ಮುಂಬೈ: ನೆರೆಯ ರಾಜ್ಯವಾದ ಮಹಾರಾಷ್ಟ್ರದಲ್ಲಿ ಇನ್ನೂ ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಇಂದು ಮುಂಬೈ (Mumbai Rains), ರಾಯಗಢ, ರತ್ನಗಿರಿ, ಸಿಂಧುದುರ್ಗ, ಕೊಲ್ಹಾಪುರ, ಸತಾರಾ, ಅಮರಾವತಿ ಮತ್ತು ಥಾಣೆಯಲ್ಲಿ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್(Orange Alert) ಘೋಷಿಸಿದೆ. ಪಾಲ್ಘರ್, ನಾಸಿಕ್ ಮತ್ತು ಪುಣೆಯಲ್ಲಿ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ಮಹಾರಾಷ್ಟ್ರದ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಶಾಲಾ-ಕಾಲೇಜುಗಳಿಗೆ ಜುಲೈ 16ರವರೆಗೆ ರಜೆ ನೀಡಲಾಗಿದೆ.
ಭಾರೀ ಮಳೆಯ ಮುನ್ನೆಚ್ಚರಿಕೆಯಿಂದಾಗಿ ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಜುಲೈ 16ರವರೆಗೆ ಅಗತ್ಯ ಕಾರ್ಯಗಳನ್ನು ನಿರ್ವಹಿಸುವ ಸರ್ಕಾರಿ ಕಚೇರಿಗಳನ್ನು ಹೊರತುಪಡಿಸಿ ಬಂದ್ ಆಗಲಿವೆ. ರೆಡ್ ಅಲರ್ಟ್ ಹಿನ್ನೆಲೆಯಲ್ಲಿ ಜುಲೈ 10ರಿಂದ ಜುಲೈ 13ರವರೆಗೆ ಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಆದೇಶಿಸಲಾಗಿತ್ತು. ಇದೀಗ ಆ ಆದೇಶವನ್ನು ಜುಲೈ 16ರವರೆಗೆ ವಿಸ್ತರಿಸಲಾಗಿದೆ.
#WATCH | Maharashtra: Various temples submerge under the Godavari river in Nashik, due to incessant rain for the past three days pic.twitter.com/AvAr7JYoYE
— ANI (@ANI) July 11, 2022
ನಾಗಪುರದಲ್ಲಿ ಜಿಲ್ಲಾಧಿಕಾರಿಗಳು ಸಮೀಕ್ಷೆ ನಡೆಸಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ನಾಗರಿಕರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದಾರೆ. ಆರೋಗ್ಯ ಶಿಬಿರಗಳನ್ನೂ ಸ್ಥಾಪಿಸಲಾಗುವುದು ಎಂದು ತಿಳಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ ನಾಗ್ಪುರದಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಭಾರೀ ಮಳೆಗೆ ಸಂಬಂಧಿಸಿದ ಘಟನೆಗಳಿಂದಾಗಿ ನಾಗ್ಪುರದಲ್ಲಿ ಕಳೆದ 24 ಗಂಟೆಗಳಲ್ಲಿ 10 ಜನರು ಸಾವನ್ನಪ್ಪಿದ್ದಾರೆ. ಜುಲೈ 1ರಿಂದ ಜುಲೈ 13ರವರೆಗೆ ಮಳೆ ಸಂಬಂಧಿತ ಘಟನೆಗಳಿಂದ 20 ಜನರು ಸಾವನ್ನಪ್ಪಿದ್ದಾರೆ ಮತ್ತು 19 ಜನರು ಗಾಯಗೊಂಡಿದ್ದಾರೆ. ಮುಂದಿನ 3 ದಿನಗಳ ಕಾಲ ನಾಗ್ಪುರದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
#WATCH | Maharashtra: Mumbai wakes up to rain lashing several parts of the city. pic.twitter.com/kzloDbqplN
— ANI (@ANI) July 12, 2022
ಇದನ್ನೂ ಓದಿ: Monsoon 2022: ಉತ್ತರ ಭಾರತದಲ್ಲಿ ಭಾರೀ ಪ್ರವಾಹ; ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶದಲ್ಲಿ ಮರಣ ಮೃದಂಗ
ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಪುಣೆ ನಗರ ಮತ್ತು ಪಿಂಪ್ರಿ ಚಿಂಚ್‌ವಾಡ್ ಪ್ರದೇಶದ ಎಲ್ಲಾ ಶಾಲೆಗಳಿಗೆ ಇಂದು ರಜೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಪುಣೆ ನಗರ ಮತ್ತು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ.
Godavari river in spate after heavy rain,water filled in Nashik temple Rain continues in Maharashtra.A temple in Nashik has been flooded after the Godavari River in spate due to heavy rain.The Meteorological Department has predicted heavy to very heavy rains in the next 48 hours. pic.twitter.com/ODvghBnN3B
— BHARAT GHANDAT (@BHARATGHANDAT2) July 11, 2022
ಇದನ್ನೂ ಓದಿ: Monsoon 2022: ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್ನಲ್ಲಿ ಮಳೆಯ ಆರ್ಭಟದಿಂದ 18 ಜನ ಸಾವು
ಗಡ್ಚಿರೋಲಿ ಜಿಲ್ಲೆಯಲ್ಲಿ ಮೂವರು ನಾಪತ್ತೆಯಾಗಿದ್ದಾರೆ. ಮುಂಬೈ ಮತ್ತು ಅದರ ಸುತ್ತಮುತ್ತಲೂ ಸಾಧಾರಣ ಮಳೆಯಾಗಿದೆ. ನಾಸಿಕ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಹಲವು ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಗೋದಾವರಿ ನದಿಯ ದಡದಲ್ಲಿರುವ ದೇವಾಲಯಗಳು ಮುಳುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತೊಂದೆಡೆ ಗುಜರಾತ್‌ನ ನವಸಾರಿಯಲ್ಲಿ ಮಳೆ ಮತ್ತು ಪ್ರವಾಹದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Published On - 10:31 am, Thu, 14 July 22