Maharashtra Rains: ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಮುಂಬೈ, ಕೊಂಕಣ ಮಾರ್ಗದ 30 ರೈಲುಗಳ ಸಂಚಾರ ರದ್ದು

| Updated By: ಸುಷ್ಮಾ ಚಕ್ರೆ

Updated on: Jul 23, 2021 | 7:34 PM

ಮುಂಬೈ: ಮಹಾರಾಷ್ಟ್ರದಲ್ಲಿ (Maharashtra Rain)ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಮುಂಬೈ, (Mumbai Rain) ಥಾಣೆ, ಪುಣೆ, ರಾಯಘಡ ಮುಂತಾದ ಜಿಲ್ಲೆಗಳಲ್ಲಿ ಇನ್ನೂ 4-5 ದಿನಗಳ ಕಾಲ ಮಳೆ ಹೆಚ್ಚಾಗುವುದರಿಂದ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ರಾಯಘಡದಲ್ಲಿ (Raigad Landslide) ಇಂದು ಭೂಕುಸಿತ ಉಂಟಾಗಿ 36 ಜನರು ಸಾವನ್ನಪ್ಪಿದ್ದಾರೆ. ರತ್ನಗಿರಿಯಲ್ಲೂ ಭೂಕುಸಿತವಾಗಿ ಮಣ್ಣಿನಡಿ ಹಲವು ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರೆದಿದೆ. ಮಹಾರಾಷ್ಟ್ರದ ಅನೇಕ ಕಡೆ ಗುಡ್ಡ ಕುಸಿದಿರುವುದರಿಂದ 30 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. […]

Maharashtra Rains: ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಮುಂಬೈ, ಕೊಂಕಣ ಮಾರ್ಗದ 30 ರೈಲುಗಳ ಸಂಚಾರ ರದ್ದು
ಕೊಂಕಣ ರೈಲು
Follow us on

ಮುಂಬೈ: ಮಹಾರಾಷ್ಟ್ರದಲ್ಲಿ (Maharashtra Rain)ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಮುಂಬೈ, (Mumbai Rain) ಥಾಣೆ, ಪುಣೆ, ರಾಯಘಡ ಮುಂತಾದ ಜಿಲ್ಲೆಗಳಲ್ಲಿ ಇನ್ನೂ 4-5 ದಿನಗಳ ಕಾಲ ಮಳೆ ಹೆಚ್ಚಾಗುವುದರಿಂದ ರೆಡ್ ಅಲರ್ಟ್ (Red Alert) ಘೋಷಿಸಲಾಗಿದೆ. ರಾಯಘಡದಲ್ಲಿ (Raigad Landslide) ಇಂದು ಭೂಕುಸಿತ ಉಂಟಾಗಿ 36 ಜನರು ಸಾವನ್ನಪ್ಪಿದ್ದಾರೆ. ರತ್ನಗಿರಿಯಲ್ಲೂ ಭೂಕುಸಿತವಾಗಿ ಮಣ್ಣಿನಡಿ ಹಲವು ಸಿಲುಕಿದ್ದಾರೆ. ಅವರನ್ನು ರಕ್ಷಿಸುವ ಕಾರ್ಯಾಚರಣೆ ಮುಂದುವರೆದಿದೆ. ಮಹಾರಾಷ್ಟ್ರದ ಅನೇಕ ಕಡೆ ಗುಡ್ಡ ಕುಸಿದಿರುವುದರಿಂದ 30 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಹಾಗೇ, 12 ರೈಲುಗಳ ಮಾರ್ಗ ಬದಲಾವಣೆ ಮಾಡಿ ಕೇಂದ್ರ ರೈಲ್ವೆ ವಲಯ ಆದೇಶ ಹೊರಡಿಸಿದೆ.

ಭಾರೀ ಮಳೆಯಿಂದ ಮುಂಬೈ, ಕೊಂಕಣ ಭಾಗದ 30 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿದ ಕಾರಣ ಕೊಂಕಣ ರೈಲು ಮಾರ್ಗದಲ್ಲಿ 6,000 ಪ್ರಯಾಣಿಕರು ಸಿಲುಕಿಕೊಂಡಿದ್ದರು. ಹೀಗಾಗಿ, ಇದೀಗ ಈ ಮಾರ್ಗದಲ್ಲಿನ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಮಳೆ ಮತ್ತು ಭೂಕುಸಿತದಿಂದ ಇದುವರೆಗೂ 60 ಜನರು ಸಾವನ್ನಪ್ಪಿದ್ದಾರೆ. ರಾಯಘಡ ಜಿಲ್ಲೆಯೊಂದರಲ್ಲೇ 36 ಜನರು ಸಾವನ್ನಪ್ಪಿದ್ದಾರೆ. ಮುಂಬೈನ ಗೋವಂಡಿ ಪ್ರದೇಶದಲ್ಲಿ ಕಟ್ಟಡ ಕುಸಿದಿದ್ದು ಇದರಲ್ಲಿ 3 ಜನರು ಸಾವನ್ನಪ್ಪಿದ್ದಾರೆ ಮತ್ತು 7 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಬಿಎಂಸಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯ ನಡೆಸಿದ್ದಾರೆ. ಮಹಾರಾಷ್ಟ್ರದ ಮಳೆಯಲ್ಲಿ ಸಿಲುಕಿದವರನ್ನು ರಕ್ಷಿಸಲು 9 ಎನ್​ಡಿಆರ್​ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ.

ಮಹಾರಾಷ್ಟ್ರದ ರಾಯಘಡದ ಭೂಕುಸಿತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ಹೆಚ್ಚುವರಿಯಾಗಿ 2 ಲಕ್ಷ ರೂ. ಪರಿಹಾರ ನೀಡುವುದಾಗಿ ಪ್ರಧಾನಮಂತ್ರಿಗಳ ಕಚೇರಿ ಘೋಷಿಸಿದೆ. ಹಾಗೇ, ಭೂಕುಸಿತದಲ್ಲಿ ಗಾಯಗೊಂಡಿರುವವರಿಗೆ 50 ಸಾವಿರ ರೂ. ನೀಡುವುದಾಗಿ ಘೋಷಿಸಲಾಗಿದೆ.

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು, ತಗ್ಗು ಪ್ರದೇಶದ ಮತ್ತು ಸೂಕ್ಷ್ಮ ವಲಯದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗುತ್ತಿದೆ. ಭೂಕುಸಿತ ಮತ್ತು ಭಾರೀ ಪ್ರವಾಹದಿಂದ ನೂರಾರು ಜನರು ಸಿಲುಕಿಕೊಂಡಿದ್ದು, ಅವರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯಲು ಹೆಲಿಕಾಪ್ಟರ್​ಗಳನ್ನು ಬಳಸಲಾಗುತ್ತಿದೆ. ರಾಯಘಡದಿಂದ ಹೆಲಿಕಾಪ್ಟರ್ ಮೂಲಕ ಜನರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಇದನ್ನೂ ಓದಿ: Mumbai Rains: ಮಹಾರಾಷ್ಟ್ರದ ರಾಯಘಡದಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿ 36 ಜನ ಸಾವು

Karnataka Rains: ಕರ್ನಾಟಕದ ವಿವಿಧೆಡೆ ಮಳೆ ಅಬ್ಬರ: ಉಕ್ಕಿ ಹರಿಯುತ್ತಿವೆ ಹಲವು ನದಿಗಳು, ವಿವಿಧೆಡೆ ರಸ್ತೆ ಸಂಪರ್ಕ ಕಡಿತ, ಗುಡ್ಡಕುಸಿತ

(Maharashtra Rains Live Updates 30 Trains Cancelled 12 Diverted Due to Heavy Rainfall in Mumbai and Konkan Region)