Maharashtra Politics: ಪಕ್ಷದೊಳಗಿನ ಬಿಕ್ಕಟ್ಟಿನಿಂದ ಹಲವು ಶಿವಸೇನೆ ನಾಯಕರನ್ನು ವಜಾಗೊಳಿಸಿದ ಉದ್ಧವ್ ಠಾಕ್ರೆ

ಉದ್ಧವ್ ಠಾಕ್ರೆ ಅವರ ಸರ್ಕಾರವನ್ನು ಉರುಳಿಸಿದ ನಂತರ ಸಿಎಂ ಪಟ್ಟಕ್ಕೇರಿದ ಏಕನಾಥ್ ಶಿಂಧೆ ಈ ಸಮಯವನ್ನು ಸರಿಯಾಗಿ ಬಳಸಿಕೊಂಡಿದ್ದು, ಉದ್ಧವ್ ಠಾಕ್ರೆ ವಜಾಗೊಳಿಸಿದ ಶಿವಸೇನೆ ನಾಯಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ.

Maharashtra Politics: ಪಕ್ಷದೊಳಗಿನ ಬಿಕ್ಕಟ್ಟಿನಿಂದ ಹಲವು ಶಿವಸೇನೆ ನಾಯಕರನ್ನು ವಜಾಗೊಳಿಸಿದ ಉದ್ಧವ್ ಠಾಕ್ರೆ
ಉದ್ಧವ್ ಠಾಕ್ರೆImage Credit source: India Today
Follow us
TV9 Web
| Updated By: Digi Tech Desk

Updated on:Jul 19, 2022 | 9:55 AM

ಮುಂಬೈ: ಮಹಾರಾಷ್ಟ್ರ ರಾಜಕೀಯ (Maharashtra Politics) ಕಳೆದ ಒಂದು ತಿಂಗಳಿನಿಂದ ಬಹಳ ಕುತೂಹಲ ಮೂಡಿಸಿದೆ. ಉದ್ಧವ್ ಠಾಕ್ರೆ ಅವರ ಸರ್ಕಾರ ಪತನವಾಗಿ, ಏಕನಾಥ್ ಶಿಂಧೆ (Eknath Shinde) ಸರ್ಕಾರ ರಚನೆಯಾದ ನಂತರವೂ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಇನ್ನೂ ಬಗೆಹರಿದಿಲ್ಲ. ಈ ನಡುವೆ ಶಿವಸೇನೆಯಲ್ಲಿ ಭಿನ್ನಮತ ಭುಗಿಲೆದ್ದಿದ್ದು, ಶಿವಸೇನೆಯ ಉದ್ಧವ್ ಠಾಕ್ರೆ (Uddhav Thackeray) ತಮ್ಮ ತಂದೆ ರಚಿಸಿದ ಶಿವಸೇನೆ ಪಕ್ಷದ ನಿಯಂತ್ರಣಕ್ಕಾಗಿ ಏಕನಾಥ್ ಶಿಂಧೆ ವಿರುದ್ಧ ಹೋರಾಡುತ್ತಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಶಿವಸೇನೆಯ ಹಲವಾರು ಪ್ರಮುಖ ನಾಯಕರನ್ನು ಉದ್ಧವ್ ಠಾಕ್ರೆ ವಜಾಗೊಳಿಸಿದ್ದಾರೆ.

ಉದ್ಧವ್ ಠಾಕ್ರೆ ಅವರ ಸರ್ಕಾರವನ್ನು ಉರುಳಿಸಿದ ನಂತರ ಸಿಎಂ ಪಟ್ಟಕ್ಕೇರಿದ ಏಕನಾಥ್ ಶಿಂಧೆ ಈ ಸಮಯವನ್ನು ಸರಿಯಾಗಿ ಬಳಸಿಕೊಂಡಿದ್ದು, ಉದ್ಧವ್ ಠಾಕ್ರೆ ವಜಾಗೊಳಿಸಿದ ಶಿವಸೇನೆ ನಾಯಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ಬಣ ತಮ್ಮದೇ ನಿಜವಾದ ಶಿವಸೇನೆ ಪಕ್ಷ ಎಂದು ಹೇಳಿಕೊಂಡರೆ, ಉದ್ಧವ್ ಠಾಕ್ರೆ ನೇತೃತ್ವದ ಬಣ ಶಿಂಧೆ ನೇತೃತ್ವದ ಬಂಡಾಯ ಶಾಸಕರ ಬಣ ಶಿವಸೇನೆಯಿಂದ ವಿಭಜನೆಯಾಗಿರುವ ಬಣ ಎಂದು ಹೇಳಿಕೊಳ್ಳುತ್ತಿದೆ.

ಮಹಾರಾಷ್ಟ್ರದ ಶಿವಸೇನೆ ಶಾಸಕರ ಅನರ್ಹತೆ ಮತ್ತು ಪಕ್ಷದೊಳಗಿನ ವಿಪ್ ಮತ್ತು ನೇಮಕಾತಿಗಳ ಕಾನೂನುಬದ್ಧತೆಗೆ ಸಂಬಂಧಿಸಿದಂತೆ ಎರಡೂ ಕಡೆಯ ಅರ್ಜಿಗಳ ಗುಂಪನ್ನು ಬುಧವಾರ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ. ವಿಚಾರಣೆಗೆ ಮುನ್ನವೇ ಶಿವಸೇನೆ ಬಣಗಳ ನಡುವಿನ ಜಟಾಪಟಿ ತೀವ್ರಗೊಂಡಿದ್ದರಿಂದ ಉದ್ಧವ್ ಠಾಕ್ರೆ ಬಣವು ಮಾಜಿ ಸಚಿವ ವಿಜಯ್ ಶಿವತಾರೆ, ಹಿಂಗೋಲಿ ಜಿಲ್ಲಾಧ್ಯಕ್ಷ ಸ್ಥಾನದಿಂದ ಶಾಸಕ ಸಂತೋಷ್ ಬಂಗಾರ್, ಥಾಣೆಯ ಜಿಲ್ಲಾ ಪ್ರಮುಖ್ (ಜಿಲ್ಲಾ ಮುಖ್ಯಸ್ಥ) ಸ್ಥಾನದಿಂದ ನರೇಶ್ ಮ್ಹಾಸ್ಕೆ ಅವರನ್ನು ವಜಾಗೊಳಿಸಿದೆ.

ಇದನ್ನೂ ಓದಿ: Maharashtra Political Analysis: ಶಿವಸೇನೆ ಪಕ್ಷದ ಇಬ್ಭಾಗ ಖಚಿತ; ಏಕನಾಥ್ ಶಿಂಧೆ ಬಣದ ಜೊತೆ ಸರ್ಕಾರ ರಚನೆಗೆ ಬಿಜೆಪಿ ಕಾತರ

ಉದ್ಧವ್ ಠಾಕ್ರೆ ಅವರು ಥಾಣೆ, ಪಾಲ್ಘರ್, ಅಮರಾವತಿ ಮತ್ತು ಯವತ್ಮಾಲ್ ಜಿಲ್ಲೆಗಳಲ್ಲಿ 100ಕ್ಕೂ ಹೆಚ್ಚು ಹೊಸ ಪದಾಧಿಕಾರಿಗಳನ್ನು ನೇಮಿಸಿದ್ದಾರೆ. ಹೊಸ ಪದಾಧಿಕಾರಿಗಳು ಬಂಡಾಯ ಶಾಸಕರು ಬಿಟ್ಟುಹೋದ ಖಾಲಿ ಹುದ್ದೆಗಳಿಗೆ ಎರಡನೇ ಹಂತದ ನಾಯಕರಾಗಿದ್ದಾರೆ. ಶಿವಸೇನೆ ಪಕ್ಷಕ್ಕೆ ಸೇರಿದ 55 ಶಾಸಕರ ಪೈಕಿ 53 ಮಂದಿ ಒಂದಲ್ಲ ಒಂದು ಕಡೆ ಅನರ್ಹತೆ ಪಟ್ಟಿಯಲ್ಲಿದ್ದಾರೆ. ಏಕನಾಥ್ ಶಿಂಧೆ ಸೇರಿದಂತೆ ಶಿಂಧೆ ಬಣದ 16 ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಉದ್ಧವ್ ಠಾಕ್ರೆ ಪ್ರತಿಪಾದಿಸಿದ್ದಾರೆ.

ಜೂನ್ 25ರಂದು ನಡೆದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಉದ್ಧವ್ ಠಾಕ್ರೆ ತಂಡ 6 ಪ್ರಮುಖ ನಿರ್ಣಯಗಳನ್ನು ಅಂಗೀಕರಿಸಿದ್ದಾರೆ. ಈ ವೇಳೆ ಉದ್ಧವ್ ಠಾಕ್ರೆ ಅವರನ್ನು ಸೇನಾ ಮುಖ್ಯಸ್ಥ ಎಂದು ಶಾಸಕರು ಪುನರುಚ್ಚರಿಸಿದ್ದಾರೆ. ಅಲ್ಲದೆ, ಶಿವಸೇನೆ ಪಕ್ಷದ ಎಲ್ಲಾ ನಿರ್ಧಾರಗಳನ್ನು ತೆಗೆದುಕೊಳ್ಳಲು ಅವರಿಗೆ ಅಧಿಕಾರ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ರಚನೆ ಕುರಿತು ಎರಡನೇ ಸುತ್ತಿನ ಮಾತುಕತೆಗಾಗಿ ಏಕನಾಥ್ ಶಿಂಧೆ ದೆಹಲಿಗೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಹುದ್ದೆಗೆ ಶಿವಸೇನೆಯ ರಾಜನ್ ಸಾಲ್ವಿ ನಾಮಪತ್ರ ಸಲ್ಲಿಕೆ

ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಜೂನ್ 30ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ನೀಡಿದ ಬಂಡಾಯ ಶಾಸಕರ ಭವಿಷ್ಯದ ಬಗ್ಗೆ ಕಳವಳದ ನಡುವೆ ಸಚಿವ ಸಂಪುಟವನ್ನು ಇನ್ನೂ ರಚಿಸಲಾಗಿಲ್ಲ.

Published On - 8:24 am, Tue, 19 July 22

ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
ಸಂಸತ್ತನ್ನು ನಗೆಗಡಲಲ್ಲಿ ತೇಲಿಸಿದ್ದ ಮನಮೋಹನ್​ ಸಿಂಗ್ ಕಾವ್ಯ! ವಿಡಿಯೋ ನೋಡಿ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Devotional: ವಾಕಿಂಗ್​ ಮಾಡುವುದರಿಂದ ಏನೆಲ್ಲಾ ಪ್ರಯೋಜನ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
Daily Horoscope: ಈ ರಾಶಿಯವರ ಉದ್ದೇಶಗಳು ಇಂದು ಈಡೇರಲಿವೆ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್