Maharashtra Political Crisis: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೊನಾ ಸೋಂಕು
ಶಿವ ಸೇನೆ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ಠಾಕ್ರೆ ಅವರಿಗೆ ಕೋವಿಡ್ ಪಾಸಿಟಿವ್ ಎಂದು ಕಾಂಗ್ರೆಸ್ ಪಕ್ಷದ ಕಮಲ್ ನಾಥ್ ಹೇಳಿದ್ದಾರೆ.
ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಕಾಂಗ್ರೆಸ್ ವೀಕ್ಷಕ ಕಮಲ್ ನಾಥ್ ಮಾಹಿತಿ ನೀಡಿದ್ದಾರೆ.
ಅವರಿಗೆ ಕೊರೊನಾ ಸೋಂಕು ತಗುಲಿರುವ ಕಾರಣ ಅವರನ್ನು ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಮಲ್ನಾಥ್ ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಿಟ್ಟಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಂಪುಟ ಸಭೆ ಆರಂಭಿಸಿದ್ದಾರೆ. ಕೊರೊನಾ ಸೋಂಕು ತಗುಲಿರುವ ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪುಟ ಸಭೆ ನಡೆಸುತ್ತಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಸಭೆ ಆರಂಭವಾಗಿದೆ. ಪಕ್ಷೇತರ ಶಾಸಕರ ಜೊತೆ ಶಿವಸೇನೆ ಶಾಸಕರು ಗುವಾಹಟಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಈ ಹಿನ್ನೆಲೆಯಲ್ಲಿ ಸಂಪುಟ ಸಭೆ ನಡೆಸಲಾಗುತ್ತಿದೆ.
ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವರಾಗಿದ್ದ ಏಕನಾಥ್ ಶಿಂಧೆ ಬಂಡಾಯವೆದ್ದಿದ್ದು, ವಿಧಾನ ಪರಿಷತ್ ಮತ್ತು ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲೇ ಹತ್ತಕ್ಕೂ ಹೆಚ್ಚು ಸೇನಾ ಶಾಸಕರೊಂದಿಗೆ ಸೂರತ್‌ಗೆ ತೆರಳಿದ್ದರು. ಅಲ್ಲದೇ 26ಕ್ಕೂ ಹೆಚ್ಚು ಶಾಸಕರು ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದು, ಶಿಂಧೆ ಜೊತೆ ಗುಜರಾತ್‌ಗೆ ತೆರಳಿದ್ದರು. ಇದೀಗ ರೆಬೆಲ್ ಶಾಸಕರನ್ನ ಸೂರತ್‌ನಿಂದ ಅಸ್ಸಾಂಗೆ ಸ್ಥಳಾಂತರಿಸಲಾಗಿದೆ.
ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:09 pm, Wed, 22 June 22