ಕಾಲೇಜಿನ ಬೀಳ್ಕೊಡುಗೆ ಸಮಾರಂಭದಂದು ಭಾಷಣ ಮಾಡುತ್ತಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಮಹಾರಾಷ್ಟ್ರದ ಕಾಲೇಜೊಂದರಲ್ಲಿ ತಮ್ಮ ಕಾಲೇಜಿನ ಬೀಳ್ಕೊಡುಗೆ ಸಮಾರಂಭದಂದು ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಇದೀಗ ವಿಡಿಯೋ ವೈರಲ್ ಆಗಿದ್ದು, ಯುವಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಬಗ್ಗೆ ಕಳವಳ ಹೆಚ್ಚಾಗಿದೆ. ವರ್ಷಾ ಮಾತನಾಡುವಾಗ ಪ್ರಜ್ಞೆ ತಪ್ಪಿ ಬಿದ್ದ ಕಾರಣ ಅವರನ್ನು ಪರಾಂಡದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು.

ಕಾಲೇಜಿನ ಬೀಳ್ಕೊಡುಗೆ ಸಮಾರಂಭದಂದು ಭಾಷಣ ಮಾಡುತ್ತಲೇ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು
ವಿದ್ಯಾರ್ಥಿನಿ ಸಾವು

Updated on: Apr 06, 2025 | 10:13 AM

ಮಹಾರಾಷ್ಟ್ರ, ಏಪ್ರಿಲ್ 06: ಕಾಲೇಜಿನ ಬೀಳ್ಕೊಡುವೆ ಸಮಾರಂಭದಂದು ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ವಿದ್ಯಾರ್ಥಿನಿ(Student) ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಧಾರಾಶಿವ್​ನಲ್ಲಿ ನಡೆದಿದೆ. ಘಟನೆ ನಡೆದಾಗ ಕಾಲೇಜು ವಿದ್ಯಾರ್ಥಿನಿ ವರ್ಷಾ ಖರತ್ ಪರಂಡದ ಆರ್‌ಜಿ ಶಿಂಧೆ ಕಾಲೇಜಿನಲ್ಲಿ ಸಂತೋಷದಿಂದ ಭಾಷಣ ಮಾಡುತ್ತಿದ್ದಳು.

ಇಡೀ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಆನ್‌ಲೈನ್‌ನಲ್ಲಿ ಪ್ರಸಾರವಾಗುವ ವೀಡಿಯೊದಲ್ಲಿ ವರ್ಷಾ ಪ್ರಜ್ಞೆ ತಪ್ಪಿ ಕುಸಿದು ಬೀಳುವ ಕ್ಷಣಗಳ ಮೊದಲು ನಗುತ್ತಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿರುವುದನ್ನು ತೋರಿಸುತ್ತದೆ.

ಇದನ್ನೂ ಓದಿ
ಕಿಕ್ಕಿರಿದ ಜನಜಂಗುಳಿ ನಡುವೆ ಮೆಟ್ರೋದಲ್ಲಿ ಸೀಟ್ ಸಿಗಲ್ವಾ? ಹೀಗೆ ಮಾಡಿ
ವಿಮಾನದಲ್ಲಿ ಜಗಳ, ಸಿಬ್ಬಂದಿಯನ್ನು ಕಚ್ಚಿದ ಪ್ರಯಾಣಿಕ
6 ತಿಂಗಳ ಮಗುವನ್ನೆತ್ತಿಕೊಂಡು ಕೆಂಡ ಹಾಯಲು ಹೋಗಿ ಮುಗ್ಗರಿಸಿ ಬಿದ್ದ ವ್ಯಕ್ತ
ಪತ್ನಿಯ ಹಲ್ಲೆ, ಕಿರುಕುಳದಿಂದ ಬೇಸತ್ತು ಕಂಪ್ಲೇಂಟ್ ಕೊಟ್ಟ ಗಂಡ

ವರ್ಷಾ ಮಾತನಾಡುವಾಗ ಪ್ರಜ್ಞೆ ತಪ್ಪಿ ಬಿದ್ದ ಕಾರಣ ಅವರನ್ನು ಪರಾಂಡದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ವರ್ಷಾ 8 ವರ್ಷದವಳಿದ್ದಾಗ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಆದರೆ ಕಳೆದ ಹನ್ನೆರಡು ವರ್ಷಗಳಿಂದ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಿರಲಿಲ್ಲ ಮತ್ತು ಯಾವುದೇ ಔಷಧಿಗಳನ್ನು ತೆಗೆದುಕೊಳ್ಳುತ್ತಿರಲಿಲ್ಲ.

ಮತ್ತಷ್ಟು ಓದಿ: Video: ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ, ವ್ಯಕ್ತಿ ಸಾವು

ಭಾಷಣ ಮಾಡುತ್ತಿದ್ದಾಗ ಅವರಿಗೆ ಹಠಾತ್ ಹೃದಯಾಘಾತವಾಗಿ ಸಾವು ಸಂಭವಿಸಿದೆ ಎಂಬ ಊಹಾಪೋಹಗಳಿವೆ. ವರ್ಷಾ ಅವರ ನಿಧನಕ್ಕೆ ಕಾಲೇಜು ಆಡಳಿತ ಮಂಡಳಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಒಂದು ದಿನದ ರಜೆ ಘೋಷಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:12 am, Sun, 6 April 25