Pawar Vs Pawar: ಯಾರು ಹೆಚ್ಚು ಶಾಸಕರನ್ನು ಹೊಂದಿದ್ದಾರೆ ಎಂಬುದನ್ನು ನಿರೂಪಿಸಲು ಎನ್​ಸಿಪಿಯ ಎರಡು ಬಣಗಳ ಸಭೆ

ಪಕ್ಷದ ಬಹುಪಾಲು ಶಾಸಕರು ತಮ್ಮೊಂದಿಗಿದ್ದಾರೆ ಎಂಬುದನ್ನು ನಿರೂಪಿಸಲು ಎನ್​ಸಿಪಿಯ ಎರಡು ಬಣಗಳು ಇಂದು ಮುಂಬೈನಲ್ಲಿ ಸಭೆ ಕರೆದಿವೆ. ಕಳೆದ ವಾರವಷ್ಟೇ ಅಜಿತ್ ಪವಾರ್(Ajit Pawar)  ಬಂಡಾಯವೆದ್ದು ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಯಾದಾಗಿನಿಂದ ಈ ಚರ್ಚೆಗಳು ತೀವ್ರವಾಗಿವೆ.

Pawar Vs Pawar: ಯಾರು ಹೆಚ್ಚು ಶಾಸಕರನ್ನು ಹೊಂದಿದ್ದಾರೆ ಎಂಬುದನ್ನು ನಿರೂಪಿಸಲು ಎನ್​ಸಿಪಿಯ ಎರಡು ಬಣಗಳ ಸಭೆ
ಅಜಿತ್ ಪವಾರ್-ಶರದ್ ಪವಾರ್
Follow us
ನಯನಾ ರಾಜೀವ್
|

Updated on: Jul 05, 2023 | 12:05 PM

ಪಕ್ಷದ ಬಹುಪಾಲು ಶಾಸಕರು ತಮ್ಮೊಂದಿಗಿದ್ದಾರೆ ಎಂಬುದನ್ನು ನಿರೂಪಿಸಲು ಎನ್​ಸಿಪಿಯ ಎರಡು ಬಣಗಳು ಇಂದು ಮುಂಬೈನಲ್ಲಿ ಸಭೆ ಕರೆದಿವೆ. ಕಳೆದ ವಾರವಷ್ಟೇ ಅಜಿತ್ ಪವಾರ್(Ajit Pawar)  ಬಂಡಾಯವೆದ್ದು ಮಹಾರಾಷ್ಟ್ರ ಸರ್ಕಾರಕ್ಕೆ ಸೇರ್ಪಡೆಯಾದಾಗಿನಿಂದ ಈ ಚರ್ಚೆಗಳು ತೀವ್ರವಾಗಿವೆ. ಮುಂಬೈನಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ನಡೆಯಲಿದ್ದು, ಸಭೆಯಲ್ಲಿ ಪಾಲ್ಗೊಳ್ಳುವಂತೆ ಶರದ್ ಪವಾರ್ ನೇತೃತ್ವದ ನ್ಯಾಷನಾಲಿಸ್ಟ್​ ಕಾಂಗ್ರೆಸ್ ಪಾರ್ಟಿ ತನ್ನ ಎಲ್ಲಾ ಶಾಸಕರಿಗೆ ವಿಪ್ ಜಾರಿ ಮಾಡಿದೆ. ಪಕ್ಷದ ಮುಖ್ಯ ಸಚೇತಕರಾಗಿ ನೇಮಕಗೊಂಡಿರುವ ಜಿತೇಂದ್ರ ಅವದ್ ಅವರು ವಿಪ್ ಜಾರಿ ಮಾಡಿದ್ದಾರೆ.

ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಹಾಜರಾಗುವಂತೆ ಮತ್ತು ಮುಂದಿನ ಹಾದಿಯಲ್ಲಿ ಶರದ್ ಪವಾರ್ ಅವರಿಂದ ಮಾರ್ಗದರ್ಶನ ಪಡೆಯುವಂತೆ ಎನ್‌ಸಿಪಿಯ ಕಾರ್ಯಾಧ್ಯಕ್ಷರು ವೀಡಿಯೋ ಮೂಲಕ ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ: ಪಕ್ಷ ಮರುಸಂಘಟಗೆ ಶರದ್ ಪವಾರ್ ಶಪಥ, ಎನ್​ಸಿಪಿ ನಮ್ಮ ಪಕ್ಷ ಎಂದ ಅಜಿತ್ ಪವಾರ್; ಶಿವಸೇನೆಯಂತೆ ವಿಭಾಗವಾಯ್ತಾ ಎನ್​ಸಿಪಿ?

ಬಾಂದ್ರಾದಲ್ಲಿ, ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಪ್ರತಿಸ್ಪರ್ಧಿ ಗುಂಪು ಪಕ್ಷದ ಬಹುಪಾಲು ಶಾಸಕರ ಬೆಂಬಲವನ್ನು ಸಾಬೀತುಪಡಿಸುವ ಪ್ರಯತ್ನದಲ್ಲಿ ಪ್ರತ್ಯೇಕ ಸಭೆ ನಡೆಸಲಿದೆ. ಮುಂಬೈನ ವಿವಿಧೆಡೆ ಶರದ್ ಪವಾರ್ ಅಥವಾ ಅಜಿತ್ ಪವಾರ್ ಅವರಿಗೆ ಬೆಂಬಲ ಕೋರಿ ಪೋಸ್ಟರ್ ಗಳು ಹುಟ್ಟಿಕೊಂಡಿವೆ.

ಕಳೆದ ವಾರ ಅಜಿತ್ ಪವಾರ್ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದರು ಮತ್ತು ಗಂಟೆಗಳ ನಂತರ ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಇತರ ಎಂಟು ಎನ್‌ಸಿಪಿ ಶಾಸಕರು ಕೂಡ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ರಾಜ್ಯ ಸರ್ಕಾರ ಶೀಘ್ರದಲ್ಲೇ ಸಂಪುಟ ವಿಸ್ತರಣೆಯನ್ನು ಘೋಷಿಸುವ ನಿರೀಕ್ಷೆಯಿದೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎನ್‌ಸಿಪಿ 53 ಶಾಸಕರನ್ನು ಹೊಂದಿದೆ. ಮೂಲಗಳ ಪ್ರಕಾರ, ಅಜಿತ್ ಪವಾರ್ ತನಗೆ 43 ಮಂದಿ ಬೆಂಬಲವಿದೆ ಎಂದು ಹೇಳಿಕೊಂಡಿದ್ದಾರೆ. ಏಕನಾಥ್ ಶಿಂದೆ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಅಜಿತ್ ಪವಾರ್ ಮತ್ತು 8 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಶರದ್ ಪವಾರ್ ಅವರ ಪಕ್ಷವು ವಿಧಾನಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರಿಗೆ ಮನವಿ ಸಲ್ಲಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ