Maharashtra Politics: ಏಕನಾಥ್ ಶಿಂಧೆ ಬೆಂಬಲಿಗ ಶಾಸಕರಿಗೆ ಅಧಿವೇಶನದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು; ಠಾಕ್ರೆ ತಂಡದಿಂದ ಸುಪ್ರೀಂ ಕೋರ್ಟ್​ಗೆ ಮನವಿ

ಏಕನಾಥ್ ಶಿಂಧೆ ಅವರನ್ನು ಬೆಂಬಲಿಸುವ ಶಾಸಕರು ವಿಧಾನಸಭೆಯಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸುವಂತೆ ಉದ್ಧವ್ ಠಾಕ್ರೆ ಅವರ ಮಹಾ ವಿಕಾಸ್​ ಅಘಾಡಿ ತಂಡವು ಸುಪ್ರೀಂ ಕೋರ್ಟ್​ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಿ ಮನವಿ ಮಾಡಿದೆ.

Maharashtra Politics: ಏಕನಾಥ್ ಶಿಂಧೆ ಬೆಂಬಲಿಗ ಶಾಸಕರಿಗೆ ಅಧಿವೇಶನದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು; ಠಾಕ್ರೆ ತಂಡದಿಂದ ಸುಪ್ರೀಂ ಕೋರ್ಟ್​ಗೆ ಮನವಿ
ಉದ್ಧವ್ ಠಾಕ್ರೆ
Image Credit source: India Today
TV9kannada Web Team

| Edited By: Sushma Chakre

Jul 01, 2022 | 10:52 AM

ಮುಂಬೈ: ಮಹಾರಾಷ್ಟ್ರದಲ್ಲಿ ಹೊಸ ಸಿಎಂ ಅಧಿಕಾರ ಸ್ವೀಕಾರ ಮಾಡಿದ್ದರೂ ರಾಜಕೀಯ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಅವರನ್ನು ಬೆಂಬಲಿಸುವ ಶಾಸಕರು ವಿಧಾನಸಭೆಯಲ್ಲಿ ಭಾಗವಹಿಸುವುದನ್ನು ನಿರ್ಬಂಧಿಸುವಂತೆ ಉದ್ಧವ್ ಠಾಕ್ರೆ (Uddhav Thackeray) ಅವರ ಮಹಾ ವಿಕಾಸ್​ ಅಘಾಡಿ ತಂಡವು ಸುಪ್ರೀಂ ಕೋರ್ಟ್​ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಿ ಮನವಿ ಮಾಡಿದೆ. ಏಕನಾಥ್ ಶಿಂಧೆ ತಂಡದ ವಿರುದ್ಧ ಉದ್ಧವ್ ಠಾಕ್ರೆ ತಂಡ ಸಲ್ಲಿಸಿರುವ ಹೊಸ ಅರ್ಜಿಯನ್ನು ಜುಲೈ 11ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ.

ಬಂಡಾಯ ನಾಯಕ ಏಕನಾಥ್ ಶಿಂಧೆಯವರ ಬಂಡಾಯದ ನಂತರ 31 ತಿಂಗಳ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ್ದರು. ಇದೀಗ ನಿನ್ನೆ ಏಕನಾಥ್ ಶಿಂಧೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ನಡುವೆ ಏಕನಾಥ್ ಶಿಂಧೆ ಬಣದ ವಿರುದ್ಧ ಹೊಸ ಅಸ್ತ್ರ ಪ್ರಯೋಗಿಸಿರುವ ಉದ್ಧವ್ ಠಾಕ್ರೆ ಅವರ ಮಹಾ ವಿಕಾಸ್ ಅಘಾಡಿ ತಂಡ ಶಿಂಧೆ ಬೆಂಬಲಿಗ ಶಾಸಕರಿಗೆ ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು ಎಂದು ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರದ ನೂತನ ಸಿಎಂ ಆಗಿ ಏಕನಾಥ್ ಶಿಂಧೆ, ಉಪ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕಾರ

ಅಧಿವೇಶನದಲ್ಲಿ ಏಕನಾಥ್ ಶಿಂಧೆ ಬಹುಮತ ಸಾಬೀತುಪಡಿಸಬೇಕಾದ ಅಗತ್ಯವಿರುವುದರಿಂದ ಉದ್ಧವ್ ಠಾಕ್ರೆ ಅವರ ಈ ಅರ್ಜಿಯಿಂದ ಶಿಂಧೆ ಬಣಕ್ಕೆ ಹೊಸ ತಲೆನೋವು ಎದುರಾಗುವ ಸಾಧ್ಯತೆಯಿದೆ. ತನ್ನ ವಿರುದ್ಧ ಬಂಡಾಯವೆದ್ದಿರುವ ಶಿವಸೇನೆ ಶಾಸಕರನ್ನು “ಬಿಜೆಪಿಯ ಪ್ಯಾದೆಗಳು” ಎಂದಿರುವ ಉದ್ಧವ್ ಠಾಕ್ರೆ ಅವರನ್ನು ವಿಧಾನಸಭೆ ಕಲಾಪಗಳಲ್ಲಿ ಭಾಗವಹಿಸದಂತೆ ನಿರ್ಬಂಧಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

‘ಪಕ್ಷಾಂತರದ ಸಾಂವಿಧಾನಿಕ ಪಾಪ ಎಸಗುತ್ತಿರುವ ಬಿಜೆಪಿಯ ಅಣತಿಯಂತೆ ನಡೆದುಕೊಳ್ಳುತ್ತಿರುವ ತಪ್ಪಿತಸ್ಥ ಶಾಸಕರು ವಿಧಾನಸಭೆಯ ಸದಸ್ಯರಾಗಿ ಮುಂದುವರಿಯಲು ಅನುಮತಿ ನೀಡಬಾರದು’ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

ಜುಲೈ 2ರಿಂದ ಮಹಾರಾಷ್ಟ್ರ ವಿಧಾನಸಭೆಯ 2 ದಿನಗಳ ವಿಶೇಷ ಅಧಿವೇಶನ ನಡೆಯಲಿದೆ. ಈ ಮಧ್ಯೆ, ಬಂಡಾಯ ಶಾಸಕರು ಬೀಡುಬಿಟ್ಟಿರುವ ಗೋವಾಕ್ಕೆ ತೆರಳಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ವಾಪಾಸ್ ಕರೆತರಲಿದ್ದಾರೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಮುಖ್ಯಮಂತ್ರಿ ಹುದ್ದೆಗೆ ಏರುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಅವರು ತಾವು ಈ ಸರ್ಕಾರದಿಂದ ಹೊರಗುಳಿಯುವುದಾಗಿ ಘೋಷಿಸಿದ್ದರು. ಅದಾದ ಕೇವಲ ಮೂರು ಗಂಟೆಗಳಲ್ಲಿ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada