Maharashtra Rain: ಮಹಾರಾಷ್ಟ್ರದ ಥಾಣೆಯಲ್ಲಿ ಪ್ರವಾಹ ಭೀತಿ; ಸಿಎಂ ಏಕನಾಥ್ ಶಿಂಧೆ ಮನೆ ಆವರಣಕ್ಕೂ ನುಗ್ಗಿದ ಮಳೆ ನೀರು

Eknath Shinde House: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿವಿಧೆಡೆ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಇಂದು ಬೆಳಗ್ಗೆ ಥಾಣೆಯಲ್ಲಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಿವಾಸದ ಸುತ್ತಮುತ್ತ ನೀರು ನಿಂತಿತ್ತು.

Maharashtra Rain: ಮಹಾರಾಷ್ಟ್ರದ ಥಾಣೆಯಲ್ಲಿ ಪ್ರವಾಹ ಭೀತಿ; ಸಿಎಂ ಏಕನಾಥ್ ಶಿಂಧೆ ಮನೆ ಆವರಣಕ್ಕೂ ನುಗ್ಗಿದ ಮಳೆ ನೀರು
ಥಾಣೆಯಲ್ಲಿ ಮಳೆImage Credit source: Twitter
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jul 07, 2022 | 10:52 AM

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಗಾರು ಮಳೆಯ (Monsoon) ಅಬ್ಬರ ಜೋರಾಗಿದೆ. ಭಾರೀ ಮಳೆಯಿಂದ ಮಹಾರಾಷ್ಟ್ರದ ಅನೇಕ ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ (Red Alert) ಘೋಷಿಸಲಾಗಿದ್ದು, ಶಾಲಾ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಮಹಾರಾಷ್ಟ್ರದ ಥಾಣೆಯಲ್ಲಿ ನಿನ್ನೆಯಿಂದ ವಿಪರೀತ ಮಳೆಯಾಗುತ್ತಿದ್ದು, ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (CM Eknath Shinde) ಅವರ ಮನೆಯ ಸುತ್ತಲೂ ಮಳೆ ನೀರು ತುಂಬಿದೆ. ಥಾಣೆಯಲ್ಲಿ (Thane)) ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಏಕನಾಥ್ ಶಿಂಧೆ ಅವರ ಮನೆಯ ಸುತ್ತಲೂ ಮಳೆ ನೀರು ಆವರಿಸಿಕೊಂಡಿದ್ದು. ಪೌರಕಾರ್ಮಿಕರು ನೀರು ತೆರವುಗೊಳಿಸುತ್ತಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಿವಿಧೆಡೆ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಇಂದು ಬೆಳಗ್ಗೆ ಥಾಣೆಯಲ್ಲಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಿವಾಸದ ಸುತ್ತಮುತ್ತ ನೀರು ನಿಂತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಎಂ ನಿವಾಸದ ಆವರಣದೊಳಗೆ ಮಳೆ ನೀರು ನುಗ್ಗಿರುವ ಬಗ್ಗೆ ಇಂದು ಬೆಳಗ್ಗೆ 6.15ರ ಸುಮಾರಿಗೆ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: Rain Updates: ಭಾರೀ ಮಳೆಯಿಂದ ಮಹಾರಾಷ್ಟ್ರ, ಗೋವಾದ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ

ನಿನ್ನೆ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ ನಗರದ ಲೂಯಿಸ್ವಾಡಿ ಪ್ರದೇಶದಲ್ಲಿರುವ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ನಿವಾಸದ ಆವರಣದೊಳಗೆ ನೀರು ನುಗ್ಗಿದೆ ಎಂದು ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ಪ್ರಾದೇಶಿಕ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಅವಿನಾಶ್ ಸಾವಂತ್ ಹೇಳಿದ್ದಾರೆ. ಪೌರ ಕಾರ್ಮಿಕರು ಸ್ಥಳಕ್ಕೆ ಧಾವಿಸಿ ಪ್ರವಾಹದ ನೀರನ್ನು ಸ್ವಚ್ಛಗೊಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಒಂದೇ ಸಮನೆ ಸುರಿಯುತ್ತಿರುವ ಮಳೆಯಿಂದ ಪ್ರವಾಹ ಉಂಟಾಗಿದ್ದು, ಇದುವರೆಗೂ ಯಾರೂ ಗಾಯಗೊಂಡಿಲ್ಲ, ಶಾಲೆಯ ವಿದ್ಯಾರ್ಥಿಗಳಿಗೆ ಹತ್ತಿರದ ಕೆಲವು ಶಾಲೆಗಳಲ್ಲಿ ವಸತಿ ಕಲ್ಪಿಸಲಾಗಿದೆ. ಪುಣೆ, ಸತಾರಾ ಮತ್ತು ಕೊಲ್ಹಾಪುರ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂದಿನ ಮೂರು ದಿನಗಳಲ್ಲಿ ಪಶ್ಚಿಮ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗಲಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕಡಿಮೆಯಾಗಲಿದೆ ಇಂಧನ ಬೆಲೆ; ವ್ಯಾಟ್ ಕಡಿತ ಘೋಷಿಸಿದ ಏಕನಾಥ್​​ ಶಿಂಧೆ

ಮುಂದಿನ ಮೂರು ದಿನಗಳಲ್ಲಿ ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ ಜುಲೈ 8ರವರೆಗೆ ಸತಾರಾ ಜಿಲ್ಲೆಗೆ ಮತ್ತು ಜುಲೈ 9ರವರೆಗೆ ಕೊಲ್ಹಾಪುರ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಪಂಜಾಬ್ ಮತ್ತು ಹರಿಯಾಣ ಮತ್ತು ಚಂಡೀಗಢದಲ್ಲಿ ಜುಲೈ 9 ರವರೆಗೆ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) 17 ತಂಡಗಳನ್ನು ನಿಯೋಜಿಸಲಾಗಿದೆ. ಎರಡು ತಂಡಗಳು ಪ್ರವಾಹ ಪೀಡಿತ ಶಿರೋಲ್ ತೆಹಸಿಲ್ ಮತ್ತು ಕೊಲ್ಹಾಪುರ ನಗರದಲ್ಲಿ ಬೀಡುಬಿಟ್ಟಿವೆ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ