Maharashtra: ಅಸಭ್ಯ ವರ್ತನೆ: ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರನ್ನು ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರನ್ನು ಮಹಿಳೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ.

Maharashtra: ಅಸಭ್ಯ ವರ್ತನೆ: ಸರ್ಕಾರಿ ಶಾಲಾ ಮುಖ್ಯ ಶಿಕ್ಷಕರನ್ನು ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ
ಶಾಲಾ ಮುಖ್ಯಶಿಕ್ಷಕರಿಗೆ ಥಳಿತ
Image Credit source: Times Now

Updated on: Mar 10, 2023 | 8:57 AM

ತನ್ನೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕೆ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರನ್ನು ಮಹಿಳೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ ನಡೆದಿದೆ. ಶಾಲಾ ಮುಖ್ಯೋಪಾಧ್ಯಾಯರು ಮಹಿಳೆ ಮೇಲೆ ಅಶ್ಲೀಲ ಕಮೆಂಟ್​ ಮಾಡಿದ್ದರು, ಇದಕ್ಕೆ ಕೋಪಗೊಂಡ ಮಹಿಳೆ ಅವರನ್ನು ಥಳಿಸಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆ ವ್ಯಕ್ತಿಯು ಜಿಲ್ಲೆಯ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದಾರೆ. ಮುಖ್ಯ ಶಿಕ್ಷಕರಿಗೆ ಕೋಲಿನಿಂದ ಮಹಿಳೆ ಥಳಿಸಿದ್ದಾರೆ.

ಈ ಘಟನೆ ರಾಜ್ಯದ ಶಿಕ್ಷಣ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಶಿಕ್ಷಕ ಶಿಕ್ಷಿತನಾಗಿಯೂ ಇಂತಹ ಕೆಲಸ ಮಾಡಿದ್ದಕ್ಕೆ ಛೀಮಾರಿ ಹಾಕಲಾಗಿದೆ.

ಮತ್ತಷ್ಟು ಓದಿ: 8ನೇ ಕ್ಲಾಸ್ ವಿದ್ಯಾರ್ಥಿನಿಗೆ ಪ್ರೇಮ ಪತ್ರ, ಮಗಳ ವಯಸ್ಸಿನ ಬಾಲಕಿಯನ್ನು ಮದ್ವೆಯಾಗುವ ಆಸೆ ವ್ಯಕ್ತಪಡಿಸಿದ ಶಿಕ್ಷಕ

ಮುಖ್ಯಶಿಕ್ಷಕ ಗ್ರಾಮಕ್ಕೆ ಬರುತ್ತಿದ್ದಾರೆ ಎಂದು ತಿಳಿದ ಕೂಡಲೇ ಅಲ್ಲಿಗೆ ತೆರಳಿ ಹಲ್ಲೆ ನಡೆಸಿದ್ದಾರೆ. ಆ ಮಹಿಳೆಯ ಪಕ್ಕದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರು ತಡೆಯಲು ಪ್ರಯತ್ನಿಸುತ್ತಿದ್ದರು. ಈ ಹಿಂದೆಯೂ ಮುಖ್ಯಶಿಕ್ಷಕರ ವಿರುದ್ಧ ಸಾಕಷ್ಟು ಪ್ರಕರಣಗಳು ದಾಖಲಾಗಿದ್ದವು.

ತಕ್ಷಣಕ್ಕೆ ಜನರು ಸೇರಿದ್ದರು, ಅಂತಿಮವಾಗಿ ಮಹಿಳೆಯ ಮಗಳು ತಾಯಿಯನ್ನು ಸಮಾಧಾನ ಪಡಿಸಿ ಆ ಜಾಗದಿಂದ ಕರೆದುಕೊಂಡು ಹೋಗುವಲ್ಲಿ ಯಶಸ್ವಿಯಾದಳು. ಇಲ್ಲಿಯವರೆಗೆ ಮುಖ್ಯಶಿಕ್ಷಕನ ವಿರುದ್ಧ ಯಾವುದೇ ಕ್ರಮವನ್ನು ತೆಗೆದುಕೊಂಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us