕರ್ಫ್ಯೂ ಜಾರಿ, 31 ಜನರ ಬಂಧನ

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಅಮಲ್ನೇರ್‌ನಲ್ಲಿ ಎರಡು ಗುಂಪುಗಳ ನಡುವೆ ಸಣ್ಣ ಜಗಳದ ನಂತರ ಘರ್ಷಣೆ ಸಂಭವಿಸಿದೆ. ನಗರದಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Maharashtra: ಮಹಾರಾಷ್ಟ್ರದ ಅಮಲ್ನೇರ್​ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ, ಕರ್ಫ್ಯೂ ಜಾರಿ, 31 ಜನರ ಬಂಧನ
ಮಹಾರಾಷ್ಟ್ರದಲ್ಲಿ ಕರ್ಫ್ಯೂ
Image Credit source: India Today

Updated on: Jun 11, 2023 | 12:55 PM

ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ಅಮಲ್ನೇರ್‌ನಲ್ಲಿ ಎರಡು ಗುಂಪುಗಳ ನಡುವೆ ಸಣ್ಣ ಜಗಳದ ನಂತರ ಘರ್ಷಣೆ ಸಂಭವಿಸಿದೆ. ನಗರದಲ್ಲಿ 48 ಗಂಟೆಗಳ ಕಾಲ ಕರ್ಫ್ಯೂ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 9 ರಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಕ್ಕಳ ಆಟಿಕೆಗಳ ಬಗ್ಗೆ ಎರಡು ಗುಂಪುಗಳ ನಡುವೆ ತೀವ್ರ ವಾಗ್ವಾದ ನಡೆದಾಗ ಈ ಘಟನೆ ಸಂಭವಿಸಿದೆ. ನಂತರ ವಾದವು ಹಿಂಸಾತ್ಮಕ ತಿರುವು ಪಡೆದುಕೊಂಡಿತು ಮತ್ತು ಎರಡೂ ಗುಂಪುಗಳು ಪರಸ್ಪರ ಇಟ್ಟಿಗೆಗಳಲ್ಲಿ ಹೊಡೆದಾಡಿಕೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ 100 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 31 ಜನರನ್ನು ಬಂಧಿಸಲಾಗಿದೆ.
ಘರ್ಷಣೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಜೂನ್ 10 ರಂದು ಬೆಳಿಗ್ಗೆ 11 ರಿಂದ ಜೂನ್ 12 ರ ಬೆಳಿಗ್ಗೆ 11 ರವರೆಗೆ ಕರ್ಫ್ಯೂ ವಿಧಿಸಲಾಗಿದೆ. ಅಗತ್ಯವಿದ್ದರೆ ಕರ್ಫ್ಯೂ ವಿಸ್ತರಿಸಬಹುದು.

ಮತ್ತಷ್ಟು ಓದಿ: Manipur: ಹಿಂಸಾಚಾರ ಪೀಡಿತ ಮಣಿಪುರ ಸಹಜ ಸ್ಥಿತಿಗೆ; ಕರ್ಫ್ಯೂ ಸಡಿಲಿಕೆ

ಕರ್ಫ್ಯೂ ಜಾರಿಯಾದಾಗಿನಿಂದ ಪರಿಸ್ಥಿತಿ ಶಾಂತಿಯುತವಾಗಿದೆ. ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಎರಡೂ ಗುಂಪಿನ ಆರೋಪಿಗಳನ್ನು ಪತ್ತೆ ಹಚ್ಚಲು ಪೊಲೀಸರು ಸಿಸಿಟಿವಿಗಳನ್ನು ಪರಿಶೀಲಿಸುತ್ತಿದ್ದಾರೆ.

ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಜಲಗಾಂವ್ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಎಂ ರಾಜ್‌ಕುಮಾರ್ ಜನರಿಗೆ ಮನವಿ ಮಾಡಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ