Maharashtra Politics: ಮುಂಬೈ ಉಸ್ತುವಾರಿ, ಹಣಕಾಸು ಇಲಾಖೆಗೆ ಬಿಜೆಪಿ-ಶಿಂದೆ ಬಣದ ನಡುವೆ ಹಗ್ಗಜಗ್ಗಾಟ

ಮುಂದಿನ ಸರ್ಕಾರದಲ್ಲಿ ಶಿಂದೆ ಬಣ್ಣಕ್ಕೆ 13 ಸಚಿವ ಸ್ಥಾನವನ್ನು ನೀಡಲು ಬಿಜೆಪಿ ಮುಂದಾಗಿದೆ.

Maharashtra Politics: ಮುಂಬೈ ಉಸ್ತುವಾರಿ, ಹಣಕಾಸು ಇಲಾಖೆಗೆ ಬಿಜೆಪಿ-ಶಿಂದೆ ಬಣದ ನಡುವೆ ಹಗ್ಗಜಗ್ಗಾಟ
ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡಣವಿಸ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 30, 2022 | 9:24 AM

ಮುಂಬೈ: ಶಿವಸೇನೆ ನಾಯಕ ಏಕನಾಥ್ ಶಿಂದೆ (Eknath Shinde) ನೇತೃತ್ವದಲ್ಲಿ ಶಾಸಕರು ಬಂಡಾಯವೆದ್ದ ನಂತರ ಉದ್ಘವವಾಗಿದ್ದ ಮಹಾರಾಷ್ಟ್ರ ರಾಜಕಾರಣದ ಬಿಕ್ಕಟ್ಟು (Maharashtra Political Crisis) ಇಂದು ನಿರ್ಣಾಯಕ ಘಟ್ಟ ತಲುಪಿದೆ. ಇಂದು (ಜೂನ್ 30) ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ನಡೆಯಲಿದ್ದು, ದೇವೇಂದ್ರ ಫಡಣವೀಸ್ (Devendra Fadnavis) ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಮುಂಬೈನಿಂದ ಗುಜರಾತ್​​ಗೆ, ಅಲ್ಲಿಂದ ಅಸ್ಸಾಂಗೆ ಹೋಗಿದ್ದ ಬಂಡಾಯ ಶಾಸಕರು ನಿನ್ನೆ ಗೋವಾಕ್ಕೆ ಹಿಂದಿರುಗಿದ್ದರು. ಇಂದು ಮುಂಬೈ ತಲುಪಲಿರುವ ಶಾಸಕರು ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಶ್ವಾಸಮತ ಯಾಚನೆಗೂ ಮೊದಲೇ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಅಧಿಕಾರ ಹಂಚಿಕೆ ಕುರಿತಂತೆಯೂ ಏಕನಾಥ್ ಶಿಂದೆ ಮತ್ತು ದೇವೇಂದ್ರ ಫಡಣವೀಸ್ ಜೊತೆಗೆ ಮಾತುಕತೆ ನಡೆಯುತ್ತಿದೆ. ಮುಂದಿನ ಕಾರ್ಯತಂತ್ರದ ಬಗ್ಗೆಯೂ ಇಬ್ಬರು ನಾಯಕರು ಸುದೀರ್ಘ ಚರ್ಚೆ ನಡೆಸಿದರು. ಹೊಸ ಸರ್ಕಾರ ರಚನೆಯಾಗುವವರೆಗೂ ಶಾಸಕರು ಒಟ್ಟಿಗೆ ಇರುವಂತೆ ನೋಡಿಕೊಳ್ಳಬೇಕು ಎಂದು ಈ ಸಂದರ್ಭದಲ್ಲಿ ಏಕನಾಥಶಿಂದೆ ಅವರಿಗೆ ಫಡಣವೀಸ್ ವಿನಂತಿಸಿದರು. ಮಧ್ಯಾಹ್ನ 12 ಗಂಟೆಗೆ ಬಿಜೆಪಿ ಕೋರ್ ಕಮಿಟಿ ಮೀಟಿಂಗ್ ನಡೆಯಲಿದ್ದು, ಹೊಸ ಸರ್ಕಾರದ ರಚನೆ ಹಾಗೂ ಮಂತ್ರಿ ಮಂಡಲದ ಬಗ್ಗೆ ಚರ್ಚೆ ನಡೆಯಲಿದೆ. ದೇವೇಂದ್ರ ಫಡಣವೀಸ್ ಅವರು ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

ಗೋವಾದ ತಾಜ್ ಹೊಟೆಲ್​ನಲ್ಲಿರುವ ಶಿವಸೇನೆಯ ಬಂಡಾಯ ಶಾಸಕರೊಂದಿಗೆ ಬೆಳಿಗ್ಗೆ 10 ಗಂಟೆಗೆ ಏಕನಾಥ ಶಿಂದೆ ಸಭೆ ನಡೆಸಲಿದ್ದಾರೆ. ತಮ್ಮ ಗುಂಪಿನ ಯಾವೆಲ್ಲಾ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕು ಎಂಬ ಬಗ್ಗೆ ಸಭೆ ತೀರ್ಮಾನಿಸಲಿದೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿದ ನಂತರ ಮುಂಬೈಗೆ ಏಕನಾಥ್ ಶಿಂಧೆ ಒಬ್ಬರೇ ತೆರಳಲಿದ್ದಾರೆ. ಅಲ್ಲಿ ದೇವೇಂದ್ರ ಫಡಣವೀಸ್ ಅವರನ್ನು ಮುಖಾಮುಖಿ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ
Image
Maharashtra Politics: ಗುವಾಹತಿಯಿಂದ ಗೋವಾಕ್ಕೆ ಮಹಾರಾಷ್ಟ್ರದ ಬಂಡಾಯ ಶಾಸಕರು, ಮುಂಬೈಗೆ ಸಿಟಿ ರವಿ ದೌಡು, ಇಂದು ವಿಧಾನಸಭೆ ಅಧಿವೇಶನ
Image
ನಾನು ಅನಿರೀಕ್ಷಿತ ರೀತಿಯಲ್ಲಿಅಧಿಕಾರಕ್ಕೆ ಬಂದಿದ್ದೆ, ಅದೇ ರೀತಿಯಲ್ಲಿ ಹೊರಡುತ್ತಿದ್ದೇನೆ: ಉದ್ಧವ್ ಠಾಕ್ರೆ
Image
Uddhav Thackeray Resigned ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜೀನಾಮೆ
Image
ಮಹಾರಾಷ್ಟ್ರ ರಾಜಕೀಯದಲ್ಲಿ ಬಾಹುಬಲಿ ಪೋಸ್ಟರ್ ಪ್ರತ್ಯಕ್ಷ, ಗದ್ದಾರ್​ ಎಂದು ಜರಿದರು! ಆದರೆ ಇಲ್ಲಿ ಕಟ್ಟಪ್ಪ ಯಾರು?

ಶಿಂದೆ ಬಣಕ್ಕೆ ಬಿಜೆಪಿ ಆಫರ್

ದೇವೇಂದ್ರ ಫಡಣವೀಸ್ ನೇತೃತ್ವದಲ್ಲಿ ಅಧಿಕಾರಕ್ಕೆ ಬರಲಿರುವ ಮುಂದಿನ ಸರ್ಕಾರದಲ್ಲಿ ಶಿಂದೆ ಬಣ್ಣಕ್ಕೆ 13 ಸಚಿವ ಸ್ಥಾನವನ್ನು ನೀಡಲು ಬಿಜೆಪಿ ಮುಂದಾಗಿದೆ. ಈ ಪೈಕಿ 8 ಮಂದಿಗೆ ಸಂಪುಟ ದರ್ಜೆ, ಐವರಿಗೆ ರಾಜ್ಯ ಸಚಿವರ ಸ್ಥಾನಮಾನ ನೀಡಲು ಬಿಜೆಪಿ ಒಪ್ಪಿಕೊಂಡಿದೆ ಎಂದು ಮೂಲಗಳು ಹೇಳಿವೆ. ಮುಂಬೈ ಉಸ್ತುವಾರಿ ಸೇರಿದಂತೆ ನಗರಾಭಿವೃದ್ಧಿ, ಲೋಕೋಪಯೋಗಿ ಹಾಗೂ ಆರ್ಥಿಕ ಇಲಾಖೆ ತಮಗೇ ಬೇಕೆಂದು ಶಿಂದೆ ಬಣ ಬೇಡಿಕೆ ಇಟ್ಟಿದೆ. ಆರ್ಥಿಕ ಇಲಾಖೆ ಹಾಗೂ ನಗರಾಭಿವೃದ್ಧಿ ಇಲಾಖೆಗಳು ಮುಖ್ಯಮಂತ್ರಿ ಬಳಿಯ ಇದ್ದರೆ ಒಳಿತು ಎಂದು ಬಿಜೆಪಿ ಹೇಳಿದೆ. ಸಚಿವ ಸ್ಥಾನ ಹಂಚಿಕೆ ವಿಚಾರ ಅಂತಿಮಗೊಳಿಸಲು ಶಿಂದೆ ಮತ್ತು ಫಡಣವೀಸ್ ಪರಸ್ಪರ ಚರ್ಚಿಸಲಿದ್ದಾರೆ.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಉದ್ಧವ್ ಠಾಕ್ರೆ ಅವರ ಖಾಸಗಿ ನಿವಾಸ ‘ಮಾತೋಶ್ರೀ’ಗೆ ಮಹಾರಾಷ್ಟ್ರ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.

Published On - 9:21 am, Thu, 30 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ