ಮುಂಬೈ, ಪುಣೆ, ಪಾಲ್ಗಢ ಸೇರಿದಂತೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಮಹಾರಾಷ್ಟ್ರದ ಮುಂಬೈ, ಪಾಲ್ಘರ್, ಪುಣೆ ಮತ್ತು ಸತಾರಾ ಜಿಲ್ಲೆಗಳಲ್ಲಿ ಭಾನುವಾರ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಭಾರತೀಯ ಹವಾಮಾನ ಇಲಾಖೆಯು ಆಗಸ್ಟ್ 4 ರಂದು ಪಾಲ್ಗಢ, ಪುಣೆ ಮತ್ತು ಸತಾರಾಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಥಾಣೆ, ಮುಂಬೈ, ರಾಯಗಢ, ಸಿಂಧುದುರ್ಗ ಮತ್ತು ನಾಸಿಕ್‌ಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಶನಿವಾರದಂದು ದೇಶದ ಹೆಚ್ಚಿನ ಭಾಗಗಳಲ್ಲಿ ಭಾರೀ ಮಳೆ ಸುರಿದಿದೆ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ನಲ್ಲಿ ಜನಜೀವನ ಅಸ್ತವ್ಯಸ್ಥವಾಗಿದೆ.
ಮಧ್ಯಪ್ರದೇಶದಲ್ಲಿ ನಿರಂತರ ಮಳೆಯ ನಂತರ ಮನೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಮತ್ತು ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದಾಗಿ 114 ರಸ್ತೆಗಳನ್ನು ಮುಚ್ಚಲಾಗಿದೆ, ಆದರೆ ಆಗಸ್ಟ್ 7 ರವರೆಗೆ ಭಾರೀ ಮಳೆ ಮುಂದುವರಿಯುತ್ತದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಮತ್ತಷ್ಟು ಓದಿ: Karnataka Rains: ಕರ್ನಾಟಕದಾದ್ಯಂತ ಮುಂದುವರೆದ ಮಳೆ, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ರಾಜ್ಯದ ರಸ್ತೆ ಸಾರಿಗೆ ನಿಗಮವು 82 ಮಾರ್ಗಗಳಲ್ಲಿ ತನ್ನ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದೆ. ಶುಕ್ರವಾರ ಸಂಜೆಯಿಂದ ಜೋಗಿಂದರ್‌ನಗರದಲ್ಲಿ ಅತಿ ಹೆಚ್ಚು 85 ಮಿಮೀ, ಗೋಹರ್ 80 ಮಿಮೀ, ಶಿಲಾರು 76.4 ಮಿಮೀ, ಪೌಂಟಾ ಸಾಹಿಬ್ 67.2 ಮಿಮೀ, ಪಾಲಂಪುರ 57.2 ಮಿಮೀ, ಧರ್ಮಶಾಲಾ 56.2 ಮಿಮೀ ಮತ್ತು ಚೌಪಾಲ್ 52 ಮಿಮೀ ಮಳೆಯಾಗಿದೆ.
VIDEO | Heavy rain was witnessed along the Mumbai-Pune Expressway earlier today. Visuals from Lonavala-Khandala.
(Full video available on PTI Videos – https://t.co/dv5TRARJn4) pic.twitter.com/dQnnI8d04m
— Press Trust of India (@PTI_News) August 4, 2024
ಸ್ಥಳೀಯ ಹವಾಮಾನ ಕಚೇರಿಯು ಹಿಮಾಚಲದಲ್ಲಿ ಆಗಸ್ಟ್ 7 ರವರೆಗೆ ಭಾರೀ ಮಳೆಯ ಹಳದಿ ಎಚ್ಚರಿಕೆಯನ್ನು ನೀಡಿದೆ. ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ 200ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ