Maharashtra Rain: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಇನ್ನೆರಡು ದಿನ ಮಳೆ ಹೆಚ್ಚಳ; ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ

| Updated By: ಸುಷ್ಮಾ ಚಕ್ರೆ

Updated on: Jul 08, 2022 | 11:05 AM

ಮಾಂಜರಿ, ಯಡೂರು, ಕಲ್ಲೋಳ ಗ್ರಾಮದ ರೈತರಲ್ಲಿ ಆತಂಕ ಎದುರಾಗಿದ್ದು, ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಹೀಗಾಗಿ, ಯಾವಾಗ ಬೇಕಾದರೂ ಕೃಷ್ಣಾ ನದಿಯಲ್ಲಿ ನೀರು ಹೆಚ್ಚಳವಾಗುವ ಸಾಧ್ಯತೆಯಿದೆ.

Maharashtra Rain: ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಇನ್ನೆರಡು ದಿನ ಮಳೆ ಹೆಚ್ಚಳ; ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀತಿ
ಮಹಾರಾಷ್ಟ್ರದಲ್ಲಿ ಮಳೆ
Follow us on

ಚಿಕ್ಕೋಡಿ: ವ್ಯಾಪಕ ಮಳೆಯಿಂದ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್​ (Red Alert) ಘೋಷಿಸಲಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿ (Krishna River) ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇದರಿಂದ ಕರ್ನಾಟಕದ ಚಿಕ್ಕೋಡಿ ತಾಲೂಕಿನ ಕೆಲವು ಗ್ರಾಮಗಳ ರೈತರಲ್ಲಿ ಆತಂಕ ಎದುರಾಗಿದೆ. ಮಾಂಜರಿ, ಯಡೂರು, ಕಲ್ಲೋಳ ಗ್ರಾಮದ ರೈತರಲ್ಲಿ ಆತಂಕ ಎದುರಾಗಿದ್ದು, ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಹೀಗಾಗಿ, ಯಾವಾಗ ಬೇಕಾದರೂ ಕೃಷ್ಣಾ ನದಿಯಲ್ಲಿ ನೀರು ಹೆಚ್ಚಳವಾಗುವ ಸಾಧ್ಯತೆಯಿದೆ.

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಲಿದೆ. ಮಹಾರಾಷ್ಟ್ರ-ಗೋವಾ ಮಾರ್ಗದಲ್ಲಿರುವ ಅಂಬೋಲಿ ಜಲಪಾತ ಮೈತುಂಬಿಕೊಂಡಿದೆ. ಅಂಬೋಲಿ ಫಾಲ್ಸ್ ನೋಡಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದೆ. ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಮಹಾರಾಷ್ಟ್ರದಲ್ಲೂ ಕಳೆದ 24 ಗಂಟೆಗಳಿಂದ ಮಳೆಯಾಗುತ್ತಿದ್ದು, ಮುಂಬೈನಲ್ಲಿ ಸತತ ನಾಲ್ಕನೇ ದಿನವೂ ಮಳೆಯಾಗುತ್ತಿದೆ. ರೈಲ್ವೆ ಹಳಿಯ ಮೇಲೆ ಗೋಡೆ ಕುಸಿದು ಬಿದ್ದ ಪರಿಣಾಮ ಕೇಂದ್ರ ರೈಲ್ವೆ ಮಾರ್ಗದಲ್ಲಿ ಸ್ಥಳೀಯ ರೈಲು ಸಂಚಾರಕ್ಕೆ ತೊಂದರೆಯಾಗಿದೆ.

ಕರ್ನಾಟಕದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ನಿವಾಸಿಗಳನ್ನು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಸ್ಥಳಾಂತರಿಸಬೇಕೆ ಎಂದು ನಿರ್ಣಯಿಸಲು ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ಶಾಲಾ-ಕಾಲೇಜುಗಳಿಗೆ 2 ದಿನಗಳ ರಜೆ ಘೋಷಿಸಲಾಗಿದೆ. ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಇಂದು ಮತ್ತು ಜುಲೈ 9ರಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಸ್ಥಳೀಯ ರಜೆ ಘೋಷಿಸಿದೆ. ಕರಾವಳಿ ಜಿಲ್ಲೆಯ ಜಿಲ್ಲಾಧಿಕಾರಿಗಳ ಆದೇಶದಂತೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದ್ದು, ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ
Karnataka Rain: ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್​; ಕರಾವಳಿ, ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ
ಮಳೆ ಆರ್ಭಟ: ಶುಕ್ರವಾರ ಡಿಸಿಗಳೊಂದಿಗೆ ಸಿಎಂ ಬೊಮ್ಮಾಯಿ ತುರ್ತು ವಿಡಿಯೋ ಸಂವಾದ
Maharashtra Rain: ಮಹಾರಾಷ್ಟ್ರದ ಥಾಣೆಯಲ್ಲಿ ಪ್ರವಾಹ ಭೀತಿ; ಸಿಎಂ ಏಕನಾಥ್ ಶಿಂಧೆ ಮನೆ ಆವರಣಕ್ಕೂ ನುಗ್ಗಿದ ಮಳೆ ನೀರು
Rain Updates: ಭಾರೀ ಮಳೆಯಿಂದ ಮಹಾರಾಷ್ಟ್ರ, ಗೋವಾದ ಜಿಲ್ಲೆಗಳಿಗೆ ರೆಡ್ ಅಲರ್ಟ್​ ಘೋಷಣೆ

ಇದನ್ನೂ ಓದಿ: Karnataka Rains Live Updates: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಹಾಮಳೆ: ನೋಡನೋಡುತ್ತಿದ್ದಂತೆ ಕುಸಿದ ಗುಡ್ಡ

ಮುಂಬೈ ಮಹಾನಗರ ಪಾಲಿಕೆ ಜನರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಕರ್ನಾಟಕದ ಕರಾವಳಿ ಪ್ರದೇಶಗಳು ಮತ್ತು ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸುತ್ತಿದೆ, ಪೀಡಿತ ಪ್ರದೇಶಗಳಲ್ಲಿ ಜೀವ ಮತ್ತು ಆಸ್ತಿಗಳಿಗೆ ಹಾನಿಯಾಗಿದೆ. ದಕ್ಷಿಣ ಕನ್ನಡದ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದಲ್ಲಿ ಬುಧವಾರ ಗುಡ್ಡ ಕುಸಿದು ನಾಲ್ವರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬದುಕುಳಿದಿರುವ ವ್ಯಕ್ತಿಯೊಬ್ಬರು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಕರ್ನಾಟಕ ಮಾತ್ರವಲ್ಲದೆ ಕೊಂಕಣ, ಗೋವಾ, ಗುಜರಾತ್, ಸೌರಾಷ್ಟ್ರ, ಕಚ್ ಮತ್ತು ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ, ವಿದರ್ಭ, ಛತ್ತೀಸ್‌ಗಢ, ರಾಜಸ್ಥಾನ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಕೂಡ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಜಮ್ಮು ಮತ್ತು ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ಟಿಸ್ತಾನ್, ಮುಜಫರಾಬಾದ್, ಪಂಜಾಬ್, ಹರಿಯಾಣ, ಚಂಡೀಗಢ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪಶ್ಚಿಮ ರಾಜಸ್ಥಾನಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಉತ್ತರಾಖಂಡ, ಪಶ್ಚಿಮ ಮಧ್ಯಪ್ರದೇಶ, ಗುಜರಾತ್, ಮಹಾರಾಷ್ಟ್ರ, ಛತ್ತೀಸ್‌ಗಢ, ತೆಲಂಗಾಣ, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain: ಕರ್ನಾಟಕದ 7 ಜಿಲ್ಲೆಗಳಿಗೆ ರೆಡ್ ಅಲರ್ಟ್​; ಕರಾವಳಿ, ಉತ್ತರ ಕರ್ನಾಟಕದಲ್ಲಿ ಪ್ರವಾಹ ಭೀತಿ

ಹಾಗೇ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಆಂಧ್ರ ಪ್ರದೇಶ, ಒಡಿಶಾ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್, ಹಿಮಾಚಲ ಪ್ರದೇಶ, ಲಡಾಖ್‌ನಲ್ಲಿ ಗುಡುಗು ಸಹಿತ ಸಾಕಷ್ಟು ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ. ಪಶ್ಚಿಮ ಬಂಗಾಳ, ಜಾರ್ಖಂಡ್, ಬಿಹಾರ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಯಲಸೀಮಾದಲ್ಲಿ ಗುಡುಗು ಸಹಿತ ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಉತ್ತರ ಪ್ರದೇಶ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

Published On - 11:02 am, Fri, 8 July 22