ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ, ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಮುಖ್ಯ ಶಿಕ್ಷಕರು

ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ, ಯಾರು ಮುಟ್ಟಾಗಿದ್ದಾರೆಂದು ತಿಳಿಯಲು ಮುಖ್ಯೋಪಾಧ್ಯಾಯರು ಎಲ್ಲಾ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿರುವ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯೋಪಾಧ್ಯಾಯರು ಹಾಗೂ ಓರ್ವ ಸಹಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕರು ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿ ಯಾರು ಮುಟ್ಟಾಗಿದ್ದಾರೆಂದು ತಿಳಿದುಕೊಳ್ಳಲು ಪ್ರಯತ್ನಿಸಿದ್ದು, ಪೋಷಕರಲ್ಲಿ ಆಕ್ರೋಶವನ್ನುಂಟುಮಾಡಿದೆ.

ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ, ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿದ ಮುಖ್ಯ ಶಿಕ್ಷಕರು
ವಿದ್ಯಾರ್ಥಿನಿಯರು(ಸಾಂದರ್ಭಿಕ ಚಿತ್ರ)
Image Credit source: The News Minute

Updated on: Jul 10, 2025 | 11:24 AM

ಪುಣೆ, ಜುಲೈ 10: ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆ ಕಂಡಿದ್ದಕ್ಕೆ, ಯಾರು ಮುಟ್ಟಾಗಿದ್ದಾರೆಂದು ತಿಳಿಯಲು ಮುಖ್ಯ ಶಿಕ್ಷಕರು ಎಲ್ಲಾ ವಿದ್ಯಾರ್ಥಿನಿಯರ ಬಟ್ಟೆ ಬಿಚ್ಚಿಸಿರುವ ವಿಚಿತ್ರ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯೋಪಾಧ್ಯಾಯರು ಹಾಗೂ ಓರ್ವ ಸಹಾಯಕ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆ ಶಾಲೆಯಲ್ಲಿ ಐದರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲೆಯ ಶೌಚಾಲಯದಲ್ಲಿ ರಕ್ತದ ಕಲೆಗಳು ಕಂಡುಬಂದಿದ್ದವು. ಶಿಕ್ಷಕರು ವಿದ್ಯಾರ್ಥಿನಿಯರನ್ನು ವಿವಸ್ತ್ರಗೊಳಿಸಿ ಯಾರು ಮುಟ್ಟಾಗಿದ್ದಾರೆಂದು ತಿಳಿದುಕೊಳ್ಳಲು ಪ್ರಯತ್ನಿಸಿದ್ದು, ಪೋಷಕರಲ್ಲಿ ಆಕ್ರೋಶವನ್ನುಂಟುಮಾಡಿದೆ.

ಮಂಗಳವಾರ ಘಟನೆ ನಡೆದಿದೆ, ಪ್ರಾಂಶುಪಾಲರು 5 ರಿಂದ 10 ನೇ ತರಗತಿಯ ಹಲವಾರು ವಿದ್ಯಾರ್ಥಿನಿಯರನ್ನು ಶಾಲಾ ಸಭಾಂಗಣಕ್ಕೆ ಕರೆದು ಸ್ನಾನಗೃಹದ ನೆಲದ ಮೇಲೆ ಕಂಡುಬಂದ ರಕ್ತದ ಕಲೆ ಕಂಡುಬಂದಿರುವ ಕುರಿತು ಪ್ರಶ್ನೆಗಳನ್ನು ಕೇಳಿದ್ದರು ಎಂದು ಸಿಬ್ಬಂದಿ ಹೇಳಿದ್ದಾರೆ. ನಂತರ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳನ್ನು ಮುಟ್ಟಾದವರು ಹಾಗೂ ಮುಟ್ಟಾಗದವರು ಹೀಗೆ ಎರಡು ಗುಂಪುಗಳಾಗಿ ವಿಂಗಡಿಸಲು ಹೇಳಿದ್ದರು.

ಮತ್ತಷ್ಟು ಓದಿ: Vaginal Discharge: ಬಿಳಿ ಮುಟ್ಟಿನ ಸಮಸ್ಯೆ ಇದ್ದಲ್ಲಿ ಈ ಆಹಾರ ಸೇವನೆ ಮಾಡಿ

10 ರಿಂದ 12 ವರ್ಷದೊಳಗಿನ ಕೆಲವು ಹುಡುಗಿಯರನ್ನು ಪರೀಕ್ಷಿಸಲು ಒಬ್ಬ ಮಹಿಳಾ ಪ್ಯೂನ್ ಅವರ ಬಳಿ ಕೇಳಲಾಗಿತ್ತು. ತಪಾಸಣೆ ಸಮಯದಲ್ಲಿ ಪ್ಯೂನ್ ಆಕೆಯ ಒಳ ಉಡುಪು ಮುಟ್ಟಿದಾಗ ಆಕೆ ಪ್ಯಾಡ್ ಹಾಕಿದ್ದಳು. ಆದರೆ ಮುಟ್ಟಾಗಿಲ್ಲ ಎಂದು ಹೇಳಿಕೊಂಡಿದ್ದಳು. ಆಕೆಯನ್ನು ಇತರೆ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಮುಂದೆ ಅವಮಾನಿಸಿದ್ದಾರೆ.

ಶಾಲಾ ಪ್ರಾಂಶುಪಾಲರು, ಒಬ್ಬ ಪಿಯೋನ್, ಇಬ್ಬರು ಶಿಕ್ಷಕರು ಮತ್ತು ಇಬ್ಬರು ಟ್ರಸ್ಟಿಗಳು ಸೇರಿದಂತೆ ಆರು ಜನರ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಶಾಲೆಯ ಪ್ರಾಂಶುಪಾಲರು ಮತ್ತು ಪ್ಯೂನ್ ಬಂಧಿಸಲಾಗಿದ್ದು, ಉಳಿದ ನಾಲ್ವರ ವಿರುದ್ಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಪ್ರಕರಣದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಒಬ್ಬ ಪ್ಯೂನ್ ಅವರನ್ನು ಬಂಧಿಸಲಾಗಿದ್ದು, ಉಳಿದವರ ವಿರುದ್ಧ ತನಿಖೆ ಮುಂದುವರೆದಿದೆ ಎಂದು ಮಹಾರಾಷ್ಟ್ರ ಪೊಲೀಸರ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:51 am, Thu, 10 July 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us