Maharashtra Rains: ಮಹಾರಾಷ್ಟ್ರದಲ್ಲಿ ಮಳೆಯ ರೌದ್ರಾವತಾರ; ರತ್ನಗಿರಿ ಆಸ್ಪತ್ರೆಗೆ ನೀರು ನುಗ್ಗಿ 8 ಕೋವಿಡ್ ರೋಗಿಗಳು ಸಾವು

Maharashtra Flood Updates: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲೂನ್​ನಲ್ಲಿರುವ ಆಸ್ಪತ್ರೆಯೊಳಗೆ ನೀರು ನುಗ್ಗಿ 8 ಕೋವಿಡ್ ರೋಗಿಗಳು ಸಾವನ್ನಪ್ಪಿದ್ದಾರೆ.

Maharashtra Rains: ಮಹಾರಾಷ್ಟ್ರದಲ್ಲಿ ಮಳೆಯ ರೌದ್ರಾವತಾರ; ರತ್ನಗಿರಿ ಆಸ್ಪತ್ರೆಗೆ ನೀರು ನುಗ್ಗಿ 8 ಕೋವಿಡ್ ರೋಗಿಗಳು ಸಾವು
ಪ್ರವಾಹದಿಂದ ಜಲಾವೃತವಾಗಿರುವ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲೂನ್
Follow us
| Updated By: ಸುಷ್ಮಾ ಚಕ್ರೆ

Updated on: Jul 24, 2021 | 2:33 PM

ಮುಂಬೈ: ಮಹಾರಾಷ್ಟ್ರದ ಮಳೆಗೆ (Maharashtra Rain) ಈಗಾಗಲೇ 138 ಜನರು ಪ್ರಾಣ ಕಳೆದುಕೊಂಡಿದ್ದಾರೆ. ದೇಶಾದ್ಯಂತ ಹೆಚ್ಚಾಗುತ್ತಿರುವ ಕೊರೋನಾ ಅಟ್ಟಹಾಸದ (Covid-19 Pandemic) ಜೊತೆಗೆ ಮಳೆಯ ಆರ್ಭಟವೂ ಸೇರಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲೂನ್​ನಲ್ಲಿರುವ ಆಸ್ಪತ್ರೆಯೊಳಗೆ ನೀರು ನುಗ್ಗಿ 8 ಕೋವಿಡ್ ರೋಗಿಗಳು (Covid Patients) ಸಾವನ್ನಪ್ಪಿದ್ದಾರೆ. ಆಸ್ಪತ್ರೆಯೊಳಗೆ ನೀರು ನುಗ್ಗಿದ್ದರಿಂದ ರೋಗಿಗಳಿಗೆ ಸೂಕ್ತವಾದ ಚಿಕಿತ್ಸೆ ಸಿಕ್ಕಿರಲಿಲ್ಲ. ಇದರಿಂದ 8 ರೋಗಿಗಳು ಕೊನೆಯುಸಿರೆಳೆದಿದ್ದಾರೆ.

ರತ್ನಗಿರಿ ಜಿಲ್ಲೆಯ ಚಿಪ್ಲೂನ್ ಎಂಬಲ್ಲಿ ಈ ಘಟನೆ ನಡೆದಿದೆ. ಚಿಪ್ಲೂನ್​ನ ಬಹುತೇಕ ಭಾಗ ಪ್ರವಾಹದ ನೀರಿನಿಂದ ಮುಳುಗಿದೆ. ಮುಂಬೈನಿಂದ 250 ಕಿ.ಮೀ ದೂರದಲ್ಲಿರುವ ಚಿಪ್ಲೂನ್​ನಲ್ಲಿ 70 ಸಾವಿರಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಈ ಪ್ರದೇಶದ ಶೇ. 60ರಷ್ಟು ಭಾಗ ನೀರಿನಿಂದ ಆವೃತವಾಗಿದೆ. ಚಿಪ್ಲೂನ್​ನಿಂದ ನಿನ್ನೆ 500 ಜನರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ರತ್ನಗಿರಿ ಜಿಲ್ಲೆಯಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಎನ್​ಡಿಆರ್​ಎಫ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಮಹಾರಾಷ್ಟ್ರ ರಾಜ್ಯದಲ್ಲಿ ಮಳೆಯಿಂದಾಗಿ ಇದುವರೆಗೂ 138 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ, 90 ಸಾವಿರಕ್ಕೂ ಹೆಚ್ಚು ಜನರು ಪ್ರವಾಹದ ಭೀತಿ ಎದುರಿಸುತ್ತಿದ್ದು, ಅವರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್​ ಮಾಡಲಾಗಿದೆ. ರಾಯಘಡ ಜಿಲ್ಲೆಯೊಂದರಲ್ಲೇ ಭೂಕುಸಿತದಿಂದ 36 ಜನರು ಸಾವನ್ನಪ್ಪಿದ್ದಾರೆ. ಮುಂಬೈನ ಗೋವಂಡಿ ಪ್ರದೇಶದಲ್ಲಿ ಕಟ್ಟಡ ಕುಸಿದಿದ್ದು ಇದರಲ್ಲಿ 3 ಜನರು ಸಾವನ್ನಪ್ಪಿದ್ದಾರೆ ಮತ್ತು 7 ಜನರು ಗಾಯಗೊಂಡಿದ್ದಾರೆ. ಸತಾರ ಜಿಲ್ಲೆಯಲ್ಲಿ ಮಳೆಯಿಂದ 27 ಜನರು ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ಮಳೆಯಲ್ಲಿ ಸಿಲುಕಿದವರನ್ನು ರಕ್ಷಿಸಲು 9 ಎನ್​ಡಿಆರ್​ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಕೊಂಕಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಹದ್​ನಲ್ಲಿ ಭೂಕುಸಿತವಾಗಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿರುವುದರಿಂದ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂದು ಭೂಕುಸಿತವಾದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟಕ್ಕೆ 138 ಮಂದಿ ಸಾವು; ಸುರಕ್ಷಿತ ಸ್ಥಳಕ್ಕೆ 90 ಸಾವಿರ ಜನರು ಶಿಫ್ಟ್​

Maharashtra Rains: ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಮುಂಬೈ, ಕೊಂಕಣ ಮಾರ್ಗದ 30 ರೈಲುಗಳ ಸಂಚಾರ ರದ್ದು

(Maharashtra Rains Updates: 8 Covid patients died in Ratnagiri District Chiplun hospital After Flood)

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್