AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Political Crisis: ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ; ಸಿಎಂ ಆಗಿ ನಾಳೆ ದೇವೇಂದ್ರ ಫಡ್ನವಿಸ್ ಪ್ರಮಾಣವಚನ?

ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ನಾಳೆ ಮಹಾರಾಷ್ಟ್ರದ 20ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Maharashtra Political Crisis: ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ; ಸಿಎಂ ಆಗಿ ನಾಳೆ ದೇವೇಂದ್ರ ಫಡ್ನವಿಸ್ ಪ್ರಮಾಣವಚನ?
ದೇವೇಂದ್ರ ಫಡ್ನವಿಸ್
TV9 Web
| Updated By: ಸುಷ್ಮಾ ಚಕ್ರೆ|

Updated on: Jun 30, 2022 | 10:43 AM

Share

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ತೀವ್ರ ಕುತೂಹಲ ಕೆರಳಿಸಿವೆ. ಮಹಾರಾಷ್ಟ್ರ (Maharashtra Crisis) ತೊರೆದು ಗುವಾಹಟಿ ಹೋಟೆಲ್​ ಸೇರಿಕೊಂಡಿದ್ದ ರೆಬೆಲ್ ಶಾಸಕರ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದ್ದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೊನೆಗೂ ನಿನ್ನೆ ರಾತ್ರಿ ರಾಜೀನಾಮೆ ನೀಡಿದ್ದಾರೆ. ಈ ನಡುವೆ ಅವಿಶ್ವಾಸ ನಿರ್ಣಯ ಮಂಡನೆ ದಿನಾಂಕ ಮುಂದೂಡಿಕೆಯಾಗಿದೆ. ನಾಳೆ ದೇವೇಂದ್ರ ಫಡ್ನವಿಸ್ (Devendra Fadnavis) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ. ಬಂಡಾಯ ಶಾಸಕರ ಬಣದ ನಾಯಕ ಏಕನಾಥ್ ಶಿಂಧೆಗೆ (Eknath Shinde) ಉಪಮುಖ್ಯಮಂತ್ರಿ ಸ್ಥಾನ ಸಿಗುವ ನಿರೀಕ್ಷೆಯಿದೆ.

ಬುಧವಾರ ರಾತ್ರಿ ಉದ್ಧವ್ ಠಾಕ್ರೆ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮಹಾರಾಷ್ಟ್ರ ವಿಧಾನಸಭೆಯ ವಿಶ್ವಾಸಮತಯಾಚನೆಯ ದಿನಾಂಕವನ್ನು ಮುಂದೂಡಲಾಗಿದೆ. ಇದೀಗ ಮಾಜಿ ಸಿಎಂ ಹಾಗೂ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ನಾಳೆ ಮಹಾರಾಷ್ಟ್ರದ 20ನೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇಂದು ಬೆಳಗ್ಗೆ 11 ಗಂಟೆಗೆ ಬಿಜೆಪಿ ಕೋರ್ ಗ್ರೂಪ್ ಸಭೆ ಸೇರಲಿದ್ದು, ಮೊದಲು ಶಿವಸೇನೆಯ ಬಂಡಾಯ ಶಾಸಕರ ಜೊತೆ ಮಾತುಕತೆ ನಡೆಸಲಾಗುವುದು. ಮಹಾರಾಷ್ಟ್ರದ ಬಿಜೆಪಿಯ ಪ್ರಮುಖ ಗುಂಪು ಶಿವಸೇನೆಯ ಬಂಡಾಯ ಶಾಸಕರ ಬಣದೊಂದಿಗೆ ಮಧ್ಯಾಹ್ನ 1.30ರ ಸುಮಾರಿಗೆ ಸಭೆ ಸೇರಲಿದೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ನಾಳೆ ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಹೆಚ್ಚಾಗಿದೆ.

ಇದನ್ನೂ ಓದಿ: Maharashtra Floor Test ಮಹಾರಾಷ್ಟ್ರದಲ್ಲಿ ನಾಳೆ ನಡೆಯಲಿರುವ ವಿಶ್ವಾಸಮತ ಯಾಚನೆಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂಕೋರ್ಟ್

ಬಿಜೆಪಿ ಜೊತೆಗೂಡಿ ಸರ್ಕಾರ ರಚಿಸಿದ ನಂತರ ಏಕನಾಥ್ ಶಿಂಧೆ ಅವರಿಗೆ ಉಪ ಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಇದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನದಿಂದ ಉದ್ಧವ್ ಠಾಕ್ರೆ ಕೆಳಗಿಳಿಯುತ್ತಿದ್ದಂತೆ ಬಿಜೆಪಿ ಪಾಳಯದಲ್ಲಿ ಬುಧವಾರ ಸಂಜೆಯಿಂದಲೇ ಸಂಭ್ರಮಾಚರಣೆ ಆರಂಭವಾಗಿದೆ. ಮುಂಬೈನ ತಾಜ್ ಹೋಟೆಲ್‌ನಲ್ಲಿ ಬಿಜೆಪಿ ನಾಯಕರು ಸಿಹಿ ಹಂಚಿ, ಘೋಷಣೆಗಳನ್ನು ಕೂಗುತ್ತಿರುವುದು ಕಂಡು ಬಂತು.