Maharashtra: ಅಸಭ್ಯ ವರ್ತನೆ: ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರನ್ನು ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ
ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರನ್ನು ಮಹಿಳೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ.
ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರನ್ನು ಮಹಿಳೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ. ಶಾಲಾ ಮುಖ್ಯೋಪಾಧ್ಯಾಯರು ಮಹಿಳೆ ಮೇಲೆ ಅಶ್ಲೀಲ ಕಮೆಂಟ್ ಮಾಡಿದ್ದರು, ಇದಕ್ಕೆ ಕೋಪಗೊಂಡ ಮಹಿಳೆ ಅವರನ್ನು ಥಳಿಸಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ವ್ಯಕ್ತಿಯು ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದಾರೆ. ಮುಖ್ಯ ಶಿಕ್ಷಕರಿಗೆ ಕೋಲಿನಿಂದ ಮಹಿಳೆ ಥಳಿಸಿದ್ದಾರೆ.
ಈ ಘಟನೆ ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಶಿಕ್ಷಕ ಶಿಕ್ಷಿತನಾಗಿಯೂ ಇಂತಹ ಕೆಲಸ ಮಾಡಿದ್ದಕ್ಕೆ ಛೀಮಾರಿ ಹಾಕಲಾಗಿದೆ.
ಮತ್ತಷ್ಟು ಓದಿ: 8ನೇ ಕ್ಲಾಸ್ ವಿದ್ಯಾರ್ಥಿನಿಗೆ ಪ್ರೇಮ ಪತ್ರ, ಮಗಳ ವಯಸ್ಸಿನ ಬಾಲಕಿಯನ್ನು ಮದ್ವೆಯಾಗುವ ಆಸೆ ವ್ಯಕ್ತಪಡಿಸಿದ ಶಿಕ್ಷಕ
ಮುಖ್ಯಶಿಕ್ಷಕ ಗ್ರಾಮಕ್ಕೆ ಬರುತ್ತಿದ್ದಾರೆ ಎಂದು ತಿಳಿದ ಕೂಡಲೇ ಅಲ್ಲಿಗೆ ತೆರಳಿ ಹಲ್ಲೆ ನಡೆಸಿದ್ದಾರೆ. ಆ ಮಹಿಳೆಯ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ತಡೆಯಲು ಪ್ರಯತ್ನಿಸುತ್ತಿದ್ದರು. ಈ ಹಿಂದೆಯೂ ಮುಖ್ಯಶಿಕ್ಷಕರ ವಿರುದ್ಧ ಸಾಕಷ್ಟು ಪ್ರಕರಣಗಳು ದಾಖಲಾಗಿದ್ದವು.
ತಕ್ಷಣಕ್ಕೆ ಜನರು ಸೇರಿದ್ದರು, ಅಂತಿಮವಾಗಿ ಮಹಿಳೆಯ ಮಗಳು ತಾಯಿಯನ್ನು ಸಮಾಧಾನ ಪಡಿಸಿ ಆ ಜಾಗದಿಂದ ಕರೆದುಕೊಂಡು ಹೋಗುವಲ್ಲಿ ಯಶಸ್ವಿಯಾದಳು. ಇಲ್ಲಿಯವರೆಗೆ ಮುಖ್ಯಶಿಕ್ಷಕನ ವಿರುದ್ಧ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ