Maharashtra Rains: ಮಹಾರಾಷ್ಟ್ರದ ಪ್ರವಾಹಕ್ಕೆ 192 ಜನ ಬಲಿ; ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ

Maharashtra Floods: ಮಹಾರಾಷ್ಟ್ರದಲ್ಲಿ ಇನ್ನೂ 3 ದಿನಗಳ ಕಾಲ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Maharashtra Rains: ಮಹಾರಾಷ್ಟ್ರದ ಪ್ರವಾಹಕ್ಕೆ 192 ಜನ ಬಲಿ; ಇನ್ನೂ 3 ದಿನ ಭಾರೀ ಮಳೆ ಸಾಧ್ಯತೆ
ಪ್ರವಾಹದಿಂದ ಜಲಾವೃತವಾಗಿರುವ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಚಿಪ್ಲೂನ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jul 27, 2021 | 3:22 PM

ಮುಂಬೈ: ಮಹಾರಾಷ್ಟ್ರದಲ್ಲಿ ಭಾರೀ (Maharashtra Floods) ಮಳೆಯಾಗುತ್ತಿರುವುದರಿಂದ ಅಪಾರ ನಷ್ಟವಾಗಿದೆ. ಈ ನಡುವೆ ಪ್ರವಾಹ, ಭೂಕುಸಿತದಿಂದಾಗಿ ಮಹಾರಾಷ್ಟ್ರದ 192 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ 25 ಜನರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಇದುವರೆಗೂ ಮಹಾರಾಷ್ಟ್ರ ರಾಜ್ಯದ ನಾನಾ ಭಾಗಗಳಲ್ಲಿ ಸುಮಾರು 3.7 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಕಳೆದ ವರ್ಷಗಳಂತೆ ಈ ಬಾರಿಯೂ ಮಹಾ ಮಳೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ.

ಮಹಾರಾಷ್ಟ್ರದಲ್ಲಿ ಇನ್ನೂ 3 ದಿನಗಳ ಕಾಲ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಂಕಣ, ಗೋವಾ, ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆ ಪ್ರವಾಹದಿಂದ ಅತಿಹೆಚ್ಚು ಹಾನಿಗೀಡಾಗಿದ್ದು, ಬಹುತೇಕ ಎಲ್ಲ ಗ್ರಾಮಗಳ ಜನರನ್ನೂ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರಾಯಘಡ ಜಿಲ್ಲೆಯೊಂದರಲ್ಲೇ 95 ಜನರು ಸಾವನ್ನಪ್ಪಿದ್ದಾರೆ.

ಸೋಮವಾರ ಮತ್ತೆ 28 ಮೃತದೇಹಗಳನ್ನು ಹೊರಗೆಳೆಯುವ ಮೂಲಕ ಮಹಾರಾಷ್ಟ್ರದಲ್ಲಿ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 192ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿಕ ಉಪಮುಖ್ಯಮಂತ್ರಿ ಅಜಿತ್ ಪವಾರ್ ಕೂಡ ಪ್ರವಾಹಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಸಾವನ್ನಪ್ಪಿದವರ ಮತ್ತು ಮನೆ, ಜಮೀನು ಕಳೆದುಕೊಂಡವರಿಗೆ ಇನ್ನೊಂದೆರಡು ದಿನಗಳಲ್ಲಿ ಪರಿಹಾರ ಘೋಷಣೆ ಮಾಡುವುದಾಗಿ ಡಿಸಿಎಂ ತಿಳಿಸಿದ್ದಾರೆ.

ಮಹಾರಾಷ್ಟ್ರ ಮಾತ್ರವಲ್ಲದೆ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಇನ್ನೂ ಮಳೆಯ ಆರ್ಭಟ ನಿಂತಿಲ್ಲ. ಮಧ್ಯಪ್ರದೇಶದಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ. ದೆಹಲಿಯಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶದಲ್ಲಿ ಜುಲೈ 29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದಲ್ಲಿ ಮಳೆಯ ರೌದ್ರಾವತಾರ; ರತ್ನಗಿರಿ ಆಸ್ಪತ್ರೆಗೆ ನೀರು ನುಗ್ಗಿ 8 ಕೋವಿಡ್ ರೋಗಿಗಳು ಸಾವು

Mumbai Rains: ಮಹಾರಾಷ್ಟ್ರದ ರಾಯಘಡದಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿ 36 ಜನ ಸಾವು

(Maharashtra Rains: Maharashtra Floods Death toll rises to 192 More Rain Forecast in Next 3 Days)

Published On - 1:15 pm, Tue, 27 July 21

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ