AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Political Crisis: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ

ಎಐಸಿಸಿ ವೀಕ್ಷಕ ಕಮಲ್​ನಾಥ್ ನೇತೃತ್ವದಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಶಿವಸೇನೆಯಲ್ಲಿ ಅಸಮಾಧಾನ ಸ್ಫೋಟಗೊಂಡ ಬೆನ್ನಲ್ಲೇ ಕಾಂಗ್ರೆಸ್ ತನ್ನ ಹಿರಿಯ ನಾಯಕ ಹಾಗೂ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ಎಐಸಿಸಿ ವೀಕ್ಷಕರನ್ನಾಗಿ ನಿಯೋಜಿಸಲಾಗಿತ್ತು.

Political Crisis: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಕಮಲ್ ನಾಥ್ ನೇತೃತ್ವದಲ್ಲಿ ಕಾಂಗ್ರೆಸ್ ಸಭೆ
Kamal Nath
TV9 Web
| Updated By: ನಯನಾ ರಾಜೀವ್|

Updated on:Jun 22, 2022 | 12:04 PM

Share

ಮುಂಬೈ: ಎಐಸಿಸಿ ವೀಕ್ಷಕ ಕಮಲ್​ನಾಥ್ ನೇತೃತ್ವದಲ್ಲಿ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಆಡಳಿತಾರೂಢ ಶಿವಸೇನೆಯಲ್ಲಿ ಅಸಮಾಧಾನ ಸ್ಫೋಟಗೊಂಡ ಬೆನ್ನಲ್ಲೇ ಕಾಂಗ್ರೆಸ್ ತನ್ನ ಹಿರಿಯ ನಾಯಕ ಹಾಗೂ ಮಧ್ಯ ಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರನ್ನು ಎಐಸಿಸಿ ವೀಕ್ಷಕರನ್ನಾಗಿ ನಿಯೋಜಿಸಲಾಗಿತ್ತು.

ಮಹಾರಾಷ್ಟ್ರದ ಎಂವಿಎ ಸರ್ಕಾರದಲ್ಲಿ ಕಾಂಗ್ರೆಸ್, ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ(ಎನ್‌ಸಿಪಿ) ಮತ್ತು ಶಿವಸೇನೆಯೊಂದಿಗೆ ಅಧಿಕಾರವನ್ನು ಹಂಚಿಕೊಂಡಿದೆ. ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಎಂವಿಎ ಸ್ಪರ್ಧಿಸಿದ ಆರು ಸ್ಥಾನಗಳಲ್ಲಿ ಒಂದನ್ನು ಕಳೆದುಕೊಳ್ಳುವ ಮೂಲಕ ಹಿನ್ನಡೆ ಅನುಭವಿಸಿದ ಒಂದು ದಿನದ ನಂತರ ಶಿವಸೇನೆಯ ಹಿರಿಯ ನಾಯಕ ಮತ್ತು ಸಚಿವ ಏಕನಾಥ್ ಶಿಂಧೆ ಅವರು ನಾಪತ್ತೆಯಾಗಿದ್ದಾರೆಂದು ಪಕ್ಷದ ನಾಯಕರೊಬ್ಬರು ತಿಳಿಸಿದ್ದಾರೆ.

ಈಗಾಗಲೇ ಸಿಎಲ್​ಪಿ ನಾಯಕ ಹಾಗೂ ಸಚಿವ ಬಾಳಾಸಾಹೇಬ್ ಥೋರಟ್ ಅವರ ನಿವಾಸಕ್ಕೆ ಕಮಲ್​ ನಾಥ್ ಬಂದಿದ್ದು, 43 ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಭಾಗವಹಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಹಾರಾಷ್ಟ್ರದಲ್ಲಿ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ತಕ್ಷಣವೇ ಜಾರಿಗೆ ಬರುವಂತೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು, ಕಮಲ್ ನಾಥ್ ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ ವೀಕ್ಷಕರನ್ನಾಗಿ ನಿಯೋಜಿಸಿದ್ದಾರೆ ನಿಯೋಜಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಮಧ್ಯಾಹ್ನ 1 ಕ್ಕೆ ಸಂಪುಟ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಶಾಸಕರು ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದಾರೆ. ಪಕ್ಷೇತರ ಶಾಸಕರ ಜೊತೆ ಶಿವಸೇನೆ ಶಾಸಕರು ಗುವಾಹಟಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಈ ಹಿನ್ನೆಲೆಯಲ್ಲಿ ಸಂಪುಟ ಸಭೆ ಕರೆಯಲಾಗಿದೆ.

ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವರಾಗಿದ್ದ ಏಕನಾಥ್ ಶಿಂಧೆ ಬಂಡಾಯವೆದ್ದಿದ್ದು, ವಿಧಾನ ಪರಿಷತ್‌ ಮತ್ತು ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲೇ ಹತ್ತಕ್ಕೂ ಹೆಚ್ಚು ಸೇನಾ ಶಾಸಕರೊಂದಿಗೆ ಸೂರತ್‌ಗೆ ತೆರಳಿದ್ದರು. ಅಲ್ಲದೇ 26ಕ್ಕೂ ಹೆಚ್ಚು ಶಾಸಕರು ಉದ್ಧವ್‌ ಠಾಕ್ರೆ ವಿರುದ್ಧ ಬಂಡಾಯವೆದ್ದು, ಶಿಂಧೆ ಜೊತೆ ಗುಜರಾತ್‌ಗೆ ತೆರಳಿದ್ದರು. ಇದೀಗ ರೆಬೆಲ್ ಶಾಸಕರನ್ನ ಸೂರತ್‌ನಿಂದ ಅಸ್ಸಾಂಗೆ ಸ್ಥಳಾಂತರಿಸಲಾಗಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:03 pm, Wed, 22 June 22