Political Crisis:ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಸಂಪುಟ ಸಭೆ ಕರೆದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಮಧ್ಯಾಹ್ನ 1 ಕ್ಕೆ ಸಂಪುಟ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Political Crisis:ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು:  ಸಂಪುಟ ಸಭೆ ಕರೆದ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ
Uddhav Thackeray
Follow us
TV9 Web
| Updated By: ನಯನಾ ರಾಜೀವ್

Updated on: Jun 22, 2022 | 10:17 AM

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತುರ್ತು ಸಂಪುಟ ಸಭೆ ಕರೆದಿದ್ದಾರೆ. ಮಧ್ಯಾಹ್ನ 1 ಕ್ಕೆ ಸಂಪುಟ ಸಭೆ ನಡೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಏಕನಾಥ ಶಿಂಧೆ ನೇತೃತ್ವದಲ್ಲಿ 30ಕ್ಕೂ ಹೆಚ್ಚು ಶಾಸಕರು ಸರ್ಕಾರದ ವಿರುದ್ಧ ಬಂಡಾಯ ಎದ್ದಿದ್ದಾರೆ. ಪಕ್ಷೇತರ ಶಾಸಕರ ಜೊತೆ ಶಿವಸೇನೆ ಶಾಸಕರು ಗುವಾಹಟಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿದ್ದು, ಈ ಹಿನ್ನೆಲೆಯಲ್ಲಿ ಸಂಪುಟ ಸಭೆ ಕರೆಯಲಾಗಿದೆ.

ಮಹಾರಾಷ್ಟ್ರ ನಗರಾಭಿವೃದ್ಧಿ ಸಚಿವರಾಗಿದ್ದ ಏಕನಾಥ್ ಶಿಂಧೆ ಬಂಡಾಯವೆದ್ದಿದ್ದು, ವಿಧಾನ ಪರಿಷತ್‌ ಮತ್ತು ರಾಜ್ಯ ಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಹಿನ್ನೆಲೆಯಲ್ಲೇ ಹತ್ತಕ್ಕೂ ಹೆಚ್ಚು ಸೇನಾ ಶಾಸಕರೊಂದಿಗೆ ಸೂರತ್‌ಗೆ ತೆರಳಿದ್ದರು. ಅಲ್ಲದೇ 26ಕ್ಕೂ ಹೆಚ್ಚು ಶಾಸಕರು ಉದ್ಧವ್‌ ಠಾಕ್ರೆ ವಿರುದ್ಧ ಬಂಡಾಯವೆದ್ದು, ಶಿಂಧೆ ಜೊತೆ ಗುಜರಾತ್‌ಗೆ ತೆರಳಿದ್ದರು. ಇದೀಗ ರೆಬೆಲ್ ಶಾಸಕರನ್ನ ಸೂರತ್‌ನಿಂದ ಅಸ್ಸಾಂಗೆ ಸ್ಥಳಾಂತರಿಸಲಾಗಿದೆ.

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ ಆಘಾಡಿ ಸರ್ಕಾರ ಇಕ್ಕಟ್ಟಿಕ್ಕೆ ಸಿಲುಕಿದೆ. ಶಾಸಕರ ಮನವೊಲಿಸಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ.

ಮಂಗಳವಾರ ಉದ್ಧವ್ ಠಾಕ್ರೆ ಶಿವಸೇನಾ ಶಾಸಕರ ಸಭೆ ಕರೆಯಲಾಗಿತ್ತು, ಠಾಕ್ರೆ ನಿವಾಸದಲ್ಲಿ ನಡೆದ ಸಭೆಯ ಬಳಿಕ ಅವರು ಶಾಸಕರನ್ನು ಮುಂಬೈನ ಖಾಸಗಿ ಹೋಟೆಲ್‌ಗೆ ಕಳುಹಿಸಲಾಗಿತ್ತು. ಮತ್ತೆ ಯಾವುದೇ ಶಾಸಕರು ಏಕನಾಥ ಶಿಂಧೆ ಗುಂಪು ಸೇರದಂತೆ ಜಾಗ್ರತೆ ವಹಿಸಲಾಗಿದೆ ಎನ್ನಲಾಗಿದೆ.

ಶಿವಸೇನೆಯ ನಾಯಕ ಏಕನಾಥ ಶಿಂಧೆ ನೇತೃತ್ವದಲ್ಲಿ ಶಿವಸೇನೆಯ ಶಾಸಕರು, 7 ಪಕ್ಷೇತರ ಶಾಸಕರು ಬಂಡಾಯ ಎದ್ದಿದ್ದಾರೆ. ಗುಜರಾತ್‌ನ ಸೂರತ್‌ನ ಹೋಟೆಲ್‌ನಲ್ಲಿದ್ದ ಎಲ್ಲರೂ ಬುಧವಾರ ಬೆಳಗ್ಗೆ ಗುವಾಹಟಿ ತಲುಪಿದ್ದಾರೆ.

ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ಬಂಡಾಯದ ಬಿಸಿ ತತಟ್ಟಿರುವುದಂತೂ ಸತ್ಯ. ಹೀಗಾಗಿ ಮಹಾ ವಿಕಾಸ ಅಘಾಡಿ ಸರ್ಕಾರಕ್ಕೆ ಅಧಃಪತನದ ಭಯ ಮೂಡಿದೆ.

ಶಿವಸೇನೆಯಲ್ಲಿ 55 ಶಾಸಕರಿದ್ದಾರೆ ಅದರಲ್ಲಿ ನಮಗೆ 40 ಶಾಸಕರ ಬೆಂಬಲವಿದೆ ಎಂದು ಏಕನಾಥ ಶಿಂಧೆ ಹೇಳಿಕೊಂಡಿದ್ದಾರೆ. ಶಿವಸೇನೆ ಬಿಜೆಪಿ ಜೊತೆ ಸೇರಿ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಬೇಕು ಎಂಬುದು ಬಂಡಾಯ ಎದ್ದಿರುವ ಶಾಸಕರ ಪ್ರಮುಖ ಬೇಡಿಕೆಯಾಗಿದೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್