AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Rain: ಮಹಾರಾಷ್ಟ್ರದಲ್ಲಿ ನಿಲ್ಲದ ಮಳೆ; ಪುಣೆ ಸೇರಿ ಹಲವೆಡೆ ರೆಡ್ ಅಲರ್ಟ್​, ಜುಲೈ 16ರವರೆಗೆ ಶಾಲೆಗಳಿಗೆ ರಜೆ

Mumbai Rains: ಇಂದು ಮುಂಬೈ, ರಾಯಗಢ, ರತ್ನಗಿರಿ, ಸಿಂಧುದುರ್ಗ, ಕೊಲ್ಹಾಪುರ, ಸತಾರಾ, ಅಮರಾವತಿ ಮತ್ತು ಥಾಣೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪಾಲ್ಘರ್, ನಾಸಿಕ್ ಮತ್ತು ಪುಣೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

Maharashtra Rain: ಮಹಾರಾಷ್ಟ್ರದಲ್ಲಿ ನಿಲ್ಲದ ಮಳೆ; ಪುಣೆ ಸೇರಿ ಹಲವೆಡೆ ರೆಡ್ ಅಲರ್ಟ್​, ಜುಲೈ 16ರವರೆಗೆ ಶಾಲೆಗಳಿಗೆ ರಜೆ
ಮಳೆ
TV9 Web
| Edited By: |

Updated on:Jul 14, 2022 | 10:34 AM

Share

ಮುಂಬೈ: ನೆರೆಯ ರಾಜ್ಯವಾದ ಮಹಾರಾಷ್ಟ್ರದಲ್ಲಿ ಇನ್ನೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಇಂದು ಮುಂಬೈ (Mumbai Rains), ರಾಯಗಢ, ರತ್ನಗಿರಿ, ಸಿಂಧುದುರ್ಗ, ಕೊಲ್ಹಾಪುರ, ಸತಾರಾ, ಅಮರಾವತಿ ಮತ್ತು ಥಾಣೆಯಲ್ಲಿ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್(Orange Alert) ಘೋಷಿಸಿದೆ. ಪಾಲ್ಘರ್, ನಾಸಿಕ್ ಮತ್ತು ಪುಣೆಯಲ್ಲಿ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ಮಹಾರಾಷ್ಟ್ರದ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಶಾಲಾ-ಕಾಲೇಜುಗಳಿಗೆ ಜುಲೈ 16ರವರೆಗೆ ರಜೆ ನೀಡಲಾಗಿದೆ.

ಭಾರೀ ಮಳೆಯ ಮುನ್ನೆಚ್ಚರಿಕೆಯಿಂದಾಗಿ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಜುಲೈ 16ರವರೆಗೆ ಅಗತ್ಯ ಕಾರ್ಯಗಳನ್ನು ನಿರ್ವಹಿಸುವ ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ಬಂದ್ ಆಗಲಿವೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಜುಲೈ 10ರಿಂದ ಜುಲೈ 13ರವರೆಗೆ ಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಆದೇಶಿಸಲಾಗಿತ್ತು. ಇದೀಗ ಆ ಆದೇಶವನ್ನು ಜುಲೈ 16ರವರೆಗೆ ವಿಸ್ತರಿಸಲಾಗಿದೆ.

ಇದನ್ನೂ ಓದಿ
Image
Monsoon 2022: ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್​​ನಲ್ಲಿ ಮಳೆಯ ಆರ್ಭಟದಿಂದ 18 ಜನ ಸಾವು
Image
Telangana Rain: ತೆಲಂಗಾಣದಲ್ಲಿ ಪ್ರವಾಹ ಭೀತಿ; ರೆಡ್ ಅಲರ್ಟ್​ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ
Image
Viral Video: ಪುಣೆಯಲ್ಲಿ ನದಿಗೆ ಹಾರಿ ಪ್ರವಾಹದಿಂದ ವ್ಯಕ್ತಿಯನ್ನು ಕಾಪಾಡಿದ ಪೊಲೀಸ್; ಮೈ ಜುಮ್ಮೆನಿಸುವ ವಿಡಿಯೋ ಇಲ್ಲಿದೆ

ನಾಗಪುರದಲ್ಲಿ ಜಿಲ್ಲಾಧಿಕಾರಿಗಳು ಸಮೀಕ್ಷೆ ನಡೆಸಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ನಾಗರಿಕರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಆರೋಗ್ಯ ಶಿಬಿರಗಳನ್ನೂ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ ನಾಗ್ಪುರದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ಸಂಬಂಧಿಸಿದ ಘಟನೆಗಳಿಂದಾಗಿ ನಾಗ್ಪುರದಲ್ಲಿ ಕಳೆದ 24 ಗಂಟೆಗಳಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಜುಲೈ 1ರಿಂದ ಜುಲೈ 13ರವರೆಗೆ ಮಳೆ ಸಂಬಂಧಿತ ಘಟನೆಗಳಿಂದ 20 ಜನರು ಸಾವನ್ನಪ್ಪಿದ್ದಾರೆ ಮತ್ತು 19 ಜನರು ಗಾಯಗೊಂಡಿದ್ದಾರೆ. ಮುಂದಿನ 3 ದಿನಗಳ ಕಾಲ ನಾಗ್ಪುರದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Monsoon 2022: ಉತ್ತರ ಭಾರತದಲ್ಲಿ ಭಾರೀ ಪ್ರವಾಹ; ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶದಲ್ಲಿ ಮರಣ ಮೃದಂಗ

ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಪುಣೆ ನಗರ ಮತ್ತು ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಎಲ್ಲಾ ಶಾಲೆಗಳಿಗೆ ಇಂದು ರಜೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪುಣೆ ನಗರ ಮತ್ತು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ.

ಇದನ್ನೂ ಓದಿ: Monsoon 2022: ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್​​ನಲ್ಲಿ ಮಳೆಯ ಆರ್ಭಟದಿಂದ 18 ಜನ ಸಾವು

ಗಡ್ಚಿರೋಲಿ ಜಿಲ್ಲೆಯಲ್ಲಿ ಮೂವರು ನಾಪತ್ತೆಯಾಗಿದ್ದಾರೆ. ಮುಂಬೈ ಮತ್ತು ಅದರ ಸುತ್ತಮುತ್ತಲೂ ಸಾಧಾರಣ ಮಳೆಯಾಗಿದೆ. ನಾಸಿಕ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಗೋದಾವರಿ ನದಿಯ ದಡದಲ್ಲಿರುವ ದೇವಾಲಯಗಳು ಮುಳುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದೆಡೆ ಗುಜರಾತ್‌ನ ನವಸಾರಿಯಲ್ಲಿ ಮಳೆ ಮತ್ತು ಪ್ರವಾಹದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Published On - 10:31 am, Thu, 14 July 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ