Maharashtra Crisis: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು. ಸುಪ್ರೀಂ ಕೋರ್ಟ್​ನಲ್ಲಿ ಇಂದು ಘಟಾನುಘಟಿ ವಕೀಲರ ಮುಖಾಮುಖಿ

2019ರಲ್ಲಿ ಕರ್ನಾಟಕ ರಾಜಕೀಯ ಬಿಕ್ಕಟ್ಟಿನ ಸಂದರ್ಭದಲ್ಲೂ ಕಾಂಗ್ರೆಸ್ ಪರವಾಗಿ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಿದ್ದರು. ಇದೀಗ ಶಿವಸೇನೆ ಪರವಾಗಿಯೂ ಅಭಿಷೇಕ್ ಸಿಂಘ್ವಿಯವರೇ ವಾದ ಮಂಡಿಸಲಿದ್ದಾರೆ. ಅತೃಪ್ತರ ಪರ ಹಿರಿಯ ವಕೀಲ ಹರೀಶ್ ಸಾಳ್ವೆ ವಾದಿಸಲಿದ್ದಾರೆ.

Maharashtra Crisis: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು. ಸುಪ್ರೀಂ ಕೋರ್ಟ್​ನಲ್ಲಿ ಇಂದು ಘಟಾನುಘಟಿ ವಕೀಲರ ಮುಖಾಮುಖಿ
ಹರೀಶ್ ಸಾಳ್ವೆ- ಅಭಿಷೇಕ್ ಮನು ಸಿಂಘ್ವಿImage Credit source: Aaj Tak
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 27, 2022 | 10:04 AM

ಮುಂಬೈ: ಈ ಹಿಂದೆ ಕರ್ನಾಟಕದಲ್ಲಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ನೇತೃತ್ವದ ಮೈತ್ರಿ ಸರ್ಕಾರವನ್ನು ಪತನಗೊಳಿಸಿದ್ದ ಅತೃಪ್ತ ಶಾಸಕರು ತಮ್ಮನ್ನು ಸ್ಪೀಕರ್ ಅನರ್ಹಗೊಳಿಸಿದ್ದಕ್ಕೆ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ್ದರು. ಇದೀಗ ಮಹಾರಾಷ್ಟ್ರದಲ್ಲೂ ಅದೇ ರೀತಿಯ ಪರಿಸ್ಥಿತಿ ಎದುರಾಗಿದೆ. ಸುಪ್ರೀಂ ಕೋರ್ಟ್​ನಲ್ಲಿ (Supreme Court) ಈ ಪ್ರಕರಣದ ವಿಚಾರಣೆ ಇಂದು ನಡೆಯಲಿದೆ. ವಿಶೇಷವೆಂದರೆ, ಕರ್ನಾಟಕದಲ್ಲಿ ಸರ್ಕಾರ ಮತ್ತು ಅತೃಪ್ತ ಬಣದ ಬಿಕ್ಕಟ್ಟಿನ ಪ್ರಕರಣದಲ್ಲಿ ವಾದ ಮಂಡಿಸಿದ್ದ ವಕೀಲರೇ ಇದೀಗ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನ (Maharashtra Political Crisis) ವಿಚಾರಣೆಯಲ್ಲಿ ವಾದ ಮಂಡಿಸಿದ್ದ ಇಬ್ಬರು ವಕೀಲರು ಈ ಬಾರಿಯೂ ವಾದ ಮಂಡಿಸಲಿದ್ದಾರೆ.

ಇಂದು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರದ ಅತೃಪ್ತ ಶಾಸಕರ ಬಣದ ಪರವಾಗಿ ವಕೀಲ ಹರೀಶ್ ಸಾಳ್ವೆ ವಾದ ಮಂಡಿಸಲಿದ್ದಾರೆ. ಡೆಪ್ಯುಟಿ ಸ್ಪೀಕರ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಲಿದ್ದಾರೆ. ಶಿವಸೇನೆ ನೇತೃತ್ವದ ಮೈತ್ರಿ ಸರ್ಕಾರದ ಪರವಾಗಿ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಲಿದ್ದಾರೆ. ಈ ಹಿಂದೆ ಕರ್ನಾಟಕದ 2019ರ ಸರ್ಕಾರ ರಚನೆ ವೇಳೆಯೂ ಅಭಿಷೇಕ್ ಮನುಸಿಂಘ್ವಿ ಕಾಂಗ್ರೆಸ್ ಪರವಾಗಿ ವಾದ ಮಂಡಿಸಿದ್ದರು.

ಮಹಾರಾಷ್ಟ್ರದ ರಾಜಕೀಯ ಹೋರಾಟ ಇದೀಗ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಬಂಡಾಯವೆದ್ದ ಶಿವಸೇನೆಯ ಏಕನಾಥ್ ಶಿಂಧೆ ಬಣದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಲಿದೆ. ಏಕನಾಥ್ ಶಿಂಧೆ ಸೇರಿದಂತೆ ಅವರ ಬಣದ ಪರವಾದ 15 ಶಾಸಕರು ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಅರ್ಜಿಯಲ್ಲಿ ಎರಡು ವಿಷಯಗಳನ್ನು ನಿರ್ದಿಷ್ಟವಾಗಿ ಉಲ್ಲೇಖಿಸಲಾಗಿದೆ. ಮೊದಲನೆಯದಾಗಿ ಉಪಸಭಾಪತಿಯವರನ್ನು ಅನರ್ಹಗೊಳಿಸುವಂತೆ ಸೂಚಿಸಿರುವ ಶಾಸಕರು, ಎರಡನೆಯದಾಗಿ ತಮಗೆ ಹಾಗೂ ತಮ್ಮ ಕುಟುಂಬಕ್ಕೆ ನ್ಯಾಯಾಲಯದಿಂದ ರಕ್ಷಣೆ ನೀಡುವಂತೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ
Image
Maharashtra Crisis: ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ; ಹೋಟೆಲ್​ನಿಂದ ನ್ಯಾಯಾಲಯದ ಮೆಟ್ಟಿಲೇರಿದ ಅತೃಪ್ತ ಶಾಸಕರು
Image
MVA Crisis: ಬಾಳಾಸಾಹೇಬರ ಹೆಸರು ಬಿಡಿ, ನಿಮ್ಮಪ್ಪನ ಹೆಸರು ಬಳಸಿಕೊಳ್ಳಿ: ಬಂಡಾಯ ಶಾಸಕರಿಗೆ ಸಂಜಯ್ ರಾವುತ್ ಸವಾಲು
Image
ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಉದ್ಧವ್ ಠಾಕ್ರೆಗೆ ನೀಡಿ ನಿರ್ಣಯ ಅಂಗೀಕರಿಸಿದ ಶಿವಸೇನಾ
Image
MVA Crisis: ವಿಶ್ವಾಸಮತ ಯಾಚನೆಗೆ ಮೈತ್ರಿ ಸರ್ಕಾರದ ಸಿದ್ಧತೆ, ಶರದ್ ಪವಾರ್ ಉರುಳಿಸುವ ದಾಳದ ಬಗ್ಗೆ ಕುತೂಹಲ

ಇದನ್ನೂ ಓದಿ: Maharashtra Crisis: ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ; ಹೋಟೆಲ್​ನಿಂದ ನ್ಯಾಯಾಲಯದ ಮೆಟ್ಟಿಲೇರಿದ ಅತೃಪ್ತ ಶಾಸಕರು

ಇಂದು ಸುಪ್ರೀಂ ಕೋರ್ಟ್‌ನಲ್ಲಿ ಏಕನಾಥ್ ಶಿಂಧೆ ಬಣದ ಪರವಾಗಿ ಹಿರಿಯ ವಕೀಲ ಹರೀಶ್ ಸಾಳ್ವೆ ಅವರು ವಾದ ಮಂಡಿಸಲಿದ್ದಾರೆ. ಇದೇ ವೇಳೆ ಶಿವಸೇನೆ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಉಪಸಭಾಪತಿ ಪರವಾಗಿ ಕಪಿಲ್ ಸಿಬಲ್ ವಾದ ಮಂಡಿಸಲಿದ್ದಾರೆ. ಸುಪ್ರೀಂ ಕೋರ್ಟ್​ನ ಜಸ್ಟೀಸ್ ಸೂರ್ಯಕಾಂತ್, ಜಸ್ಟೀಸ್ ಜೆ.ಬಿ. ಪರ್ದಿವಾಲ್ ಪೀಠದಲ್ಲಿ ವಿಚಾರಣೆ ನಡೆಯಲಿದೆ.

ಏಕನಾಥ ಶಿಂಧೆ ಬಣದ ಪರವಾಗಿ ಖ್ಯಾತ ವಕೀಲ ಹರೀಶ್ ಸಾಳ್ವೆ ವಾದ ಮಂಡನೆ ಮಾಡಲಿದ್ದು, ಡೆಪ್ಯುಟಿ ಸ್ಪೀಕರ್ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡನೆ ಮಾಡಲಿದ್ದಾರೆ. ಮಹಾ ವಿಕಾಸ್ ಅಘಾಡಿ ಸರ್ಕಾರದ ಪರವಾಗಿ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸುತ್ತಾರೆ. ಕರ್ನಾಟಕದ ಮೈತ್ರಿ ಸರ್ಕಾರ ಪತನದ ವೇಳೆಯೂ ಕಾಂಗ್ರೆಸ್ ಪರ ಅಭಿಷೇಕ್ ಮನುಸಿಂಘ್ವಿ ವಾದಿಸಿದ್ದರು. ಇಂದು ದ್ವಿಸದಸ್ಯರ ಪೀಠ ವಿಚಾರಣೆ ನಡೆಸಲಿದೆ.

ಇಂದು ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ಪೀಠವು ಎರಡೂ ಅರ್ಜಿಗಳ ವಿಚಾರಣೆ ನಡೆಸಲಿದೆ. ಶಿವಸೇನೆ ಶಾಸಕಾಂಗ ಪಕ್ಷದ ಮೂರನೇ 2 ಭಾಗದಷ್ಟು ಸದಸ್ಯರು ನಮ್ಮನ್ನು ಬೆಂಬಲಿಸುತ್ತಾರೆ ಎಂದು ಬಂಡಾಯ ಶಾಸಕರು ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Maharashtra Crisis: ಮಹಾರಾಷ್ಟ್ರ ಬಿಕ್ಕಟ್ಟು; ಅತೃಪ್ತ ಶಾಸಕರ ಬಣಕ್ಕೆ ಶಿವಸೇನಾ- ಬಾಳಾಸಾಹೇಬ್ ಎಂದು ಹೆಸರಿಟ್ಟ ಏಕನಾಥ್ ಶಿಂಧೆ

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೆ.ಬಿ. ಪರ್ಡಿವಾಲಾ ಅವರ ದ್ವಿಸದಸ್ಯ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಲಿದೆ. ಇದುವರೆಗೆ ಈ ರೀತಿಯ ಸರ್ಕಾರ ಮತ್ತು ಸರ್ಕಾರದ ಅತೃಪ್ತ ಬಣದ ನಡುವಿನ ಬಿಕ್ಕಟ್ಟಿನ ಹತ್ತಾರು ಕೇಸುಗಳು ಸುಪ್ರೀಂ ಕೋರ್ಟ್​ ಎದುರು ವಿಚಾರಣೆಗೆ ಬಂದಿವೆ. ಆ ಎಲ್ಲ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್​ ನಿಲುವನ್ನು ಗಮನಿಸಿದರೆ ಈ ಬಾರಿಯೂ ಸುಪ್ರೀಂ ಕೋರ್ಟ್​ ಡೆಪ್ಯುಟಿ ಸ್ಪೀಕರ್​ ಪಾತ್ರ, ನೇಮಕ, ಅನರ್ಹತೆಯ ಬಗ್ಗೆ ಯಾವುದೇ ನೋಟಿಸ್ ನೀಡುವುದಿಲ್ಲ ಎನ್ನಲಾಗುತ್ತಿದೆ. ಇದಕ್ಕೂ ಮೊದಲಿನ ಪ್ರಕರಣ ಅಂದರೆ ನಮ್ಮ ಕರ್ನಾಟಕದ್ದೇ ಪ್ರಕರಣವನ್ನು ಗಮನಿಸಿದರೆ ಸುಪ್ರೀಂ ಕೋರ್ಟ್​ ಆಗ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ವಿರುದ್ಧ ಯಾವುದೇ ಕ್ರಮಕ್ಕೆ ಆದೇಶಿಸಿರಲಿಲ್ಲ. ಅಲ್ಲದೆ, ಸ್ಪೀಕರ್ ನಿರ್ಧಾರವನ್ನು ಸ್ವಾಗತಿಸಿತ್ತು. ಗೋವಾ ಸೇರಿದಂತೆ ಹಲವು ರಾಜ್ಯಗಳ ವಿಚಾರದಲ್ಲೂ ಸುಪ್ರೀಂ ಕೋರ್ಟ್ ಇದೇ ನಿಲುವು ತಳೆದಿತ್ತು.

ಅರ್ಜಿ ಸಲ್ಲಿಸಿರುವ ಬಂಡಾಯ ಶಾಸಕರು:

ಏಕನಾಥ್ ಶಿಂಧೆ, ಭರತ್ ಗೊಗವಾಲೆ, ಪ್ರಕಾಶ ರಾಜಾರಾಂ ಸುರ್ವೆ, ತನ್ಹಾಜಿ ಜಯವಂತ ಸಾವಂತ್, ಮಹೇಶ ಸಂಭಾಜಿರಾಜೆ ಶಿಂಧೆ, ಅಬ್ದುಲ್ ಸತ್ತಾರ್, ಸಂದೀಪನ್ ಅಸಾರಾಂ ಭೂಮ್ರೆ, ಸಂಜಯ್ ಪಾಂಡುರಂಗ ಸಿರ್ಶಾಸತಿ, ಯಾಮಿನಿ ಯಶವಂತ ಜಾಧವ್, ಅನಿಲ್ ಕಲ್ಜೆರಾವ್ ಬಾಬರ್, ಲತಾಬಾಯಿ ಚಂದ್ರಕಾಂತ್ ಸೋನಾವಣೆ, ರಮೇಶ ನಾನಸಾಹೇಬ್ ಬೋರ್ನಾರೆ, ಲತಾಬಾಯಿ ಚಂದ್ರಕಾಂತ್ ಸೋನಾವನೆ, ರಮೇಶ ನಾನಾಸಾಹೇಬ್ ಬೋರ್ನರೇ, ಬಾಲಾಜಿ ದೇವಿದಾಸರಾವ್ ಕಲ್ಯಾಣಕರ್, ಬಾಲಾಜಿ ಪ್ರಹ್ಲಾದ್ ಕಿನಿಲ್ಕರ್ ಮಹಾರಾಷ್ಟ್ರದ ಸರ್ಕಾರದ ವಿರುದ್ಧ ಬಂಡಾಯವೆದ್ದ ಅತೃಪ್ತ ಶಾಸಕರಾಗಿದ್ದಾರೆ.

Published On - 9:56 am, Mon, 27 June 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್