ಮುಂಬೈ: ಮಹಾರಾಷ್ಟ್ರದ ಮಳೆಗೆ (Maharashtra Rain) ಈಗಾಗಲೇ 138 ಜನರು ಪ್ರಾಣ ಕಳೆದುಕೊಂಡಿದ್ದಾರೆ. ದೇಶಾದ್ಯಂತ ಹೆಚ್ಚಾಗುತ್ತಿರುವ ಕೊರೋನಾ ಅಟ್ಟಹಾಸದ (Covid-19 Pandemic) ಜೊತೆಗೆ ಮಳೆಯ ಆರ್ಭಟವೂ ಸೇರಿರುವುದರಿಂದ ಜನರಲ್ಲಿ ಆತಂಕ ಹೆಚ್ಚಾಗಿದೆ. ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲೂನ್ನಲ್ಲಿರುವ ಆಸ್ಪತ್ರೆಯೊಳಗೆ ನೀರು ನುಗ್ಗಿ 8 ಕೋವಿಡ್ ರೋಗಿಗಳು (Covid Patients) ಸಾವನ್ನಪ್ಪಿದ್ದಾರೆ. ಆಸ್ಪತ್ರೆಯೊಳಗೆ ನೀರು ನುಗ್ಗಿದ್ದರಿಂದ ರೋಗಿಗಳಿಗೆ ಸೂಕ್ತವಾದ ಚಿಕಿತ್ಸೆ ಸಿಕ್ಕಿರಲಿಲ್ಲ. ಇದರಿಂದ 8 ರೋಗಿಗಳು ಕೊನೆಯುಸಿರೆಳೆದಿದ್ದಾರೆ.
ರತ್ನಗಿರಿ ಜಿಲ್ಲೆಯ ಚಿಪ್ಲೂನ್ ಎಂಬಲ್ಲಿ ಈ ಘಟನೆ ನಡೆದಿದೆ. ಚಿಪ್ಲೂನ್ನ ಬಹುತೇಕ ಭಾಗ ಪ್ರವಾಹದ ನೀರಿನಿಂದ ಮುಳುಗಿದೆ. ಮುಂಬೈನಿಂದ 250 ಕಿ.ಮೀ ದೂರದಲ್ಲಿರುವ ಚಿಪ್ಲೂನ್ನಲ್ಲಿ 70 ಸಾವಿರಕ್ಕೂ ಹೆಚ್ಚು ಜನರು ವಾಸವಾಗಿದ್ದಾರೆ. ಈ ಪ್ರದೇಶದ ಶೇ. 60ರಷ್ಟು ಭಾಗ ನೀರಿನಿಂದ ಆವೃತವಾಗಿದೆ. ಚಿಪ್ಲೂನ್ನಿಂದ ನಿನ್ನೆ 500 ಜನರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ರತ್ನಗಿರಿ ಜಿಲ್ಲೆಯಲ್ಲಿ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, ಎನ್ಡಿಆರ್ಎಫ್ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
IAF deployed two Mi-17 helicopters in support of #RatnagiriFloodRelief operations.
One Mi-17 evacuated two stranded people from Chiplun while a second helicopter airlifted 10 @NDRFHQ personnel and load from Mumbai to Ratnagiri. pic.twitter.com/UzPsmgRUXY
— Indian Air Force (@IAF_MCC) July 23, 2021
ಮಹಾರಾಷ್ಟ್ರ ರಾಜ್ಯದಲ್ಲಿ ಮಳೆಯಿಂದಾಗಿ ಇದುವರೆಗೂ 138 ಜನರು ಸಾವನ್ನಪ್ಪಿದ್ದಾರೆ. ಅಲ್ಲದೆ, 90 ಸಾವಿರಕ್ಕೂ ಹೆಚ್ಚು ಜನರು ಪ್ರವಾಹದ ಭೀತಿ ಎದುರಿಸುತ್ತಿದ್ದು, ಅವರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ರಾಯಘಡ ಜಿಲ್ಲೆಯೊಂದರಲ್ಲೇ ಭೂಕುಸಿತದಿಂದ 36 ಜನರು ಸಾವನ್ನಪ್ಪಿದ್ದಾರೆ. ಮುಂಬೈನ ಗೋವಂಡಿ ಪ್ರದೇಶದಲ್ಲಿ ಕಟ್ಟಡ ಕುಸಿದಿದ್ದು ಇದರಲ್ಲಿ 3 ಜನರು ಸಾವನ್ನಪ್ಪಿದ್ದಾರೆ ಮತ್ತು 7 ಜನರು ಗಾಯಗೊಂಡಿದ್ದಾರೆ. ಸತಾರ ಜಿಲ್ಲೆಯಲ್ಲಿ ಮಳೆಯಿಂದ 27 ಜನರು ಸಾವನ್ನಪ್ಪಿದ್ದಾರೆ.
#Maharashtra: Relief, rescue operations underway, Defence forces lending helping hand in flood affected Ratnagiri, Raigad districts.
? #NDRF rescuers undertaking various operations continuously to rescue affected persons at lower Chiplun area. pic.twitter.com/ekCXXah6xs
— All India Radio News (@airnewsalerts) July 24, 2021
ಮಹಾರಾಷ್ಟ್ರದ ಮಳೆಯಲ್ಲಿ ಸಿಲುಕಿದವರನ್ನು ರಕ್ಷಿಸಲು 9 ಎನ್ಡಿಆರ್ಎಫ್ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಕೊಂಕಣ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಹದ್ನಲ್ಲಿ ಭೂಕುಸಿತವಾಗಿ ಅಪಾರ ಆಸ್ತಿಪಾಸ್ತಿ ಹಾನಿಯಾಗಿರುವುದರಿಂದ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಇಂದು ಭೂಕುಸಿತವಾದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟಕ್ಕೆ 138 ಮಂದಿ ಸಾವು; ಸುರಕ್ಷಿತ ಸ್ಥಳಕ್ಕೆ 90 ಸಾವಿರ ಜನರು ಶಿಫ್ಟ್
Maharashtra Rains: ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಮುಂಬೈ, ಕೊಂಕಣ ಮಾರ್ಗದ 30 ರೈಲುಗಳ ಸಂಚಾರ ರದ್ದು
(Maharashtra Rains Updates: 8 Covid patients died in Ratnagiri District Chiplun hospital After Flood)