Maharashtra Crisis: ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ; ಹೋಟೆಲ್​ನಿಂದ ನ್ಯಾಯಾಲಯದ ಮೆಟ್ಟಿಲೇರಿದ ಅತೃಪ್ತ ಶಾಸಕರು

ಬಂಡಾಯ ಶಾಸಕ ಏಕನಾಥ್ ಶಿಂಧೆ ತಮ್ಮ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಿದ ಶಿವಸೇನೆಯ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಇಂದು ನಡೆಯಲಿದೆ.

Maharashtra Crisis: ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ; ಹೋಟೆಲ್​ನಿಂದ ನ್ಯಾಯಾಲಯದ ಮೆಟ್ಟಿಲೇರಿದ ಅತೃಪ್ತ ಶಾಸಕರು
ಶಿವಸೇನೆಯ ಅತೃಪ್ತ ಶಾಸಕರುImage Credit source: NDTV
Follow us
| Updated By: ಸುಷ್ಮಾ ಚಕ್ರೆ

Updated on:Jun 27, 2022 | 8:54 AM

ಮುಂಬೈ: ತಮ್ಮನ್ನು ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಿದ ಶಿವಸೇನೆಯ (Shiv Sena) ಕ್ರಮವನ್ನು ಪ್ರಶ್ನಿಸಿ ಬಂಡಾಯ ಶಾಸಕ ಏಕನಾಥ್ ಶಿಂಧೆ (Eknath Shinde) ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court)  ಇಂದು ವಿಚಾರಣೆ ನಡೆಸಲಿದೆ. ಮಹಾರಾಷ್ಟ್ರದ ಮೈತ್ರಿ ಸರ್ಕಾರದ ಭವಿಷ್ಯದ ರಾಜಕೀಯ ಹೋರಾಟ ಇದೀಗ ನ್ಯಾಯಾಲಯದ ಮೆಟ್ಟಿಲೇರಿದ್ದು, ಬಂಡಾಯ ಶಾಸಕ ಏಕನಾಥ್ ಶಿಂಧೆ ತಮ್ಮ ಮತ್ತು ಇತರ 15 ಶಾಸಕರನ್ನು ಅನರ್ಹಗೊಳಿಸಿದ ಶಿವಸೇನೆಯ ಕ್ರಮವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಈ ಪ್ರಕರಣದ ವಿಚಾರಣೆ ಇಂದು ನಡೆಯಲಿದೆ.

  1. ಮಹಾರಾಷ್ಟ್ರದ ಡೆಪ್ಯುಟಿ ಸ್ಪೀಕರ್ ನರಹರಿ ಜಿರ್ವಾಲ್ ವಿರುದ್ಧದ ಅವಿಶ್ವಾಸ ನಿರ್ಣಯ ತಿರಸ್ಕಾರಕ್ಕೆ ಏಕನಾಥ್ ಶಿಂಧೆ ಬಣವೂ ಸವಾಲು ಹಾಕಿದೆ. ಅವರನ್ನು ಪದಚ್ಯುತಗೊಳಿಸುವ ವಿಷಯ ತೀರ್ಮಾನವಾಗುವವರೆಗೆ ಅನರ್ಹತೆ ಅರ್ಜಿಯ ಕುರಿತು ಯಾವುದೇ ಕ್ರಮ ಕೈಗೊಳ್ಳದಂತೆ ನಿರ್ದೇಶನ ನೀಡುವಂತೆ ಮನವಿಯಲ್ಲಿ ಕೋರಲಾಗಿದೆ.
  2. 2021ರ ಫೆಬ್ರವರಿಯಲ್ಲಿ ನಾನಾ ಪಟೋಲೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಮಹಾರಾಷ್ಟ್ರ ಅಸೆಂಬ್ಲಿಯ ಸ್ಪೀಕರ್ ಸ್ಥಾನವು ಖಾಲಿಯಾಗಿತ್ತು. ಅನರ್ಹತೆ ಅರ್ಜಿಯ ಮೇಲೆ ತೀರ್ಪು ನೀಡುವ ಯಾವುದೇ ಅಧಿಕಾರವಿಲ್ಲ ಎಂದು ಅರ್ಜಿಯು ಪ್ರತಿಪಾದಿಸಿತ್ತು.
  3. ಇದೇ ವೇಳೆ ಶಿವಸೇನೆಯ ಕಾನೂನು ಸಲಹೆಗಾರರೂ ಆಗಿರುವ ಹಿರಿಯ ವಕೀಲ ದೇವದತ್ ಕಾಮತ್ ಅವರು, ಸ್ಪೀಕರ್ ಅನುಪಸ್ಥಿತಿಯಲ್ಲಿ ತೀರ್ಪು ನೀಡುವ ಎಲ್ಲಾ ಅಧಿಕಾರ ಡೆಪ್ಯುಟಿ ಸ್ಪೀಕರ್‌ಗೆ ಇದೆ ಎಂದು ಪ್ರತಿಪಾದಿಸಿದ್ದರು.
  4. ಉದ್ಧವ್ ಠಾಕ್ರೆ ಅವರ ಬೆಂಬಲಿಗರು ಮತ್ತು ಸಚಿವ ಏಕನಾಥ್ ಶಿಂಧೆ ನೇತೃತ್ವದ ರೆಬೆಲ್ ಶಾಸಕರ ನಡುವಿನ ಜಗಳ ಭಾನುವಾರ ತೀವ್ರಗೊಂಡಿದೆ. ಶಿವಸೇನಾ ನಾಯಕರಾದ ಸಂಜಯ್ ರಾವುತ್ ಮತ್ತು ಆದಿತ್ಯ ಠಾಕ್ರೆ ಅವರು ಭಿನ್ನಮತೀಯರ ಮೇಲೆ ತೀವ್ರ ದಾಳಿ ನಡೆಸಿದ್ದರು.
  5. ಇದನ್ನೂ ಓದಿ
    Image
    Maharashtra Crisis: ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ; ಹೋಟೆಲ್​ನಿಂದ ನ್ಯಾಯಾಲಯದ ಮೆಟ್ಟಿಲೇರಿದ ಅತೃಪ್ತ ಶಾಸಕರು
    Image
    MVA Crisis: ಬಾಳಾಸಾಹೇಬರ ಹೆಸರು ಬಿಡಿ, ನಿಮ್ಮಪ್ಪನ ಹೆಸರು ಬಳಸಿಕೊಳ್ಳಿ: ಬಂಡಾಯ ಶಾಸಕರಿಗೆ ಸಂಜಯ್ ರಾವುತ್ ಸವಾಲು
    Image
    ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಉದ್ಧವ್ ಠಾಕ್ರೆಗೆ ನೀಡಿ ನಿರ್ಣಯ ಅಂಗೀಕರಿಸಿದ ಶಿವಸೇನಾ
    Image
    MVA Crisis: ವಿಶ್ವಾಸಮತ ಯಾಚನೆಗೆ ಮೈತ್ರಿ ಸರ್ಕಾರದ ಸಿದ್ಧತೆ, ಶರದ್ ಪವಾರ್ ಉರುಳಿಸುವ ದಾಳದ ಬಗ್ಗೆ ಕುತೂಹಲ
  6. ಕಳೆದ ಐದು ದಿನಗಳಿಂದ ಬಿಜೆಪಿ ಆಡಳಿತವಿರುವ ಅಸ್ಸಾಂನ ಗುವಾಹಟಿ ಹೊಟೇಲ್‌ನಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರನ್ನು ಸಚಿವ ಉದಯ್ ಸಾವಂತ್ ಕೂಡ ಭಾನುವಾರ ಸೇರಿಕೊಂಡಿದ್ದಾರೆ. ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಬಂಡಾಯವೆದ್ದಿರುವ ತಂಡ ನೇತೃತ್ವ ವಹಿಸಿರುವ ಏಕನಾಥ್ ಶಿಂಧೆ ತನಗೆ 50ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ. ಅವರ ಪೈಕಿ ಸುಮಾರು 40 ಮಂದಿ ಶಿವಸೇನೆಯವರಾಗಿದ್ದಾರೆ.
  7. ಅವರಲ್ಲಿ ಕನಿಷ್ಠ 20 ಶಾಸಕರು ಏಕನಾಥ್ ಶಿಂಧೆ ಅವರೊಂದಿಗೆ ಬೀಡುಬಿಟ್ಟಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಶಿವಸೇನಾ ಮೂಲಗಳು ಹೇಳಿವೆ. ಅವರಲ್ಲಿ ಕೆಲವರು ಬಿಜೆಪಿ- ಶಿವಸೇನೆ ವಿಲೀನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
  8. ಆಡಳಿತಾರೂಢ ಒಕ್ಕೂಟದ ಶರದ್ ಪವಾರ್ – ಮಹಾ ವಿಕಾಸ್ ಅಘಾಡಿ ನಾಯಕರು ಮೈತ್ರಿ ಪಾಲುದಾರರೊಂದಿಗೆ ಮುಚ್ಚಿದ ಬಾಗಿಲಿನ ಸಭೆ ನಡೆಸಿದರು. ಕಾಂಗ್ರೆಸ್ ಮತ್ತು ಎನ್‌ಸಿಪಿ ನಾಯಕರು ಉದ್ಧವ್ ಠಾಕ್ರೆಗೆ ತಮ್ಮ ಬೆಂಬಲವನ್ನು ಪದೇಪದೆ ಪುನರುಚ್ಚರಿಸಿದ್ದಾರೆ.
  9. ಮಹಾರಾಷ್ಟ್ರದ ಪುಣೆ, ಮುಂಬೈ ಮತ್ತು ನಾಗ್ಪುರ ಸೇರಿದಂತೆ ಕೆಲವು ಭಾಗಗಳಲ್ಲಿ ಶಿವಸೇನಾ ಕಾರ್ಯಕರ್ತರು ತಮ್ಮ ಬಂಡಾಯ ಶಾಸಕರ ವಿರುದ್ಧ ಪ್ರತಿಭಟನೆಗಳನ್ನು ಮುಂದುವರೆಸಿದರು.
  10. ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಕೇಂದ್ರ ಭದ್ರತಾ ಪಡೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಒದಗಿಸುವಂತೆ ಗೃಹ ಸಚಿವಾಲಯಕ್ಕೆ ಪತ್ರ ಬರೆದಿದ್ದಾರೆ.
  11. ಅಲ್ಪಸಂಖ್ಯಾತರಿಗೆ ತಗ್ಗಿಸಲ್ಪಟ್ಟಿದ್ದರೂ ತಮ್ಮನ್ನು “ಶಿವಸೇನಾ ಬಾಳಾಸಾಹೇಬ್ ಠಾಕ್ರೆ” ಎಂದು ಕರೆದುಕೊಳ್ಳುವ ಏಕನಾಥ್ ಶಿಂಧೆ ಬಣದ ಕ್ರಮದ ವಿರುದ್ಧ ಮತ್ತು ಶಿವಸೇನೆ ಪಕ್ಷದ ಚಿಹ್ನೆಗೆ ಹಕ್ಕು ಸಾಧಿಸಲು ಉದ್ಧವ್ ಠಾಕ್ರೆ ತಂಡವು ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ.

Published On - 8:36 am, Mon, 27 June 22

ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್