Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಕೊವಿಡ್​ನಂತೆ ಹರಡುತ್ತಿದೆ ಗುಯಿಲಿನ್ ಬ್ಯಾರೆ ಸಿಂಡ್ರೋಮ್‌; ಸಾವಿನ ಸಂಖ್ಯೆ 3ಕ್ಕೆ ಏರಿಕೆ

ಗುಯಿಲಿನ್ ಬ್ಯಾರೆ ಸಿಂಡ್ರೋಮ್ ಒಂದು ಅಪರೂಪದ ನರ ಅಸ್ವಸ್ಥತೆಯಾಗಿದ್ದು, ಇದರಿಂದ ರೋಗನಿರೋಧಕ ವ್ಯವಸ್ಥೆ ನರಮಂಡಲದ ಮೇಲೆ ದಾಳಿ ಮಾಡುತ್ತದೆ. ಆರೋಗ್ಯ ಅಧಿಕಾರಿಗಳ ಸಂಖ್ಯೆಯ ಪ್ರಕಾರ, ಮಹಾರಾಷ್ಟ್ರದಲ್ಲಿ ಜಿಬಿಎಸ್‌ನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಇದುವರೆಗೂ ಪತ್ತೆಯಾದ ಜಿಬಿಎಸ್​ ಪ್ರಕರಣಗಳ ಸಂಖ್ಯೆ 130 ಆಗಿದೆ. ಇದು ಜಿಬಿಎಸ್ ಮುಂದಿನ ಕೊರೊನಾವೈರಸ್​ನಂತೆ ಹರಡುವ ಸಾಧ್ಯತೆಯ ಭೀತಿ ಉಂಟಾಗಿದೆ.

ಮಹಾರಾಷ್ಟ್ರದಲ್ಲಿ ಕೊವಿಡ್​ನಂತೆ ಹರಡುತ್ತಿದೆ ಗುಯಿಲಿನ್ ಬ್ಯಾರೆ ಸಿಂಡ್ರೋಮ್‌; ಸಾವಿನ ಸಂಖ್ಯೆ 3ಕ್ಕೆ ಏರಿಕೆ
Guillain Barre Syndrome
Follow us
ಸುಷ್ಮಾ ಚಕ್ರೆ
|

Updated on: Jan 31, 2025 | 4:30 PM

ಪುಣೆ: ಜಿಬಿಎಸ್ ವೈರಸ್ ಎಂದು ಕರೆಯಲ್ಪಡುವ ಗುಯಿಲಿನ್-ಬ್ಯಾರೆ ಸಿಂಡ್ರೋಮ್‌ನಿಂದಾಗಿ ಮಹಾರಾಷ್ಟ್ರದಲ್ಲಿ ಇಂದು ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಪಿಂಪ್ರಿ-ಚಿಂಚ್‌ವಾಡ್‌ನಲ್ಲಿ 36 ವರ್ಷದ ರೋಗಿಯೊಬ್ಬರು ಈ ಸಿಂಡ್ರೋಮ್‌ನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ, ಪುಣೆಯಲ್ಲಿ ಜಿಬಿಎಸ್ ವೈರಸ್‌ನ ಗರಿಷ್ಠ ಪ್ರಕರಣಗಳು ವರದಿಯಾಗಿದ್ದು, 130 ಜನರಲ್ಲಿ ಇದೇ ರೀತಿಯ ರೋಗ ಪತ್ತೆಯಾಗಿದೆ.

36 ವರ್ಷದ ಓಲಾ ಚಾಲಕನನ್ನು ಜನವರಿ 21ರಂದು ಯಶವಂತರಾವ್ ಚವಾಣ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿಯು ಈ ಸಾವಿಗೆ ಕಾರಣ “ನ್ಯುಮೋನಿಯಾದಿಂದ ಶ್ವಾಸಕೋಶಕ್ಕೆ ಹಾನಿ” ಎಂದು ಹೇಳಿದೆ. ಜಿಬಿಎಸ್ ಸಹ ಇದಕ್ಕೆ ಕಾರಣವಾಗಿದೆ. ಇದುವರೆಗೂ ಗುಯಿಲಿನ್ ಬ್ಯಾರೆ ಸಿಂಡ್ರೋಮ್ (GBS)ನ ಒಟ್ಟು ಪ್ರಕರಣಗಳ ಸಂಖ್ಯೆ 130ಕ್ಕೆ ಏರಿದೆ.

ಇದನ್ನೂ ಓದಿ: ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು: ಕರ್ನಾಟಕ ಸರ್ಕಾರ ಮಹತ್ವದ ಆದೇಶ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಮಹಾನಿರ್ದೇಶಕ ಡಾ. ರಾಜೀವ್ ಬಹ್ಲ್ ಅವರು ತಜ್ಞರ ತಂಡವು ವಿವಿಧ ಮಾದರಿಗಳನ್ನು ಸಂಗ್ರಹಿಸಿರುವುದರಿಂದ ಪ್ರಕರಣಗಳ ತನಿಖೆ ನಡೆಯುತ್ತಿದೆ ಎಂದು ಹೇಳಿದೆ. “ಸೋಂಕಿತರ ಮಲ ಮತ್ತು ರಕ್ತದ ಮಾದರಿಗಳನ್ನು NIV ಪುಣೆ ಪ್ರಯೋಗಾಲಯದಲ್ಲಿ ಪರೀಕ್ಷಿಸಲಾಗುತ್ತಿದೆ. ಆದರೆ, ಅದರ ಹರಡುವಿಕೆಯ ಹಿಂದಿನ ಕಾರಣದ ಬಗ್ಗೆ ಇನ್ನೂ ಯಾವುದೇ ನಿರ್ದಿಷ್ಟ ಸುಳಿವುಗಳು ಸಿಕ್ಕಿಲ್ಲ” ಎಂದು ಡಾ. ಬಹ್ಲ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ