AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharashtra Rain: ಮಹಾರಾಷ್ಟ್ರದಲ್ಲಿ ಇಂದು ಭಾರಿ ವರ್ಷಧಾರೆ, ರೆಡ್ ಅಲರ್ಟ್​ ಘೋಷಣೆ

ಮಹಾರಾಷ್ಟ್ರದಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್​, ಇನ್ನೂ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Maharashtra Rain: ಮಹಾರಾಷ್ಟ್ರದಲ್ಲಿ ಇಂದು ಭಾರಿ ವರ್ಷಧಾರೆ, ರೆಡ್ ಅಲರ್ಟ್​ ಘೋಷಣೆ
ಮಳೆ-ಸಾಂದರ್ಭಿಕ ಚಿತ್ರImage Credit source: Livemint
ನಯನಾ ರಾಜೀವ್
|

Updated on: Aug 04, 2024 | 10:49 AM

Share

ಮುಂಬೈ, ಪುಣೆ, ಪಾಲ್ಗಢ ಸೇರಿದಂತೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್​ ಘೋಷಿಸಲಾಗಿದೆ. ಮಹಾರಾಷ್ಟ್ರದ ಮುಂಬೈ, ಪಾಲ್ಘರ್, ಪುಣೆ ಮತ್ತು ಸತಾರಾ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಭಾರತೀಯ ಹವಾಮಾನ ಇಲಾಖೆಯು ಆಗಸ್ಟ್ 4 ರಂದು ಪಾಲ್ಗಢ, ಪುಣೆ ಮತ್ತು ಸತಾರಾಕ್ಕೆ ರೆಡ್ ಅಲರ್ಟ್​ ಘೋಷಿಸಲಾಗಿದೆ. ಥಾಣೆ, ಮುಂಬೈ, ರಾಯಗಢ, ಸಿಂಧುದುರ್ಗ ಮತ್ತು ನಾಸಿಕ್‌ಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಶನಿವಾರದಂದು ದೇಶದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆ ಸುರಿದಿದೆ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ.

ಮಧ್ಯಪ್ರದೇಶದಲ್ಲಿ ನಿರಂತರ ಮಳೆಯ ನಂತರ ಮನೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಮತ್ತು ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದಾಗಿ 114 ರಸ್ತೆಗಳನ್ನು ಮುಚ್ಚಲಾಗಿದೆ, ಆದರೆ ಆಗಸ್ಟ್ 7 ರವರೆಗೆ ಭಾರೀ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಮುಂದುವರೆದ ಮಳೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​

ರಾಜ್ಯದ ರಸ್ತೆ ಸಾರಿಗೆ ನಿಗಮವು 82 ಮಾರ್ಗಗಳಲ್ಲಿ ತನ್ನ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಶುಕ್ರವಾರ ಸಂಜೆಯಿಂದ ಜೋಗಿಂದರ್‌ನಗರದಲ್ಲಿ ಅತಿ ಹೆಚ್ಚು 85 ಮಿಮೀ, ಗೋಹರ್ 80 ಮಿಮೀ, ಶಿಲಾರು 76.4 ಮಿಮೀ, ಪೌಂಟಾ ಸಾಹಿಬ್ 67.2 ಮಿಮೀ, ಪಾಲಂಪುರ 57.2 ಮಿಮೀ, ಧರ್ಮಶಾಲಾ 56.2 ಮಿಮೀ ಮತ್ತು ಚೌಪಾಲ್ 52 ಮಿಮೀ ಮಳೆಯಾಗಿದೆ.

ಸ್ಥಳೀಯ ಹವಾಮಾನ ಕಚೇರಿಯು ಹಿಮಾಚಲದಲ್ಲಿ ಆಗಸ್ಟ್ 7 ರವರೆಗೆ ಭಾರೀ ಮಳೆಯ ಹಳದಿ ಎಚ್ಚರಿಕೆಯನ್ನು ನೀಡಿದೆ. ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ 200ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ