ಮುಂಬೈ: ಮಹಾರಾಷ್ಟ್ರದಲ್ಲಿ ಭಾರೀ (Maharashtra Floods) ಮಳೆಯಾಗುತ್ತಿರುವುದರಿಂದ ಅಪಾರ ನಷ್ಟವಾಗಿದೆ. ಈ ನಡುವೆ ಪ್ರವಾಹ, ಭೂಕುಸಿತದಿಂದಾಗಿ ಮಹಾರಾಷ್ಟ್ರದ 192 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಇನ್ನೂ 25 ಜನರು ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಇದುವರೆಗೂ ಮಹಾರಾಷ್ಟ್ರ ರಾಜ್ಯದ ನಾನಾ ಭಾಗಗಳಲ್ಲಿ ಸುಮಾರು 3.7 ಲಕ್ಷಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಕಳೆದ ವರ್ಷಗಳಂತೆ ಈ ಬಾರಿಯೂ ಮಹಾ ಮಳೆಗೆ ಮಹಾರಾಷ್ಟ್ರ ತತ್ತರಿಸಿ ಹೋಗಿದೆ.
ಮಹಾರಾಷ್ಟ್ರದಲ್ಲಿ ಇನ್ನೂ 3 ದಿನಗಳ ಕಾಲ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಂಕಣ, ಗೋವಾ, ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆ ಪ್ರವಾಹದಿಂದ ಅತಿಹೆಚ್ಚು ಹಾನಿಗೀಡಾಗಿದ್ದು, ಬಹುತೇಕ ಎಲ್ಲ ಗ್ರಾಮಗಳ ಜನರನ್ನೂ ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. ಮಹಾರಾಷ್ಟ್ರದ ಪಶ್ಚಿಮ ಭಾಗದಲ್ಲಿ ಕೃಷ್ಣಾ ಮತ್ತು ಪಂಚಗಂಗಾ ನದಿಗಳ ನೀರಿನ ಮಟ್ಟ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ರಾಯಘಡ ಜಿಲ್ಲೆಯೊಂದರಲ್ಲೇ 95 ಜನರು ಸಾವನ್ನಪ್ಪಿದ್ದಾರೆ.
राज्यपाल भगतसिंह कोश्यारी यांनी तळीये, ता. महाड, जि. रायगड येथे पूरग्रस्त भागांच्या दौऱ्यामध्ये पत्रकारांशी संवाद साधला
Governor Bhagat Singh Koshyari interacts with members of the media during his visit to the flood hit village of Taliye, Tq. Mahad, Dist Raigad pic.twitter.com/mrWV1AUavf
— Governor of Maharashtra (@maha_governor) July 27, 2021
ಸೋಮವಾರ ಮತ್ತೆ 28 ಮೃತದೇಹಗಳನ್ನು ಹೊರಗೆಳೆಯುವ ಮೂಲಕ ಮಹಾರಾಷ್ಟ್ರದಲ್ಲಿ ಮಳೆಯಿಂದ ಸಾವನ್ನಪ್ಪಿದವರ ಸಂಖ್ಯೆ 192ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬಳಿಕ ಉಪಮುಖ್ಯಮಂತ್ರಿ ಅಜಿತ್ ಪವಾರ್ ಕೂಡ ಪ್ರವಾಹಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದಾರೆ. ಪ್ರವಾಹದಲ್ಲಿ ಸಾವನ್ನಪ್ಪಿದವರ ಮತ್ತು ಮನೆ, ಜಮೀನು ಕಳೆದುಕೊಂಡವರಿಗೆ ಇನ್ನೊಂದೆರಡು ದಿನಗಳಲ್ಲಿ ಪರಿಹಾರ ಘೋಷಣೆ ಮಾಡುವುದಾಗಿ ಡಿಸಿಎಂ ತಿಳಿಸಿದ್ದಾರೆ.
The Gateway of India, this evening. #MumbaiRains pic.twitter.com/DoM5ZYs7KH
— Priti Gandhi – प्रीति गांधी (@MrsGandhi) July 18, 2021
ಮಹಾರಾಷ್ಟ್ರ ಮಾತ್ರವಲ್ಲದೆ ಉತ್ತರ ಭಾರತದ ಅನೇಕ ರಾಜ್ಯಗಳಲ್ಲಿ ಇನ್ನೂ ಮಳೆಯ ಆರ್ಭಟ ನಿಂತಿಲ್ಲ. ಮಧ್ಯಪ್ರದೇಶದಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದೆಹಲಿಯಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಜಮ್ಮು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಂಜಾಬ್, ಹರಿಯಾಣ, ಉತ್ತರ ಪ್ರದೇಶದಲ್ಲಿ ಜುಲೈ 29ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದಲ್ಲಿ ಮಳೆಯ ರೌದ್ರಾವತಾರ; ರತ್ನಗಿರಿ ಆಸ್ಪತ್ರೆಗೆ ನೀರು ನುಗ್ಗಿ 8 ಕೋವಿಡ್ ರೋಗಿಗಳು ಸಾವು
Mumbai Rains: ಮಹಾರಾಷ್ಟ್ರದ ರಾಯಘಡದಲ್ಲಿ ಭಾರೀ ಭೂಕುಸಿತ; ಮಣ್ಣಿನಡಿ ಸಿಲುಕಿ 36 ಜನ ಸಾವು
(Maharashtra Rains: Maharashtra Floods Death toll rises to 192 More Rain Forecast in Next 3 Days)
Published On - 1:15 pm, Tue, 27 July 21