ಪುಣೆಯಲ್ಲಿ ನೈಟ್ ಕರ್ಫ್ಯೂ ಜಾರಿ; ನಾಳೆಯಿಂದ 7 ದಿನ ಬಾರ್, ಹೊಟೆಲ್, ರೆಸ್ಟೋರೆಂಟ್ ಬಂದ್

ನಾಳೆಯಿಂದ (ಏಪ್ರಿಲ್ 3) ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ, 12 ಗಂಟೆಗಳ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಮುಂದಿನ ಶುಕ್ರವಾರ ಪರಿಸ್ಥಿತಿಯನ್ನು ಮತ್ತೆ ಅವಲೋಕಿಸಲಾಗುವುದು ಎಂದು ಡಿವಿಷನಲ್ ಕಮಿಷನರ್ ಸೌರಭ್ ರಾವ್ ತಿಳಿಸಿದ್ದಾರೆ.

ಪುಣೆಯಲ್ಲಿ ನೈಟ್ ಕರ್ಫ್ಯೂ ಜಾರಿ; ನಾಳೆಯಿಂದ 7 ದಿನ ಬಾರ್, ಹೊಟೆಲ್, ರೆಸ್ಟೋರೆಂಟ್ ಬಂದ್
ಸೌಜನ್ಯ : ಅಂತರ್ಜಾಲ
Follow us
| Updated By: ganapathi bhat

Updated on:Apr 05, 2022 | 12:59 PM

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದ ಪುಣೆ ಜಿಲ್ಲೆಯಲ್ಲಿ ನಾಳೆಯಿಂದ (ಏಪ್ರಿಲ್ 3) ಕಠಿಣ ನಿಯಮಾವಳಿಗಳನ್ನು ಜಾರಿಗೊಳಿಸುವ ಬಗ್ಗೆ ಇಂದು (ಏಪ್ರಿಲ್ 2) ಮಾರ್ಗಸೂಚಿ ಬಿಡುಗಡೆಗೊಳಿಸಿದ್ದಾರೆ. ನೂತನ ಆದೇಶದಂತೆ ಪುಣೆ ಜಿಲ್ಲೆಯಲ್ಲಿ ನಾಳೆಯಿಂದ ರಾತ್ರಿ ಕರ್ಫ್ಯೂ ಜಾರಿಯಾಗಲಿದೆ.

ಪುಣೆ (ಮಹಾರಾಷ್ಟ್ರ) ಡಿವಿಷನಲ್ ಕಮಿಷನರ್ ಹೊರಡಿಸಿರುವ ಮಾರ್ಗಸೂಚಿಯ ಪ್ರಕಾರ, ಬಾರ್, ಹೊಟೇಲ್, ರೆಸ್ಟೋರೆಂಟ್​ಗಳು ಏಳು ದಿನಗಳ ಕಾಲ ಕಾರ್ಯನಿರ್ವಹಿಸುವಂತಿಲ್ಲ. ಹೊಟೆಲ್ ಹಾಗೂ ರೆಸ್ಟೋರೆಂಟ್​ಗಳಿಂದ ಹೋಮ್ ಡೆಲಿವರಿಗೆ ಮಾತ್ರ ಅವಕಾಶವಿದೆ. ಜೊತೆಗೆ, ಧಾರ್ಮಿಕ ಕ್ಷೇತ್ರಗಳು ಕೂಡ 7 ದಿನಗಳ ಕಾಲ ಸಂಪೂರ್ಣವಾಗಿ ಮುಚ್ಚಲಿವೆ.

ಮದುವೆ ಹಾಗೂ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಸಾರ್ವಜನಿಕ ಕಾರ್ಯಕ್ರಮಗಳಿಗೆ ಸರ್ಕಾರ ತಡೆಯೊಡ್ಡಿದೆ. ಸಾವು ಸಂಭವಿಸಿದಲ್ಲಿ ಕೇವಲ 20 ಮತ್ತು ವಿವಾಹ ಸಮಾರಂಭದಲ್ಲಿ ಕೇವಲ 50 ಜನರು ಸೇರಬಹುದು ಎಂದು ಸೂಚನೆ ನೀಡಲಾಗಿದೆ.

ನಾಳೆಯಿಂದ (ಏಪ್ರಿಲ್ 3) ಸಂಜೆ 6 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ, 12 ಗಂಟೆಗಳ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಮುಂದಿನ ಶುಕ್ರವಾರ ಪರಿಸ್ಥಿತಿಯನ್ನು ಮತ್ತೆ ಅವಲೋಕಿಸಲಾಗುವುದು ಎಂದು ಡಿವಿಷನಲ್ ಕಮಿಷನರ್ ಸೌರಭ್ ರಾವ್ ತಿಳಿಸಿದ್ದಾರೆ.

ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ, ಗುರುವಾರ (ಏಪ್ರಿಲ್ 2) ಸುಮಾರು 8,011 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ. ಈ ಮೂಲಕ ಒಟ್ಟು ಕೊವಿಡ್-19 ಕೇಸ್​ಗಳ ಸಂಖ್ಯೆ 5,42,422 ಕ್ಕೆ ಏರಿಕೆಯಾಗಿದೆ. ಪುಣೆಯಲ್ಲಿ ಸತತವಾಗಿ ಎರಡನೇ ದಿನ 8,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ. ಬುಧವಾರ (ಏಪ್ರಿಲ್ 1) 8,605 ಕೊವಿಡ್-19 ಪ್ರಕರಣಗಳು ದೃಢಪಟ್ಟಿದ್ದವು. ಕೊರೊನಾ ಸಾಂಕ್ರಾಮಿಕ ರೋಗವು ಕಳೆದ ವರ್ಷ ಆರಂಭವಾದ ಬಳಿಕ, ಒಂದು ದಿನದಲ್ಲಿ ದಾಖಲಾದ ಅತಿ ಹೆಚ್ಚು ಸೋಂಕು ಇದಾಗಿದೆ.

ಮಹಾರಾಷ್ಟ್ರದಲ್ಲಿ ಗುರುವಾರ 43,183 ಕೊರೊನಾ ಪ್ರಕರಣಗಳು ದಾಖಲಾಗಿದೆ. ಇದು ಕೂಡ ಕೊರೊನಾ ಸೋಂಕು ಆರಂಭವಾದ ಬಳಿಕ ಒಂದು ದಿನದ ಅವಧಿಯಲ್ಲಿ ದಾಖಲಾದ ಅತಿ ಹೆಚ್ಚು ಪ್ರಕರಣವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 28,56,163 ಆಗಿದೆ. ಗುರುವಾರ, ರಾಜ್ಯದಲ್ಲಿ ಒಟ್ಟು 249 ಸಾವು ಸಂಭವಿಸಿದ್ದು, ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 54,898 ಆಗಿದೆ. ಕೊರೊನಾ ಸೋಂಕು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಇಂದು ಸಂಜೆ 8.30ಕ್ಕೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ರಾಜ್ಯವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ: Corona New Guidelines: ರಾಜ್ಯದಲ್ಲಿ ಲಾಕ್​ಡೌನ್, ನೈಟ್ ಕರ್ಫ್ಯೂ ಇಲ್ಲ; ನೂತನ ಕೊರೊನಾ ತಡೆ ಮಾರ್ಗದರ್ಶಿ ಸೂತ್ರ ಬಿಡುಗಡೆ

ಕೊರೊನಾ ನಡುವೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟ

(Maharashtra Pune Shutdown covid 19 coronavirus 7 days night curfew imposed malls hotels bars to remain closed)

Published On - 3:22 pm, Fri, 2 April 21

ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಉದಾಹರಣೆ ಮೂಲಕ ಇಕ್ಕಟ್ಟಿನ ಪರಿಸ್ಥಿತಿ ವಿವರಿಸಿದ ರಮೇಶ್ ಅರವಿಂದ್
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಹಬ್ಬ ಮುಗಿಯುತ್ತಿದ್ದಂತೆಯೇ ಗಣೇಶನಿಗೆ ಹೀಗಾ ಅವಮಾನ ಮಾಡುವುದು..!
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಸ್ಫೋಟಕ್ಕೆ ಉಗ್ರರ ಸಂಚು: ಕರ್ನಾಟಕ ಬಿಜೆಪಿ ಮುಖ್ಯ ಕಚೇರಿಗೆ ಭದ್ರತೆ ಹೆಚ್ಚಳ
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಧ್ರುವ ಸರ್ಜಾ ಮ್ಯಾನೇಜರ್​ ಬಂಧನದ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್​
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಮದ್ಯ ಸೇವಿಸಿ ಆಸ್ಪತ್ರೆಗೆ ಬಂದ ವೈದ್ಯ; ಕುಡಿದ ಮತ್ತಿನಲ್ಲಿ ಬಿದ್ದು ಹೊರಳಾಟ
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ಗೃಹಲಕ್ಷ್ಮಿ ಯೋಜನೆಗೆ ನೀಡಲು ಸರ್ಕಾರದ ಬಳಿ ಹಣ ಇಲ್ವಾ?
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ಮೈಸೂರು ದಸರಾ ಆನೆಗಳ ಮಾವುತ, ಕಾವಾಡಿಗರಿಗೆ ಹಾಟ್​​ ಬಾಕ್ಸ್​​ ಗಿಫ್ಟ್​​
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
ವಿದ್ಯಾರ್ಥಿಗಳ ಮುಂದೆ ಮಾದಕ ಮೈಮಾಟ ತೋರಿಸಿಕೊಂಡು ನೃತ್ಯ ಮಾಡಿದ ಶಿಕ್ಷಕಿ
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್
‘ಚಾರ್ಜ್​ಶೀಟ್ ಸಾರ್ವಜನಿಕ ಡಾಕ್ಯುಮೆಂಟ್; ಜಿ. ಪರಮೇಶ್ವರ್