ಥಾಣೆಯ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ; ಶಿವಸೇನಾ ಕಾರ್ಪೊರೇಟರ್ ಬಂಧನ

ಶಾಸ್ತ್ರಿನಗರ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿವಸೇನಾ ಕಾರ್ಪೋರೇಟರ್ ರಮೇಶ್ ಮ್ಹಾತ್ರೆ ಅವರನ್ನು ವಿಷ್ಣುನಗರ ಪೊಲೀಸರು ಇಂದು ಬಂಧಿಸಿದ್ದಾರೆ. ಇದಕ್ಕೂ ಮುನ್ನ, ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಅವರ ಮೂವರು ಸಹಚರರನ್ನು ಬಂಧಿಸಿದ್ದರು. 9 ತಿಂಗಳ ಗರ್ಭಿಣಿಯೊಬ್ಬರಿಗೆ ಹೆರಿಗೆಗೆ ಸಂಬಂಧಿಸಿದ ಗಂಭೀರ ತೊಂದರೆಗಳು ಕಾಣಿಸಿಕೊಂಡಾಗ ಆಸ್ಪತ್ರೆಯ ಸಿಬ್ಬಂದಿ ನವಜಾತ ಶಿಶು ಮತ್ತು ಆ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಅವರ ಕುಟುಂಬಕ್ಕೆ ಸಲಹೆ ನೀಡಿದ್ದರು. ಇದನ್ನು ವಿರೋಧಿಸಿ ಕಾರ್ಪೋರೇಟರ್ ರಮೇಶ್ ಮ್ಹಾತ್ರೆ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಥಾಣೆಯ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ; ಶಿವಸೇನಾ ಕಾರ್ಪೊರೇಟರ್ ಬಂಧನ
Ramesh Mhatre Attack

Updated on: Jul 08, 2026 | 7:34 PM

ಥಾಣೆ, ಜುಲೈ 8: ಕಲ್ಯಾಣ್-ಡೊಂಬಿವ್ಲಿ ಮುನ್ಸಿಪಲ್ ಕಾರ್ಪೊರೇಷನ್ (KDMC) ವ್ಯಾಪ್ತಿಯ ಶಾಸ್ತ್ರಿನಗರ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿವಸೇನಾ ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ಅವರನ್ನು ಬಂಧಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ರಮೇಶ್ ಮ್ಹಾತ್ರೆ ಸೇರಿ 6 ಜನರ ವಿರುದ್ಧ ಪೊಲೀಸ್ ಮೊಕದ್ದಮೆ ದಾಖಲಾದ ಬೆನ್ನಲ್ಲೇ ಈ ಬಂಧನ ನಡೆದಿದೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮುನ್ಸಿಪಲ್ ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದರ ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಮತ್ತೊಂದು ಸುಸಜ್ಜಿತ ಆಸ್ಪತ್ರೆಗೆ ಕರೆದುಕೊಂಡು ಹೋಗಲು ವೈದ್ಯರು ಪೋಷಕರಿಗೆ ಸಲಹೆ ನೀಡಿದ್ದರು. ಈ ವಿಷಯದಿಂದ ವೈದ್ಯರು ಮತ್ತು ಮಗುವಿನ ಕುಟುಂಬಸ್ಥರ ನಡುವೆ ವಾಗ್ವಾದ ಉಂಟಾಗಿತ್ತು. ಇದಾದ ಬಳಿಕ ಈ ವಿಷಯಕ್ಕೆ ವೈದ್ಯರು ಮತ್ತು ಆಸ್ಪತ್ರೆಯ ನೌಕರರ ಮೇಲೆ ದೈಹಿಕ ಹಲ್ಲೆ ನಡೆದಿತ್ತು. ನಿನ್ನೆ ಸಂಜೆ ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ವಿವಾದ ಭುಗಿಲೆದ್ದಿತ್ತು.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಶಿವಸೇನೆ ಹೈಡ್ರಾಮಾ; ಶಿಂಧೆ ಬಣ ಸೇರಲು ಸಜ್ಜಾದ 6 ಬಂಡಾಯ ಸಂಸದರು

ಈ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವೈದ್ಯರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದರು. ಪೊಲೀಸರ ಪ್ರಕಾರ, ಶಿವಸೇನೆ ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ಮತ್ತು ಅವರ ಬೆಂಬಲಿಗರು ಇಬ್ಬರೂ ವೈದ್ಯರು ಮತ್ತು ಇತರ ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಸಾರ್ವಜನಿಕರ ಹೆಚ್ಚುತ್ತಿರುವ ಒತ್ತಡ ಮತ್ತು ಭಾರತೀಯ ವೈದ್ಯಕೀಯ ಮಂಡಳಿಯು (IMA) ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಪೊಲೀಸರು ಇಂದು ರಾತ್ರಿ ರಮೇಶ್ ಮ್ಹಾತ್ರೆ ಮತ್ತು ಇತರ ಐವರ ವಿರುದ್ಧ ಪ್ರಕರಣ ದಾಖಲಿಸಿದ್ದರು. ತಕ್ಷಣವೇ ಕಾನೂನು ಕ್ರಮ ಕೈಗೊಳ್ಳದಿದ್ದರೆ ಈ ಭಾಗದಾದ್ಯಂತ ಕ್ಲಿನಿಕ್ ಮತ್ತು ಆಸ್ಪತ್ರೆಗಳನ್ನು ಮುಚ್ಚಲಾಗುವುದು ಎಂದು ಐಎಂಎ ಎಚ್ಚರಿಕೆ ನೀಡಿತ್ತು.

ಇದನ್ನೂ ಓದಿ: ಈಗ ಉಳಿದಿರುವುದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮಾತ್ರ; ಉದ್ಧವ್ ಠಾಕ್ರೆಗೆ ಅಮಿತ್ ಶಾ ಟಾಂಗ್

ಈ ಘಟನೆಗೆ ಕಾರಣ ಕೇಳಿ ಶಿವಸೇನಾ ಪಕ್ಷ ಕಾರ್ಪೋರೇಟರ್ ರಮೇಶ್ ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಪೊಲೀಸರು ರಮೇಶ್ ಮ್ಹಾತ್ರೆ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 132 ಮತ್ತು 121(1) ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದ ಉಳಿದ ಮೂವರು ಸಹ-ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
Loading...
Unable to load recommendations.
Follow Us